1. ಸುದ್ದಿಗಳು

SSLC ಪಾಸಾದವರಿಗೆ ಸಂತಸದ ಸುದ್ದಿ- 2443 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ-ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಎಸ್ಎಸ್ಎಲ್ಸಿ ಪಾಸಾದ ವಿದ್ಯಾರ್ಥಿಗಳಿಗಿಲ್ಲಿದೆ ಸಂತಸದ ಸುದ್ದಿ. ಕರ್ನಾಟಕದಲ್ಲಿರುವ ಅಂಚೆ ಕಚೇರಿಯಲ್ಲಿ ಖಾಲಿಯಿರುವ 2443 ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್‌, ಡಾಕ್‌ ಸೇವಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇನ್ನೇಕೆ ತಡ ಇಂದೇ ಅರ್ಜಿ ಸಲ್ಲಿಸಿ.

ಹುದ್ದೆ ಮತ್ತು ವೇತನದ ವಿವರ:

ಬ್ರ್ಯಾಂಚ್‌ ಪೋಸ್ಟ್‌ಮಾಸ್ಟರ್‌ ಹುದ್ದೆ- ರೂ12,000 ದಿಂದ 14,000 ವರೆಗೆ

ಅಸಿಸ್ಟಂಟ್ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್ ಹುದ್ದೆ- ರೂ10,000 ದಿಂದ 12,000 ವರೆಗೆ.

ಡಾಕ್ ಸೇವಕ್‌ ಹುದ್ದೆ- ರೂ10,000 ದಿಂದ 12,000 ವರೆಗೆ.

ವಯೋಮಿತಿ:

ದಿನಾಂಕ 21-12-2020 ಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ಮೀರಿರಬಾರದು. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.

ವಿದ್ಯಾರ್ಹತೆ:

 ಅರ್ಜಿ ಸಲ್ಲಿಸಲು ಅಭ್ಯರ್ಥಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಪಡೆದಿರಬೇಕು. ಹಾಗೂ ಕರ್ನಾಟಕ ಅಧಿಕೃತ ಭಾಷೆ ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು.  ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣ ಪತ್ರಗಳನ್ನು ಹೊಂದಿರಬೇಕು.

ಅರ್ಜಿ ಶುಲ್ಕ:

 ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು ರೂಪಾಯಿ 100 ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ ಅಪ್ಲಿಕೇಶನ್ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ- 20-01-2021,  ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 080-22392554

ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ http://appost.in/gdsonline/

Published On: 22 December 2020, 10:35 PM English Summary: recruitment for gramin dak sevak posts

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.