ನೈರುತ್ಯ ಮುಂಗಾರು ಚುರುಕಾಗಿದ್ದು,: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂನ್ 30 ಮತ್ತು ಜುಲೈ 1ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಗೆ ಹವಾಮಾನ ಇಲಾಖೆಯು ಜುಲೈ 2 ರವರೆಗೆ ಆರೇಂಜ್ ಅಲರ್ಟ್ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಜುಲೈ 1ರವರೆಗೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಜುಲೈ 3 ಮತ್ತು 4 ರಂದು ಯಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗ
ಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಎರಡೂ ದಿನಗಳವರೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಜುಲೈ 4 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ. ಉತ್ತರ ಒಳನಾಡಿನಲ್ಲಿ ಮುಂದಿನ 48 ಗಂಟೆಯವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ.