ಕೊರೋನಾ ಸೋಂಕಿನಿಂದ ತತ್ತರಿಸಿರುವ ವಾಣಿದಜ್ಯನಗರಿ ಈಗ ಮಳೆಯಿಂದ ತತ್ತರಿಸಿದೆ. ಶುಕ್ರವಾರ ಮತ್ತು ಶನಿವಾರ ಸುರಿದ ಧಾರಾಕಾರ ಮಳೆಗೆ ನಗರದ ಬಹುತೇಕ ಎಲ್ಲಾ ರಸ್ತೆಗಳು ಜಲಾವೃತ್ತಗೊಂಡು ಜನತೆ ಸಂಕಷ್ಟತೆಯಲ್ಲಿ ಸಿಲುಕಿಕೊಂಡಿದ್ದರು. ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜನರು ಹಾಗೂ ವಾಹನಗಳ ಸಂಚಾರಕ್ಕೂ ಅಡ್ಡಿಯಾಗಿದೆ. . 19 ಕಡೆ ಮರಗಳು, ರೆಂಬೆ ಕೊಂಬೆಗಳು ಮುರಿದು ಬಿದ್ದಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದರು
ಭಾನುವಾರವೂ ಸಹ ಮಹಾರಾಷ್ಟ್ರದ. ಪಾಲ್‌ಘಾರ್, ಮುಂಬಯಿ, ಥಾಣೆ ಮತ್ತು ರಾಯಗಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರವಿವಾರವೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರದಲ್ಲಿ 4.57 ಮೀಟರ್ ಎತ್ತರದಲ್ಲಿ ಅಲೆಗಳು ಅಪ್ಪಳಿಸುತ್ತಿದ್ದು, ಕಡಲ ತಟದಿಂದ ದೂರವಿರುವಂತೆ ನಾಗರಿಕರಿಗೆ ಮುಂಬೈ ಮಹಾನಗರ ಪಾಲಿಕೆ ಸೂಚಿಸಿದೆ.
Share your comments