1. ಸುದ್ದಿಗಳು

Good News: ಭೂ ರಹಿತ ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆ ಲಾಭ-ಸಿಎಂ ಬೊಮ್ಮಾಯಿ

Kalmesh Totad
Kalmesh Totad
Raitha Vidyanidhi Yojana benefit to children of landless agricultural laborers- CM Bommai

ರೈತರ ಮಕ್ಕಳಿಗೆ ಜಾರಿಗೊಳಿಸಲಾಗಿರುವ ರೈತ ವಿದ್ಯಾನಿಧಿ ಯೋಜನೆಯನ್ನು ಭೂ ರಹಿತ ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್‌: ಕರ್ತವ್ಯದ ವೇಳೆ ನಿಧನರಾಗುವ ಈ ಉದ್ಯೋಗಿಗಳ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ!

Independence Day-2022: ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಸ್ವಾತಂತ್ರ್ಯ ದಿನದ ಅಂಗವಾಗಿ ರಾಜ್ಯದ ರೈತರ ಮಕ್ಕಳಿಗಾಗಿ ಇದ್ದ ರೈತ ವಿದ್ಯಾ ನಿಧಿ ಯೋಜನೆಯನ್ನು ಸ್ವಂತ ಭೂಮಿ ಇಲ್ಲದ ರೈತಾಪಿ ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೂ ದೊರೆಯುವಂತೆ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ಕೇಂದ್ರಗಳನ್ನು ತೆರೆಯಲಾಗುವುದು. ಇದರ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲಾಗುವುದು.

ಇದರಿಂದ 8,100 ಮಹಿಳೆಯರಿಗೆ ಉದ್ಯೋಗಾವಕಾಶವೂ ದೊರೆಯಲಿದೆ ಎಂದು ಸಿಎಂ ಹೇಳಿದರು.

Postal Jobs: ಯುವಜನತೆಗೆ ಭರ್ಜರಿ ಸುದ್ದಿ: ಅಂಚೆ ಇಲಾಖೆಯಲ್ಲಿದೆ 1 ಲಕ್ಷ ಖಾಲಿ ಹುದ್ದೆ!

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಶೇ. 100ರಷ್ಟು ಶೌಚಾಲಯ ನಿರ್ಮಾಣ ಮಾಡಲಾಗುವುದು.

ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲಕರ್ಮಿಗಳಿಗೆ ತಲಾ 50 ಸಾವಿರ ರೂ.ವರೆಗೆ ಸಾಲ ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಕನ್ನಡ ನಾಡಿನಲ್ಲಿ ಕಿತ್ತೂರು ವೀರರಾಣಿ ಚೆನ್ನಮ್ಮ, ವೀರಸಂಗೊಳ್ಳಿ ರಾಯಣ್ಣ ಮೊದಲಾದವರು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲೇ ಸಾಮ್ರಾಜ್ಯಶಾಹಿ ಬ್ರಿಟೀಷರ ವಿರುದ್ಧ ನಡೆಸಿದ ಹೋರಾಟ ಮೈ ನವಿರೇಳಿಸುತ್ತದೆ.

ಯುವಜನತೆಗೆ ಉದ್ಯೋಗ ಮಾಡಲು ಇಲ್ಲಿದೆ ಕೇಂದ್ರ ಸರ್ಕಾರದಿಂದ ಬರೋಬ್ಬರಿ 25 ಲಕ್ಷ ಸಾಲ..ಅರ್ಜಿ ಸಲ್ಲಿಸುವುದು ಹೇಗೆ?

ಇವರೆಲ್ಲರ ತ್ಯಾಗದ ಫಲವಾಗಿ ದೊರೆತ ಸ್ವಾತಂತ್ರ್ಯದ ಸವಿಯುಣ್ಣುವ ಜೊತೆಗೆ ದೇಶದ ಉನ್ನತಿಗಾಗಿ ನಮ್ಮ ಕರ್ತವ್ಯವನ್ನು ಅರಿತು ನಿರ್ವಹಿಸುವುದೇ ಆ ಮಹನೀಯರ ತ್ಯಾಗಕ್ಕೆ ನಾವು ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಅಭಿಪ್ರಾಯಪಟ್ಟರು.

1 ಟ್ರಿಲಿಯನ್‌ ಡಾಲರ್‌ ಕೊಡುಗೆಯ ಮಹತ್ವಾಕಾಂಕ್ಷೆ

ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ಸಮೃದ್ಧ ಕರ್ನಾಟಕ ನಿರ್ಮಾಣದ ಗುರಿ ಹಾಕಿಕೊಂಡಿದ್ದೇವೆ ಎಂದಿರುವ ಸಿಎಂ, ಪ್ರಧಾನಿಗಳ ಕನಸಾದ 5 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಗೆ ಕನಿಷ್ಠ 1 ಟ್ರಿಲಿಯನ್‌ ಡಾಲರ್‌ಗಳ ಕೊಡುಗೆಯನ್ನು ಕರ್ನಾಟಕ ನೀಡಬೇಕು ಎಂಬ ಮಹತ್ವಾಕಾಂಕ್ಷೆ ಗುರಿ ಹಾಕಿಕೊಂಡಿದ್ದು, ಪಣತೊಟ್ಟು ಶ್ರಮಿಸುತ್ತಿದ್ದೇವೆ ಎಂದರು.

Published On: 16 August 2022, 03:26 PM English Summary: Raitha Vidyanidhi Yojana benefit to children of landless agricultural laborers- CM Bommai

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2022 Krishi Jagran Media Group. All Rights Reserved.