1. ಸುದ್ದಿಗಳು

ಮಳೆ ವರದಿ; ಅಕ್ಟೋಬರ್‌ 2ರ ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ!

Kalmesh T
Kalmesh T
Rain report; Heavy rain warning in most districts of the state till October 2!

ಭಾರತೀಯ ಹವಾಮಾನ ಇಲಾಖೆಯ ಸೂಚನೆಯ ಪ್ರಕಾರ ಇನ್ನೂ ಮುಂದಿನ ಅಕ್ಟೋಬರ್‌ 2ರವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿರಿ: 11 ಕೋಟಿಗೂ ಹೆಚ್ಚು ರೈತರ ಖಾತೆಗೆ ಈ ದಿನ ಬರಲಿದೆ ಪಿಎಂ ಕಿಸಾನ್‌ 12ನೇ ಕಂತಿನ ಹಣ!

Rain Report: ಬಂಗಾಳಕೊಲ್ಲಿಯಲ್ಲಿ ಉಂಟಾದ ಮೇಲ್ಳೈ ಸುಳಿಗಾಳಿಯಿಂದ ಕರ್ನಾಟಕ (Karnataka) ರಾಜ್ಯದಲ್ಲಿ ಮಳೆಯಾಗುವ (Rain) ಸಾಧ್ಯತೆಗಳು ಹೆಚ್ಚಿವೆ. ಉತ್ತರ ಭಾಗ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ  ಬಿರುಸಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕೂಡ ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಇವತ್ತು ಕೂಡ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಮಳೆಯ ಅಬ್ಬರ ಈಗಾಗಲೇ ಮತ್ತೆ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಹವಾಮಾನದಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವಾರು ಜಿಲ್ಲೆಯಗಳಲ್ಲೂ ಮತ್ತೆ ಮಳೆಯಾಗುತ್ತಿದೆ.

7ನೇ ವೇತನ ಆಯೋಗ: 48 ಲಕ್ಷ ನೌಕರರಿಗೆ ದೀಪಾವಳಿ ನಿಮಿತ್ತ ಇಲ್ಲಿದೆ ಸಿಹಿಸುದ್ದಿ!

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಅ. 2ರವರೆಗೂ ಮಳೆಯಾಗಲಿದೆ. ಬೆಳಗಾವಿ, ಹಾವೇರಿ, ಬಾಗಲಕೋಟೆ, ಗದಗ, ಯಾದಗಿರಿ, ಕೊಪ್ಪಳದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ಬಹುತೇಕ ಎಲ್ಲ ಕಡೆಗಳಲ್ಲಿ ಕಳೆದ 2 ವಾರದಿಂದ ಮಳೆ ಸಂಪೂರ್ಣವಾಗಿ ಕಡಿಮೆಯಾಗಿತ್ತು. ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆ, ಚಳಿ ವಾತಾವರಣ ಕಂಡು ಬರುತ್ತಿದೆ. ಈ ಸುಳಿಗಾಳಿಯು ಒಡಿಶಾ ಕರಾವಳಿ ಮಾರ್ಗವಾಗಿ ಸಾಗಲಿದೆ. ಹೀಗಾಗಿ ಇಂದು ಕರ್ನಾಟಕದ ಹಲವೆಡೆ ಮಳೆಯಾಗಬಹುದು.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಿದೆ. ಈ ಪ್ರದೇಶಗಳಲ್ಲಿ ಇಂದು ಕೂಡ ಮಳೆ ಆಗಲಿದೆ.

Recruitment: ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ನೇಮಕಾತಿ, 42,000 ಸಂಬಳ!

ಆದರೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿಯಲಿದೆ. ಭಾಗದಲ್ಲಿ ಸಾಧಾರಣವಾಗಿ ಕೆಲವೊಮ್ಮೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಹ ತುಂತುರು ಮಳೆಯಾಗಬಹುದು. ಬೆಳಗಾವಿ, ಹಾವೇರಿ, ಬಾಗಲಕೋಟೆ, ಹಾವೇರಿ, ಗದಗ, ಯಾದಗಿರಿ, ಕೊಪ್ಪಳದಲ್ಲೂ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆಗಳು ದಟ್ಟವಾಗಿವೆ. ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಗಳಿವೆ.

ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕಲಬುರ್ಗಿ, ಬೀದರ್, ರಾಯಚೂರು, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  

Published On: 30 September 2022, 10:28 AM English Summary: Rain report; Heavy rain warning in most districts of the state till October 2!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.