ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹುಲಿ ಸಂರಕ್ಷಿತ ಪ್ರದೇಶದಿಂದ ರೈಲು ಹಳಿ ಸ್ಥಳಾಂತರ: ವನ್ಯಜೀವಿ ರಕ್ಷಣೆಗೆ ಆದ್ಯತೆ
ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಹವಾಮಾನ ಬದಲಾವಣೆಯಾಗಿದ್ದು, ಅಲ್ಲಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣವಿದ್ದರೂ ಸಹ ಯಾವುದೇ ಬದಲಾವಣೆ ಆಗಿರಲಿಲ್ಲ.
ಇನ್ನು ಕೆಲವು ಕಡೆ ತುಂತುರು ಮಳೆಯಾಗುತ್ತಿದೆ. ಮಾರ್ಚ್ ಎರಡನೇ ವಾರದಲ್ಲಿ ರಾಜ್ಯದ ಬಹುತೇಕ ಮಳೆಯಾಗಿತ್ತು. ಇದೀಗ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆರೋಗ್ಯದ ಜೊತೆಗೆ ಅಂದವನ್ನು ಹೆಚ್ಚಿಸುವ ಅಲೋವೆರಾ!
ಅಂತೆಯೇ ಇಂದಿನಿಂದ 3ರಿಂದ 4 ದಿನಗಳ ಕಾಲ ರಾಜ್ಯದಲ್ಲಿ ಮಳೆ ಆಗುವ ಸಾಧ್ಯತೆಗಳು ಇವೆ ಎಂದು ಹವಾಮಾನ ಇಲಾಖೆ ಸೂಚನೆ ಕೂಡ ನೀಡಿದೆ.
ಆದ್ದರಿಂದ ರಾಜ್ಯದ ಜನತೆ ಹಾಗೂ ರೈತರು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ತಿಳಿಸಲಾಗಿದೆ.
ಆರೋಗ್ಯಕ್ಕೂ ಸೈ…ಅಂದಕ್ಕೂ ಸೈ… ಬಹುಪಯೋಗಿ ಪಪ್ಪಾಯ ಹಣ್ಣು!
ರಾಜ್ಯದ ಯಾವ ಯಾವ ಭಾಗದಲ್ಲಿ ಆಗಲಿದೆ ಮಳೆ?
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕೊಡಗು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಭಾಗಗಳಲ್ಲಿ ಮೂರು ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.
ಉಳಿದಂತೆ ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ದಾಖಲಾಗಲಿದೆ.
ಈ ಬೇಸಿಗೆಯಲ್ಲಿ ನಿಮ್ಮ ದೇಹವನ್ನು ಆರೋಗ್ಯವಾಗಿಡಲು ಈಗಲೇ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿ
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸರಾಸರಿ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ಗಳಷ್ಟು ಕಡಿಮೆಯಾಗಲಿದೆ.
ಕಲಬುರಗಿ, ರಾಯಚೂರು, ಬೀದರ್, ಯಾದಗಿರಿ, ವಿಜಯಪುರ ಮತ್ತು ಬಳ್ಳಾರಿಯಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ದಾಖಲಾಗಲಿದೆ.
ಚಿಕ್ಕಮಗಳೂರು ಮತ್ತು ಹಾಸನ, ಶಿವಮೊಗ್ಗ ಮಲೆನಾಡು ಭಾಗದಲ್ಲಿ ಸಣ್ಣ ಮಳೆ ಆರಂಭಗೊಂಡಿದೆ.