1. ಸುದ್ದಿಗಳು

ರಾಜೀವ್‌ ಗಾಂಧಿ ಹಂತಕರ ಬಿಡುಗಡೆ: ಸೋನಿಯಾಗಾಂಧಿ ಕ್ಷಮಾಪಣೆ, ಬಿಡುಗಡೆ ಹಿನ್ನೆಲೆ ಗೊತ್ತೆ?

Hitesh
Hitesh

ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಅವರನ್ನು ಹತ್ಯೆ ಮಾಡಿದ ಹಂತಕರಿಗೆ ಇದೀಗ ಬಿಡುಗಡೆ ಸಿಕ್ಕಿದೆ.

ಇದನ್ನೂ ಓದಿರಿ: ನಾಡಪ್ರಭು ಶ್ರೀ ಕೆಂಪೇಗೌಡರ 108 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ 

ರಾಜೀವ್‌ ಗಾಂಧಿ ಅವರನ್ನು ಹತ್ಯೆ ಮಾಡಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಗಳಾದ ನಳಿನಿ ಶ್ರೀಹರನ್ (Nalini Sriharan) ಮತ್ತು ಆರ್‌ಪಿ ರವಿಚಂದ್ರನ್ (RP Ravichandran)

ಅವರನ್ನು ಜೀವಾವಧಿ ಶಿಕ್ಷೆಯನ್ನು ಕಡಿಮೆ ಮಾಡಿ, ಅವಧಿ ಪೂರ್ಣವಾಗಿ ಬಿಡುಗಡೆ ಮಾಡಬೇಕು ಎನ್ನುವ ಮನವಿ ಕೇಳಿಬಂದಿತ್ತು.

ನಳಿನಿ ಅವರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಬೇಕು ಎಂದು ಸೋನಿಯಾ ಗಾಂಧಿ ಅವರು ತಮಿಳುನಾಡಿನ ಅಂದಿನ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.

ಸೋನಿಯಾ ಗಾಂಧಿ ಅವರ ಮನವಿಯನ್ನು ಪರಿಗಣಿಸಿ  ಅಂದಿನ ರಾಜ್ಯಪಾಲರು, 2001ರಲ್ಲಿ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಿದ್ದರು.

ಸೋನಿಯಾ ಅವರು ನಳಿನಿ ಅವರನ್ನು ಒಮ್ಮೆ ಭೇಟಿಯಾಗಿಯೂ ಮಾತನಾಡಿದ್ದರು.

ತಮ್ಮ ತಂದೆ ರಾಜೀವ್‌ ಗಾಂಧಿ ಅವರನ್ನು ಕೊಂದ ಹಂತಕರನ್ನು ಕ್ಷಮಿಸಿದ್ದೇವೆ ಎಂದು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಈಗಾಗಲೇ ಹಲವು ವೇದಿಕೆಯಲ್ಲಿ ಹೇಳಿದ್ದಾರೆ. 

ಕನ್ನಡಿಗರಿಗೆ ಇನ್ನು ಕಾಶಿ ಯಾತ್ರೆ ಸುಗಮ: ಭಾರತ್‌ ಗೌರವ್‌ ಕಾಶಿ ರೈಲು ಇಂದಿನಿಂದ ಆರಂಭ

ಇನ್ನು ರಾಜೀವ್‌ ಗಾಂಧಿ ಅವರನ್ನು ಹತ್ಯೆ ಮಾಡಿದ ಹಂತಕರನ್ನು ಅವಧಿಗೂ ಪೂರ್ವವಾಗಿ ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಶಿಫಾರಸ್ಸು ಮಾಡಿತ್ತು.

ನಾವು ಈಗಾಗಲೇ 30 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದೇವೆ.

