1. ಸುದ್ದಿಗಳು

ಶೀಘ್ರದಲ್ಲೇ ಪಶುವೈದ್ಯಕೀಯ ವಿವಿಯಲ್ಲಿ ಸಿಬ್ಬಂದಿ ನೇಮಕಾತಿ: ಸಚಿವ ಪ್ರಭು ಚವ್ಹಾಣ್

Kalmesh T
Kalmesh T
Recruitment of staff in Veterinary University soon

ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 217 ಬೋಧಕ ಮತ್ತು 220 ಬೋಧಕೇತರ ಸಿಬ್ಬಂದಿಗಳ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್‌ ಸ್ವಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಭಾರತ ಮತ್ತು ನ್ಯೂಜಿಲೆಂಡ್ ವ್ಯಾಪಾರ ಮತ್ತು ರಫ್ತು ಕುರಿತು ಕೃಷಿ ಸಚಿವರ ದ್ವಿಪಕ್ಷೀಯ ಸಭೆ!

Recruitment: ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳಿಂದ ಖಾಲಿ  ಇದ್ದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಇದರ ಜೊತೆಗೆ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 217 ಬೋಧಕ ಮತ್ತು 220 ಬೋಧಕೇತರ ಸಿಬ್ಬಂದಿಗಳ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್‌ ಸ್ವಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇದ್ದ 217 ಬೋಧಕ ಮತ್ತು 220 ಬೋಧಕೇತರ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಸದರಿ ಪ್ರಸ್ತಾವನೆಗೆ ಅನುಮೋದನೆ ನೀಡಿ, ಬೋಧಕ ಮತ್ತು ಬೋಧಕೇತೇರ ಸಿಬ್ಬಂದಿಗಳ ಹುದ್ದೆಗಳನ್ನು ಮಂಜೂರು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Dharwad Krishi Mela: ಟ್ರ್ಯಾಕ್ಟರ್‌ ಬಳಸುವ ರೈತರಿಗೆ ಡೀಸೆಲ್‌ ಸಬ್ಸಿಡಿ- ಸಚಿವ ಬಿ.ಸಿ.ಪಾಟೀಲ

ಬೆಳಗಾವಿ ಜಿಲ್ಲೆಯ ಅಥಣಿ ವೈದ್ಯಕೀಯ ಮಹಾವಿದ್ಯಾಲಯ ಪ್ರಾರಂಭಕ್ಕಾಗಿ 77 ಬೋಧಕರು ಹಾಗೂ 98 ಬೋಧಕೇತರ ಹುದ್ದೆಗಳು ಮಂಜೂರಾಗಿದ್ದು, ಶೀಘ್ರದಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳಿಂದ ಖಾಲಿ ಇದ್ದ 36 ಬ್ಯಾಗ್‌ಲಾಕ್‌ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಳೆದ ಅವಧಿಯಲ್ಲಿ ಸಾಮಾಜಿಕ ಚಿಂತಕ ಭಾವುರಾವ್‌ ದೇಶಪಾಂಡೆ ಸ್ಮರಣಾರ್ಥ ಬೆಳಗಾವಿ ಜಿಲ್ಲೆಗೆ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಘೋಷಣೆ ಮಾಡಿದ್ದರು.

ಈ ಸಂಬಂಧ ಅಥಣಿ ತಾಲ್ಲೂಕಿನ ಕೊಕಟನೂರು ಸಮೀಪದಲ್ಲಿ 200 ಎಕರೆ ವಿಶಾಲ ಪ್ರದೇಶದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದು ಪ್ರಕಟಣೆಯಲ್ಲಿ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

ರೈತರ ಬೆಳೆ ವಿಮೆ ಬಾಕಿ ಮೊತ್ತ ₹16.52 ಕೋಟಿ ಬಿಡುಗಡೆ; ಸಿಎಂ ಬೊಮ್ಮಾಯಿ

ಅಥಣಿ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಬಾಕಿ ಇದ್ದ ನಿರ್ಮಾಣ ಕಾಮಗಾರಿ ಕುರಿತು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳು-ಸಿಬ್ಬಂದಿಗಳಿಗೆ ತಾಕೀತು ಮಾಡಿ, ಅಥಣಿಗೆ ಭೇಟಿ ನೀಡಿದರು.

ಕಾಲೇಜು ಕಟ್ಟಡಗಳ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಕಟ್ಟಡಗಳ ಗುಣಮಟ್ಟಕಾಯ್ದುಕೊಂಡು, ಮೂಲಭೂತ ಸೌಲಭ್ಯಗಳನ್ನು ಒದಗಿಸಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿತ್ತು ಎಂದು ತಿಳಿಸಿರುವ ಪ್ರಭು ಚವ್ಹಾಣ್‌ ಅವರು ತಾವು ಕಾಲೇಜು ನಿರ್ಮಾಣಕ್ಕೆ ವಹಿಸಿದ್ದ ಮುತುವರ್ಜಿ ವಿವರಿಸಿದ್ದಾರೆ.

ಕಾಲೇಜಿನ ಕೊಠಡಿಗಳು, ಆಸ್ಪತ್ರೆ ಕಟ್ಟಡ, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಮರಣೋತ್ತರ ಪರೀಕ್ಷೆ ಕೊಠಡಿ, ಗ್ರಂಥಾಲಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಭಾರತೀಯ ಪಶು ವೈದ್ಯಕೀಯ ಪರಿಷತ್ತಿನಿಂದ ಮಾನ್ಯತೆ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

Published On: 20 September 2022, 02:49 PM English Summary: Recruitment of staff in Veterinary University soon

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.