ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಸುರೇಶ ಕುಮಾರ ಸಂತಸದ ಸುದ್ದಿ ನೀಡಿದ್ದಾರೆ. ಹೌದು ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ನೇಮಕ ಮಾಡಲು ಉದ್ದೇಶಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಅವರು ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ವಿವಿಧ ಸ್ತರಗಳ ಶಿಕ್ಷಕರ ಸಂಘಗಳ ಪದಾಧಿಕಾರಿಗಳ ಜೊತೆ ಬುಧವಾರ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಕೊರೋನಾದಿಂದಾಗಿ ಕಳೆದ ವರ್ಷ ಯಾವುದೇ ನೇಮಕಾತಿಯಾಗಿಲ್ಲ. ಆದರೆ ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುವುದು. ‘ಶಿಕ್ಷಕರ ಸಮಸ್ಯೆಗಳನ್ನು ಶಿಕ್ಷಕ ಮಿತ್ರ ಆ್ಯಪ್ ಮೂಲಕ ಪರಿಹರಿಸಲಾಗುತ್ತಿದೆ. ಅಲ್ಲದೆ, 2,500 ಶಿಕ್ಷಕರ ಅರ್ಹತಾ ಪರೀಕ್ಷೆ ಪಾಸ್ ಮಾಡಿದ ಅಭ್ಯರ್ಥಿಗಳ ನೇಮಕಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಳೆದ ಒಂದು ವರ್ಷದಲ್ಲಿ 3008 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 2404 ಪ್ರೌಢಶಾಲಾ ಶಿಕ್ಷಕರಾಗಿ, 1342 ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ, 396 ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ, 200ಕ್ಕೂ ಹೆಚ್ಚು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಬಡ್ತಿ ಸೇರಿದಂದೆ ಹಲವು ವರ್ಷಗಳಿಂದ ಬಾಕಿ ಇದ್ದ ಪದೋನ್ನತಿ ಪೂರ್ಣಗೊಳಿಸಲಾಗಿದೆ ಎಂದಿದ್ದಾರೆ.