ರಾಜೀವ್ ಗಾಂಧಿಯ ಕೊಲೆಯ 7 ಅಪರಾಧಿಗಳ ಶಿಕ್ಷೆಯ ಅವಧಿಯನ್ನು ಕಡಿಮೆ ಮಾಡಲು ತಮಿಳುನಾಡು ಸರ್ಕಾರ 4 ವರ್ಷಗಳ ಹಿಂದೆಯೇ ಒಪ್ಪಿಗೆ ಸೂಚಿಸಿದೆ

ಎಂದು ಅಪರಾಧಿಗಳಾದ ಎಸ್ ನಳಿನಿ ಮತ್ತು ಆರ್ಪಿ ರವಿಚಂದ್ರನ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.

2018ರ ಸೆಪ್ಟೆಂಬರ್ 9ರಂದು ನಡೆದ ಸಂಪುಟ ಸಭೆಯಲ್ಲಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ 7 ಅಪರಾಧಿಗಳ ಕ್ಷಮಾದಾನ ಅರ್ಜಿಗಳನ್ನು ಪರಿಗಣಿಸಲಾಗಿತ್ತು.

ಸಂವಿಧಾನದ ಆರ್ಟಿಕಲ್ 161ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಅನ್ವಯಿಸಿ ಅವರ ಜೀವಾವಧಿ ಶಿಕ್ಷೆಯನ್ನು ಹಿಂತೆಗೆದುಕೊಳ್ಳಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿತ್ತು.

1991ರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು. 

ದಕ್ಷಿಣ ಭಾರತದ ಪ್ರಪ್ರಥಮ ವಂದೇ ಭಾರತ್‌ ಟ್ರೈನ್‌ಗೆ ಪಿಎಂ ಮೋದಿ ಚಾಲನೆ: ಈ ರೈಲಿನ ಸ್ಪೆಷಾಲಿಟಿ ಏನು..?

ಅವಧಿ ಪೂರ್ವ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಕೋರಿ ರಾಜೀವ್ ಗಾಂಧಿ ಹಂತಕರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಗೆ ತಮಿಳುನಾಡು ಸರ್ಕಾರ ಬೆಂಬಲ ನೀಡಿತ್ತು.

ತಮ್ಮ ಸಹ ಅಪರಾಧಿ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿದಂತೆ ತಮ್ಮನ್ನೂ ಬಿಡುಗಡೆ ಮಾಡುವಂತೆ ಕೋರಿ ನಳಿನಿ ಮತ್ತು ರವಿಚಂದ್ರನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಹಂತಕರು 23ರಿಂದ 31 ವರ್ಷಗಳಷ್ಟು ಜೈಲುಶಿಕ್ಷೆಯನ್ನು ಈಗಾಗಲೇ ಅನುಭವಿಸಿದ್ದಾರೆ.

ಈ ಪ್ರಕರಣದಲ್ಲಿ ಅವರಿಗೆ ಮೊದಲು ಮರಣದಂಡನೆ ಘೋಷಿಸಲಾಗಿತ್ತು. ಆನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಲಾಗಿತ್ತು.

ಈಗ ಜೀವಾವಧಿ ಶಿಕ್ಷೆಯಿಂದಲೂ ಅವರನ್ನು ಅವಧಿಪೂರ್ವವಾಗಿ ಬಿಡುಗಡೆ ಮಾಡಲಾಗಿದೆ.

ರಾಜೀವ್‌ ಗಾಂಧಿ ಹಂತಕರಾದ ಪೇರರಿವಾಳನ್‌ ಸೇರಿ ಜೀವಾವಧಿ ಶಿಕ್ಷೆಯಲ್ಲಿರುವ 7 ಜನರನ್ನು ಅವಧಿಪೂರ್ವ ಬಿಡುಗಡೆ ಮಾಡಲು ತಮಿಳುನಾಡು ಸಚಿವ ಸಂಪುಟವು ಅನುಮೋದನೆ ನೀಡಿತ್ತು.

