1. ಸುದ್ದಿಗಳು

ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

Hitesh
Hitesh

ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಮಳೆ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಪಣಂಬೂರು ಹಾಗೂ ಬೆಳ್ತಂಗಡಿಯಲ್ಲಿ ತಲಾ

ಎರಡು ಸೆಂ.ಮೀ ಮಳೆ ಆಗಿರುವುದು ವರದಿ ಆಗಿದೆ.
ಸೋಮವಾರ ಹಾಗೂ ಮಂಗಳವಾರ ಕರಾವಳಿಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ

ಗುಡುಗಿನಿಂದ ಕೂಡಿದ ಮಳೆ ಆಗುವ ಸಾಧ್ಯತೆ ಇದೆ. ಒಂದೆರಡು ಕಡೆ ಹಗುರ ಮಳೆ ಆಗುವ ಸಾಧ್ಯತೆ ಇದೆ.

ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ ಇರಲಿದೆ

ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  
------  

ಕಾಡಾನೆ ದಾಳಿ ಸಂತ್ರಸ್ತ ಕುಟುಂಬಕ್ಕೆ 15 ಲಕ್ಷ ಪರಿಹಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ನೀಡುವ ಪರಿಹಾರ ಮೊತ್ತವನ್ನು

7.5 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಆನೆಗಳ ಹಾವಳಿಯನ್ನು ತಪ್ಪಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿ ಪ್ರತ್ಯೇಕ ಉಪ ಅರಣ್ಯ

ಸಂರಕ್ಷಣಾಧಿಕಾರಿ ಹಾಗೂ 50 ಜನರನ್ನು ಒಳಗೊಂಡ ದಳ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.  
------  
Heavy Rain ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ವಿವಿಧೆಡೆ ಮೂರು ದಿನ ಮಳೆ

basavaraj bommai

ಭತ್ತ, ರಾಗಿ ಖರೀದಿ ಕೇಂದ್ರ ಪ್ರಾರಂಭಿಸಲು ಶಾಸಕ ದಿನೇಶ್‌ ಆಗ್ರಹ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ಸ್ಥಾಪಿಸಬೇಕು 

ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಆಗ್ರಹಿಸಿದ್ದಾರೆ.

ಅಲ್ಲದೇ ಬೆಳೆ ಮಾರಾಟ ಮಿತಿ ತೆಗೆದುಹಾಕಬೇಕು ಎಂದಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ 81,459 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿದೆ.

50 ಲಕ್ಷ ಕ್ವಿಂಟಲ್ ಉತ್ಪಾದನೆ ಆಗಿದೆ ಎಂದು ಅಂದಾಜಿಸಲಾಗಿದೆ.

ಆದರೆ, ಸರ್ಕಾರ ಈವರೆಗೂ ಖರೀದಿ ಕೇಂದ್ರ ಆರಂಭ ಅಥವಾ ಬೆಂಬಲ ಬೆಲೆ ನಿಗದಿ ಬಗ್ಗೆ ಆಗಲಿ,

ಒಬ್ಬ ರೈತನಿಂದ ಎಷ್ಟು ಕ್ವಿಂಟಲ್ ಭತ್ತ ಖರೀದಿಸಲಾಗುತ್ತದೆ ಎಂಬುದನ್ನು ತಿಳಿಸಿಲ್ಲ ಎಂದಿದ್ದಾರೆ.  
------    

 ದೇಶದಲ್ಲಿ ಹಿಂಗಾರು ಬಿತ್ತನೆ ಹೆಚ್ಚಳ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಾದ ಮಂಡೆಕೋಲ್‌ ಗ್ರಾಮದಲ್ಲಿ ಸುಳ್ಯ ಮಹಾಶಿರ್‌ ಮತ್ಸ್ಯ ರೈತ ಉತ್ಪಾದಕ ಕಂಪನಿ

ಮತ್ತು ಮೀನುಗಾರಿಕೆ ಇಲಾಖೆ ಸಹಯೋಗದಲ್ಲಿ ಒಳನಾಡು ಮೀನುಗಾರಿಕೆ ಅವಕಾಶಗಳ ಕುರಿತು ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದಲ್ಲಿ ಮೀನುಗಾರಿಕೆ ಅವಕಾಶಗಳು ಹಾಗೂ ಇಲಾಖೆಯ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಾಯಿತು.
ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ ತೀರ್ಥರಾಮ್‌,

