ರಾಜ್ಯದ ಹಲವು ಭಾಗಗಳಲ್ಲಿ ಚಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು ತಾಪಮಾನದಲ್ಲಿ ಭಾರೀ ಬದಲಾವಣೆಯಾಗಿದೆ.
ಚಳಿಯ ಜೊತೆ ರಾಜ್ಯದ ಅಲ್ಲಲ್ಲಿ ನಾಳೆ ಮಳೆ ಬೀಳುವ ಸಾಧ್ಯತೆಗಳನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ಲೇಖನದಲ್ಲಿ ನಾಳೆ ರಾಜ್ಯದಲ್ಲಿ ಹವಾಮಾನ ವರದಿ ಹೇಗೆದೆ ಎಂಬುದನ್ನು ನೀಡಲಾಗಿದೆ.
18 ನೇ ಡಿಸೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದಲ್ಲಿ ಹವಾಮಾನ ಹೇಗಿದೆ?
ಮುಂದಿನ 24 ಗಂಟೆಗಳು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಬೀಳುವ ಬಹಳಷ್ಟು ಸಂಭವ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಂಭವ ಇದೆ.
ಕೃಷಿ ಸಾಲಕ್ಕೆ CIBIL ಸ್ಕೋರ್ ಎಷ್ಟಿರಬೇಕು?
ಮುಂದಿನ 48 ಗಂಟೆಗಳು: ರಾಜ್ಯದ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಬೀಳುವ ಬಹಳಷ್ಟು ಸಂಭವ ಇದೆ. ಇನ್ನು ಮುಂದಿನ 48 ಗಂಟೆಗಳು ರಾಜ್ಯದ ಯಾವುದೇ ಭಾಗದಲ್ಲಿ ಗುಡುಗು ಮುನ್ನೆಚ್ಚರಿಕೆ, ಭಾರಿ ಮಳೆ ಮುನ್ನೆಚ್ಚರಿಕೆ, ತಾಪಮಾನ ಎಚ್ಚರಿಕೆ, ಮೀನುಗಾರರಿಗೆ ಎಚ್ಚರಿಕೆ ಇಲ್ಲವೆಂದು ಹವಾಮಾನ ಇಲಾಖೆ ತಿಳಿಸಿದೆ.
18 ನೇ ಡಿಸೆಂಬರ್ 2023 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: : ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ /ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಅತಿ ಹಗುರ ಮಳೆ ಬೀಳುವ ಸಂಭವವಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮೊದಲ ಬಾರಿ ಶಾಸಕನಾದ ರೈತನ ಮಗನಿಗೆ ರಾಜಸ್ಥಾನ ಸಿಎಂ ಪಟ್ಟ! ಯಾರಿದು ಭಜನ್‌ಲಾಲ್ ಶರ್ಮಾ?
ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ /ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಅತಿ ಹಗುರ ಮಳೆ ಬೀಳುವ ಸಂಭವವಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿವೆ.