News

ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ! ರೆಡ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ..

18 May, 2022 12:13 PM IST By: Kalmesh T
Red Alert Announces Due To Heavy Rain

ಕರ್ನಾಟಕದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿರಿ: 

Atal Pension Yojana: 4 ಕೋಟಿಗೂ ಹೆಚ್ಚು ಜನರಿಗೆ ಲಾಭವಾದ ಈ ಯೋಜನೆಯ ಲಾಭ ನೀವು ಪಡೆದಿದ್ದೀರಾ?

ರೈತರಿಗೆ ರೂ.1,25,000 ಭರ್ಜರಿ ಸಹಾಯಧನ: ವಿವಿಧ ಕೃಷಿ ಚಟುವಟಿಕೆಗೆ ಈ ಸಬ್ಸಿಡಿ!

ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಒಡಿಶಾ, ಬಿಹಾರ, ಜಮ್ಮು-ಕಾಶ್ಮೀರ, , ಅಸ್ಸಾಂನಲ್ಲೂ ಮಳೆಯ ಆರ್ಭಟ ಜೋರಾಗಿದೆ. ಇಂದಿನಿಂದ 3 ದಿನ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಮೇ 18ರಂದು  ಕರ್ನಾಟಕದ ಮಲೆನಾಡು, ಕರಾವಳಿ ಪುದೇಶಗಳಲ್ಲಿಯೂ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ.

ನೈಋತ್ಯ ಅರೇಬಿನ್ ಸಮುದ್ರದಲ್ಲಿ ಚಂಡಮಾರುತ ಎದಿರುವ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳೊಳಗೆ ಕರ್ನಾಟಕದಲ್ಲಿ ಗುಡುಗು, ಮಿಂಚು, ಸಿಡಿಲು ಸಮೇತ ಭಾರೀ ಮಳೆಯಾಗಲಿದೆ.

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?

EPFO ಖಾತೆದಾರರಿಗೆ ಗುಡ್ನ್ಯೂಸ್: ಇನ್ಮುಂದೆ SMS ಮತ್ತು Missed Call ಮೂಲಕ ನಿಮ್ಮ ಬ್ಯಾಲೆನ್ಸ್ ಚೆಕ್ ಮಾಡಬಹುದು!

ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಜೊತೆಗೆ ಬಿರುಸಿನ ಗಾಳಿ ಉಂಟಾಗುವ ಸಾಧ್ಯತೆಯಿದ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡು ಕರಾವಳಿಯಲ್ಲಿ ಮಳೆಯ ವುಮಾಣ ಹೆಚ್ಚಾಗಿದೆ. ಒಂದೆರಡು ದಿನಗಳ ಕಾಲ ಬಿಡುವು ನೀಡಿದ ಮಳೆರಾಯನ ಆರ್ಭಟ ಮತ್ತೆ ಶುರುವಾಗಿದೆ. ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಮೇ 19ರಂದು ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಇರಲಿದೆ ಮೇ 20ರಿಂದ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಗುಡ್‌ ನ್ಯೂಸ್‌: ಸಾವಯವ ಕೃಷಿಕರಿಗೆ ಇಲ್ಲಿದೆ ಬರೋಬ್ಬರಿ ರೂ.50,000 ಸಬ್ಸಿಡಿ!

ರೈತರಿಗೆ ರೂ.1,25,000 ಭರ್ಜರಿ ಸಹಾಯಧನ: ವಿವಿಧ ಕೃಷಿ ಚಟುವಟಿಕೆಗೆ ಈ ಸಬ್ಸಿಡಿ!

ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮುಂದಿನ 3 ದಿನ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಂಗಳೂರು, ಚಿತ್ರದುರ್ಗ ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ ಮತ್ತು ತುಮಕೂರಿನಲ್ಲಿ ಇಂದು, ಮೇ 19, 20ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಮೇ ತಿಂಗಳಲ್ಲಿ ಈ ವರ್ಷ ಕರ್ನಾಟಕದಲ್ಲಿ ಮೊದಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಪಾಯದ ಸನ್ನಿವೇಶ ಎದುರಿಸಲು ಸಿದ್ಧತೆ ಮಾಡಿಕೊಳ್ಳಲು ರೆಡ್ ಅಲರ್ಟ್ ನೀಡಲಾಗುತ್ತದೆ. ಮುಂದಿನ 3 ದಿನಗಳಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ರೈತರಿಗೆ ಸಿಹಿ ಸುದ್ದಿ: ಮಾರುಕಟ್ಟೆಯಲ್ಲಿ ಗೋಧಿಗೆ ಬಂಪರ್ ಬೆಲೆ: ರೈತರ ಮುಖದಲ್ಲಿ ನಗೆ!

Paddy: ಉತ್ತಮ ಇಳುವರಿ ನೀಡುವ ರೋಗ ನಿರೋಧಕ ಭತ್ತದ ತಳಿಗಳ ಕುರಿತು ಇಲ್ಲಿದೆ ಸಮಗ್ರ ಮಾಹಿತಿ…

ಹವಾಮಾನ ಇಲಾಖೆಯು ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದ ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.