24 ನೇ ಜೂನ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ತುಮಕೂರು, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಮುನ್ಸೂಚನೆ:
ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್; ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
24 ನೇ ಜೂನ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.