ಮೀನುಗಾರಿಕೆ ಜಂಟಿ ನಿರ್ದೇಶಕ ಹರೀಶ್‌ ಕುಮಾರ್‌, ಮೀನುಗಾರಿಕೆ ಉಪ ನಿರ್ದೇಶಕರಾದ ಡಾ. ಸುಶ್ಮಿತಾ ರಾವ್‌ ಸೇರಿದಂತೆ ಹಲವರು ಇದ್ದರು.
------
ಹೆಸರುಬೆಳೆ ಖರೀದಿಯಲ್ಲಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಯುವ ರೈತರು ಅಸಮಾಧನ ವ್ಯಕ್ತಪಡಿಸಿದ್ದಾರೆ.
ಅತಿವೃಷ್ಟಿ, ಕೀಟದ ಹಾವಳಿಯಿಂದಾಗಿ ಮುಂಗಾರಿನ ಪ್ರಮುಖ ಬೆಳೆಯಾದ ಹೆಸರಿಗೆ ಹಾನಿಯಾಗಿದೆ.

ಆದರೆ, ಸರ್ಕಾರ ಖರೀದಿ ಕೇಂದ್ರವನ್ನೂ ಪ್ರಾರಂಭಿಸಿಲ್ಲ. ಮಳೆಯಿಂದ ರೈತರು ಸಿಕ್ಕ ಬೆಲೆಗೆ ಮಾರಾಟ ಮಾಡಿದ್ದಾರೆ

ಎಂದು ಧಾರವಾಡದ ಯರಗುಪ್ಪಿ ಯುವ ರೈತ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಮೆಯಿಂದ ಸೂಕ್ತ ಪರಿಹಾರ ಸಿಕ್ಕಿತು ಎನ್ನುವ ನಿರೀಕ್ಷೆಯೂ ಈಡೇರಿಲ್ಲ. ಮುಂಗಾರು ಹಂಗಾಮಿನ

ಮಧ್ಯಂತರ ಬೆಳೆ ವಿಮೆಯಲ್ಲೂ ಹೆಸರು ಬೆಳೆ ಬೆಳೆದ ರೈತರಿಗೆ ಅನ್ಯಾಯವಾಗಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಪರಿಹಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
------
ಜಗತ್ತಿನಲ್ಲೇ ಸುಲಭ ಸಂವಹನ ಮಾಧ್ಯಮವಾಗಿರುವ ವಾಟ್ಸ್‌ ಆ್ಯಪ್‌ನ 50 ಕೋಟಿ ಬಳೆಕೆದಾರರ

ಮಾಹಿತಿ ಸೋರಿಕೆ ಆಗಿರುವುದು ಬೆಳಕಿಗೆ ಬಂದಿದೆ.

ಹ್ಯಾಕಿಂಗ್‌ ವೇದಿಕೆಯೊಂದು 50 ಕೋಟಿ ಬಳೆಕೆದಾರ ಮಾಹಿತಿ ಇರುವುದಾಗಿ ಜಾಹೀರಾತು ನೀಡಿದೆ ಎಂದು ಸೈಬರ್‌ನ್ಯೂಸ್‌ ವರದಿ ಮಾಡಿದೆ. 

ಇದರಲ್ಲಿ ಅಮೆರಿಕಾ, ಇಟಲಿ, ಫ್ರಾನ್ಸ್‌ ಸೇರಿದಂತೆ ಪ್ರಮುಖ ದೇಶಗಳ ಬಳಕೆದಾರರ ಮಾಹಿತಿಯೂ ಒಳಗೊಂಡಿದೆ.

ಕಳೆದ ವರ್ಷ ಫೇಸ್‌ಬುಕ್‌ ಬಳಕೆದಾರರ ಮಾಹಿತಿ ಸೋರಿಕೆಯಾಗಿರುವುದು ವರದಿ ಆಗಿತ್ತು.    
------
 ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗಕ್ಕೆ ನಿರ್ದಿಷ್ಟ ಔಷಧಿ ನೀಡುವಂತೆ ರೈತರು ಆಗ್ರಹಿಸಿದ್ದಾರೆ. 

ಕಲ್ಲಂಗಡಿ ಹಣ್ಣು ಹಾಗೂ ತರಕಾರಿ ಬೆಳೆಗೆ ಹೊಡೆಯುವ ಸಾಫ್ ಔಷಧವನ್ನೇ ಎಲೆಚುಕ್ಕಿ ರೋಗಕ್ಕೂ ಶಿಫಾರಸ್ಸು ಮಾಡಲಾಗುತ್ತಿದೆ.

ಇದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ತೀರ್ಥಹಳ್ಳಿ ತಾಲ್ಲೂಕಿನ ಉಂಟೂರು

ಗ್ರಾಮದ ಅಡಿಕೆ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   

Published On: 28 November 2022, 02:42 PM English Summary: Rainfall in various parts of the state including the coast

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.