News

ಗ್ರಾಮಲೆಕ್ಕಿಗರ ಹುದ್ದೆಗೆ ನೇಮಕಾತಿ: 42,000 ಸಂಬಳ !

21 April, 2022 12:10 PM IST By: Kalmesh T
Recruitment For the post of village accountant: 42,000 salary!

ಉದ್ಯೋಗದ ಹುಡುಕಾಡದಲ್ಲಿರುವವರಿಗೆ ಇಲ್ಲಿದೆ ಒಂದು ಒಳ್ಳೆಯ ಅವಕಾಶ. ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ.

ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ  ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 35 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನವಾಗಿದೆ. 

ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ (Revenue Department Kodagu) ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountant ) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 35 ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ  ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣ  https://kodagu-va.kar.nic.in/ ಗೆ ಭೇಟಿ ನೀಡಬಹುದು.

ಇದನ್ನೂ ಓದಿರಿ:

TCS ನೇಮಕಾತಿ.. ಪದವಿ ಹೊಂದಿದ Freshersಗೆ ಇಲ್ಲಿದೆ ಸುವರ್ಣಾವಕಾಶ

NDDB ನೇಮಕಾತಿ: ಮಾ. 1,82,200 ಸಂಬಳ!

ಶೈಕ್ಷಣಿಕ ವಿದ್ಯಾರ್ಹತೆ

ಕೊಡಗು (Kodagu) ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಗುಣವಾಗಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅಥವಾ ಸಿಬಿಎಸ್‌ಇ / ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 

ಪ್ರಮುಖ ದಿನಾಂಕಗಳು

ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆ ದಿನ - ಮೇ 19, 2022

ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನ  - ಮೇ 19, 2022

ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ದಿನಾಂಕ ಮೇ 23, 2022

ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆ ದಿನಾಂಕ ಮೇ 31 , 2022

ಅಂತಿಮ ಆಯ್ಕೆಪಟ್ಟಿ ಬಿಡುಗಡೆ ದಿನಾಂಕ ಜೂನ್ 23, 2022

ರಷ್ಯಾದಿಂದ ಅಪಾರ ಬೇಡಿಕೆಯಿದ್ದರೂ 200 ರೂ. ಕುಸಿತ ಕಂಡ ಗೋಧಿ..ಕಾರಣವೇನು..?

Big Announce! ರೈತರ income ಹೆಚ್ಚಿಸಲು 100 ಕೋಟಿ ಮೀಸಲು CM ಬೊಮ್ಮಾಯಿ ಅವರಿಂದ Big GIft, ಬಜೆಟ್‌ನಲ್ಲಿ ಘೋಷಣೆ

ವಯೋಮಿತಿ: 

ಅರ್ಜಿ ಸಲ್ಲಿಸಲು ಇಚ್ಚಿಸುವ ಎಸ್‌ಸಿ / ಎಸ್‌ಟಿ / ಪ್ರವರ್ಗ-1  ಅಭ್ಯರ್ಥಿಗಳು 40 ವರ್ಷ ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 38 ವರ್ಷ ಮೀರಿರಬಾರದು ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ ವಿವರ

ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ರೂ.200, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.400 ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಪಿಯುಸಿ (PUC) ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ

ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾಸಿಕ ರೂ.21400 ರಿಂದ ರೂ.42000 ವೇತನ ದೊರೆಯಲಿದೆ.

ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ

ಅಭ್ಯರ್ಥಿಗಳಿಗಿರಬೇಕಾದ ಸಾಮಾನ್ಯ ಅರ್ಹತೆಗಳು

ಭಾರತೀಯ ನಾಗರಿಕನಾಗಿರಬೇಕು

ಶೈಕ್ಷಣಿಕ ವಿದ್ಯಾಭ್ಯಾಸವನ್ನು ಕರ್ನಾಟಕದಲ್ಲಿ ಪಡೆದಿರಬೇಕು.

ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಂತರಾಗಿರಬೇಕು.

ಯಾವುದೇ ಸರ್ಕಾರದ ಸೇವೆಯಿಂದ ವಜಾಗೊಂಡಿರಬಾರದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ವಿಳಾಸ ಅಥವಾ ದೂರವಾಣಿ ಮೂಲಕ ಸಂಪರ್ಕಿಸಲು ಕೋರಲಾಗಿದೆ.
ಜಿಲ್ಲಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಕಛೇರಿ
ಕೊಡಗು ಜಿಲ್ಲೆ, ಮಡಿಕೇರಿ -571201
ದೂರವಾಣಿ : 08272 - 225811
ಇ-ಮೇಲ್ : deo.kodagu@gmail.com

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವಂತೆ ಹೈಕೋರ್ಟ್‌ ಸೂಚನೆ

ಮೀನುಗಾರರಿಗೆ ಆರ್ಥಿಕ ನೆರವು ನೀಡಲಾಗುವುದು- ಸಚಿವ ಎಸ್. ಅಂಗಾರ