1 ಲಕ್ಷ ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯನ್ನು ಇದೇ ವರ್ಷ ವಿತರಿಸುವ ಗುರಿಯನ್ನು ಹೊಂದಿದ್ದು, ಇದಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿರಿ: ಮೀನುಗಾರರಿಗೆ ಭರ್ಜರಿ ಸುದ್ದಿ ನೀಡಿದ ಸಿಎಂ, 3 ಲಕ್ಷ ಸಹಾಯಧನ ಘೋಷಣೆ!
ರೈತ ವಿದ್ಯಾನಿಧಿ ಯೋಜನೆಯನ್ನು 14 ಲಕ್ಷ ಜನ ರೈತಮಕ್ಕಳಿಗೆ ವಿದ್ಯಾನಿಧಿ ಕೊಡುತ್ತಿದ್ದೇವೆ. ರೈತಕೂಲಿಕಾರರು, ಮೀನುಗಾರರು, ನೇಕಾರರು, ಕಾರ್ಮಿಕರು, ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗಿದೆ.
ಈಗಾಗಲೇ 1 ಲಕ್ಷ ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಇದೇ ವರ್ಷ ವಿತರಿಸುವ ಗುರಿಯನ್ನು ಹೊಂದಿದ್ದು, ಇದಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದರು.
ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ
ಮೀನುಗಾರಿಕೆ, ಮೀನು ಆಹಾರ ಉತ್ಪಾದನೆ, ಮಾರುಕಟ್ಟೆ ವ್ಯವಸ್ಥೆ, ರಫ್ತು, ಸ್ಥಳೀಯ ಮಾರುಕಟ್ಟೆ, ಹೀಗೆ ಮೀನುಗಾರಿಕೆಯ ವಿವಿಧ ವಲಯಗಳಿಗೆ ಈಗ ಬಹಳ ಅವಕಾಶಗಳಿವೆ.
ಡ್ರೋನ್ ಖರೀದಿಸಲು ಯೋಜಿಸುತ್ತಿರುವ ರೈತರಿಗೆ ಸುವರ್ಣಾವಕಾಶ, ಸರ್ಕಾರ 50% ಸಬ್ಸಿಡಿ
ಖಾಸಗಿ ವಲಯದವರು ಆಸಕ್ತಿವಹಿಸಿ ಬಂದರೆ, ಮಾರುಕಟ್ಟೆ ವ್ಯವಸ್ಥೆ, ಸಾಗಾಣಿಕೆ ಸೇರಿದಂತೆ ಎಲ್ಲ ರೀತಿಯ ಸಹಕಾರವನ್ನು ನೀಡಲು ಸರ್ಕಾರ ಸಿದ್ಧವಿದೆ. ಮೀನಿನ ಸಂಸ್ಕರಣೆ, ಮೀನು ಆಹಾರ ಉತ್ಪಾದನೆಗೆ ಸರ್ಕಾರ ಸಹಕಾರ ನೀಡುತ್ತದೆ.
ಮೀನುಗಾರಿಕೆ ವಲಯದಲ್ಲಿ ಖಾಸಗಿ ವಲಯದ ಆಸಕ್ತಿ, ಹೆಚ್ಚಿನ ಹೂಡಿಕೆ,ಉತ್ಪಾದನೆ, ಮಾರುಕಟ್ಟೆ ಅವಕಾಶಗಳು ಬರಬೇಕೆಂಬ ಉದ್ದೇಶದಿಂದ ಇಂದಿನ ಸಮಾವೇಶ ಆಯೋಜಿಸಲಾಗಿದೆ ಎಂದರು.
ಮೀನುಗಾರಿಕೆಯ ವಹಿವಾಟನ್ನು ಎಂಟು ಲಕ್ಷ ಕೋಟಿರೂ.ಗಳಿಗೆ ಹೆಚ್ಚಿಸುವ ಗುರಿಇದ್ದು, ಇದು ರಾಜ್ಯದ ಆಂತರಿಕ ಜಿಡಿಪಿಯನ್ನು ಹೆಚ್ಚಿಸುತ್ತದೆ.
ಕಬ್ಬಿನ ದರ ನಿಗದಿಗೆ ಸಿ.ಎಂ ನೇತೃತ್ವದಲ್ಲಿ ಸಭೆ: ಶಂಕರ ಪಾಟೀಲ ಮುನೇನಕೊಪ್ಪ
ಪ್ರಧಾನಿ ಮೋದಿಯವರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿಗೆ ರಾಜ್ಯದಲ್ಲಿನ ಕೃಷಿ,ಮೀನುಗಾರಿಕೆ, ಕುರಿ ಸಾಕಾಣಿಕೆ ಇವೆಲ್ಲವೂ ಕೊಡುಗೆ ನೀಡಲಿವೆ.
ಕೃಷಿಯಲ್ಲಿ ಶೇ. 1 ರ ಅಭಿವೃದ್ಧಯಾದರೆ, ಶೇ.4 ರಷ್ಟು ಉತ್ಪಾದನಾ ಹಾಗೂ ಶೇ.10 ರಷ್ಟು ಅಭಿವೃದ್ಧಿ ಸೇವಾ ವಲಯದಲ್ಲಿ ಆಗುತ್ತದೆ. ಜನರ ದುಡಿಮೆಯೇ ರಾಜ್ಯದ ಆರ್ಥಿಕತೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವರಾದ ಎಸ್. ಅಂಗಾರ, ಸಚಿವರಾದ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ನಾಗೇಶ, ಶಾಸಕ ಸಂಜೀವ ಮಟಂದೂರು, ಫ್ರೀಡಂ ಆ್ಯಪ್ ಸಂಸ್ಥಾಪಕ ಸಿ.ಎಸ್. ಸುಧೀರ್, ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಹೀಮ್ ಸೇರಿದಂತೆ ಮತ್ತಿತರರು ಹಾಜರಿದ್ದರು.