News

ಹಳೆಯ ವಾಹನ ಗುಜರಿಗೆ ಹಾಕಿ; ಹೊಸ ವಾಹನದ ಮೇಲೆ ರಿಯಾಯಿತಿ ಪಡೆಯಿರಿ!

27 November, 2022 3:02 PM IST By: Hitesh
Recycle old vehicles; Get a discount on a new vehicle!

ಭಾರತ ಸರ್ಕಾರಕ್ಕೆ ಸೇರಿದ 15 ವರ್ಷ ಹಳೆಯ ಎಲ್ಲ ವಾಹನಗಳನ್ನು ಗುಜರಿಗೆ ಹಾಕಲಾಗುವುದು ಎಂದು

ಈಗಾಗಲೇ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ (Union Minister Nitin Gadkari) ಹೇಳಿದ್ದಾರೆ.

ಅಲ್ಲದೇ ಈ ಕುರಿತು ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲಾಗಿದೆ. ಈ ನೀತಿಯನ್ನು ಎಲ್ಲ ರಾಜ್ಯಗಳಿಗೂ ರವಾನಿಸಲಾಗಿದೆ.

ರಾಜ್ಯ ಮಟ್ಟದಲ್ಲಿ ಇದನ್ನು ಅಳವಡಿಸಿಕೊಳ್ಳಬೇಕು ಎಂದಿದ್ದಾರೆ.

ಇದರ ಬೆನ್ನಲ್ಲೇ ರಾಜ್ಯದಲ್ಲಿ 15 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವ ಪ್ರಸ್ತಾವನೆ ಮತ್ತೆ ಮುನ್ನೆಲೆಗೆ ಬಂದಿದೆ.   

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಶೀಘ್ರದಲ್ಲಿಯೇ ವಾಹನಗಳನ್ನು ರದ್ದಿಗೆ ಹಾಕುವ ನೀತಿ(vehicle scrappage policy)ಯನ್ನು

ಜಾರಿಗೆ ಮಾಡಲಿದೆ ಎನ್ನಲಾಗುತ್ತಿದೆ.  

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು 15 ವರ್ಷ ಪೂರೈಸಿದ ಎಲ್ಲಾ ಸರ್ಕಾರಿ ವಾಹನಗಳನ್ನು ರದ್ದಿಗೆ

ಹಾಕಬೇಕೆಂದು ನಿರ್ದೇಶನ ನೀಡಿದ ಬೆನ್ನಲ್ಲೇ ಇದು ಚರ್ಚೆಯ ಮುನ್ನೆಲೆಗೆ ಬಂದಿದೆ.  

ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ನಿರ್ದೇಶಿಸಿರುವ ನೀತಿ ಮಾರ್ಗಸೂಚಿಗಳ ಪ್ರಕಾರ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಕರ್ನಾಟಕದಲ್ಲಿ, ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡುವವರಿಗೆ ಹೊಸ ವಾಹನವನ್ನು ಖರೀದಿಸುವ ಮಾಲೀಕರಿಗೆ ರಿಯಾಯಿತಿ ನೀಡುವ ಪ್ರಸ್ತಾವನೆ ಇದೆ ಎನ್ನಲಾಗಿದೆ.  

ರಾಜ್ಯದಲ್ಲಿ 2.8 ಕೋಟಿ ವಾಹನಗಳ ಪೈಕಿ 79 ಲಕ್ಷಕ್ಕೂ ಹೆಚ್ಚು ವಾಹನಗಳು 15 ವರ್ಷಕ್ಕಿಂತ ಹಳೆಯವಾಗಿವೆ.

ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಫಿಟ್‌ನೆಸ್ ಸರ್ಟಿಫಿಕೇಟ್ (FC) ಹೊಂದಿರದ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಪ್ರಯತ್ನಿಸುತ್ತಿವೆ.

 Food crisis| ರಸಗೊಬ್ಬರ ಕೊರತೆಯಿಂದ ಆಹಾರ ಬಿಕ್ಕಟ್ಟು: ಪ್ರಧಾನಿ ಮೋದಿ ಎಚ್ಚರಿಕೆ|

ಇಂತಹ ಹಲವು ವಾಹನಗಳು ಈಗಲೂ ರಾಜ್ಯದ ರಸ್ತೆಗಳಲ್ಲಿ ಸಂಚರಿಸುತ್ತಿದ್ದು, ಇದರಿಂದ ವಾಯುಮಾಲಿನ್ಯ ಹೆಚ್ಚಾಗುವುದಷ್ಟೇ ಅಲ್ಲದೇ ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ.  

ವಾಹನಗಳನ್ನು ಖಾಸಗಿ, ವಾಣಿಜ್ಯ ಹಾಗೂ ಸರ್ಕಾರಿ ಎಂದು ವಿಂಗಡಿಸಿಕೊಳ್ಳಲಾಗಿದೆ.

ಹೀಗಾಗಿ, ಆಯಾ ವರ್ಗದ ವ್ಯಾಪ್ತಿಯಲ್ಲಿ ಎಷ್ಟು ವಾಹನಗಳಿವೆ ಎನ್ನುವುದನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ.  

ದೇಶದಲ್ಲಿ ಹಿಂಗಾರು ಬಿತ್ತನೆ ಹೆಚ್ಚಳ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌

Recycle old vehicles; Get a discount on a new vehicle!

15 ವರ್ಷಕ್ಕಿಂತ ಮೇಲ್ಪಟ್ಟ ವಾಹನಗಳನ್ನು ಸ್ವಯಂಪ್ರೇರಿತವಾಗಿ ಒಪ್ಪಿಸುವವರಿಗೆ ಪ್ರಮಾಣಪತ್ರವನ್ನು ನೀಡುವ

ಮೂಲಕ ಪ್ರೋತ್ಸಾಹಕಗಳನ್ನು ನೀಡಲು ಚರ್ಚೆ ನಡೆದಿದೆ. ಈ ಮೂಲಕ ಅವರು ಮುಂದಿನ ಹೊಸ ವಾಹನ

ಖರೀದಿಯಲ್ಲಿ ಸಬ್ಸಿಡಿ ಅಥವಾ ರಿಯಾಯಿತಿಯನ್ನು ಪಡೆಯಬಹುದು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.