News

ಉತ್ತರ ಕರ್ನಾಟಕದ ಈ ಭಾಗಗಳಲ್ಲಿ ನಾಳೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

21 July, 2023 9:53 AM IST By: Maltesh
Rain likely tomorrow in these parts of North Karnataka:

22 ನೇ ಜುಲೈ 2023 ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ ಮುಂದಿನ 24 ಘಂಟೆಗಳು: ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ : ಮುಂದಿನ 24 ಘಂಟೆಗಳು: ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ; ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರ್ಗಿ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ; ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಒಳನಾಡಿನಲ್ಲಿ ಘಂಟೆಗೆ 40-50 ಕಿ.ಮೀ. ಮತ್ತು ಕರಾವಳಿಯಲ್ಲಿ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

22 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತು ಸುತ್ತಮುತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲೆ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲೆ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.