ಆದರೆ, ಸಂಪುಟದ ಶಿಫಾರಸ್ಸನ್ನು ರಾಜ್ಯಪಾಲರು ಕೇಂದ್ರ ಸರ್ಕಾರದ ಪರಾಮರ್ಶೆಗೆ ಕಳುಹಿಸಿದ್ದರು. ಇದರ ವಿರುದ್ಧ ಪೇರರಿವಾಳನ್ ಮತ್ತು ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

2022ರ ಮೇನಲ್ಲಿ ಈ ಅರ್ಜಿಯನ್ನು ಇತ್ಯರ್ಥಪಡಿಸಿದ್ದ ಸುಪ್ರೀಂ ಕೋರ್ಟ್‌, ಪೇರರಿವಾಳನ್ ಅವರ ಅವಧಿಪೂರ್ವ ಬಿಡುಗಡೆಗೆ ಆದೇಶಿಸಿತ್ತು.

ಇಂತಹ ಪ್ರಕರಣಗಳಲ್ಲಿ  ರಾಜ್ಯಪಾಲರು ಸಚಿವ ಸಂಪುಟದ ನಿರ್ಧಾರಕ್ಕೆ ಬದ್ಧವಾಗಿರಬೇಕು ಎಂದು ತೀರ್ಪು ನೀಡಿತ್ತು.

ಉಳಿದವರು ಸಲ್ಲಿಸಿದ್ದ ಅರ್ಜಿಯಲ್ಲೂ ಇದೇ ತೀರ್ಪನ್ನು ಸುಪ್ರೀಂ ಕೋರ್ಟ್‌ ನೀಡಿತ್ತು.

ಹೊಸ ತಳಿಯ ಕಬ್ಬು ಯಶಸ್ವಿ ಪ್ರಯೋಗ: ಕಡಿಮೆ ವೆಚ್ಚದಲ್ಲಿ 1 ಎಕರೆಗೆ 55 ಟನ್‌ ಇಳುವರಿ! 

Sonia Gandhi and Rajiv Gandhi

ಕ್ರಮಕ್ಕೆ ಕಾಂಗ್ರೆಸ್‌ ವಿರೋಧ

ಸೋನಿಯಾ ಗಾಂಧಿ, ರಾಹುಲ್‌ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರು ರಾಜೀವ್‌ ಗಾಂಧಿ ಅವರ ಹಂತಕರನ್ನು ಕ್ಷಮಿಸಿರುವುದಾಗಿ ತಿಳಿಸಿದ್ದರೂ, ಈ ವಿಷಯದಲ್ಲಿ ಕಾಂಗ್ರೆಸ್‌ನ ನಿಲುವು ಭಿನ್ನವಾಗಿದೆ. 

ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವ ನಿರ್ಧಾರ ತಪ್ಪಾಗಿದೆ.  ಈ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ. ಇದನ್ನು ಕಾಂಗ್ರೆಸ್‌ ಖಂಡಿಸುತ್ತದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ತಿಳಿಸಿದ್ದಾರೆ.

ಈ ಆದೇಶದ ವಿರುದ್ಧ ಎಲ್ಲಾ ಸ್ವರೂಪದ ಕಾನೂನು ಹೋರಾಟದ ಸಾಧ್ಯತೆಗಳನ್ನು ಪರಿಶೀಲನೆ ನಡೆಸುವುದಾಗಿ  ಕಾಂಗ್ರೆಸ್  ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.

ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಹಂತಕರನ್ನು ಈಗಾಗಲೇ  ಕ್ಷಮಿಸಿದ್ದಾರೆ ಎಂದು ಕಾಂಗ್ರೆಸ್‌ನ ಈ ನಿಲುವನ್ನು ಈಗ ಪ್ರಶ್ನೆ ಮಾಡಲಾಗುತ್ತಿದೆ.

ಈ ವಿಚಾರದಲ್ಲಿ ಸೋನಿಯಾ ಅವರ ಕುಟುಂಬದ ನಿಲುವು ಮತ್ತು ಪಕ್ಷದ ನಿಲುವು ಸಂಪೂರ್ಣ ಭಿನ್ನವಾಗಿವೆ. ಅವರ ನಿಲುವನ್ನು ಪಕ್ಷವು ಎಂದಿಗೂ ಒಪ್ಪುವುದಿಲ್ಲ ಎಂದು ಅವರು ತಿಳಿಸಿದ್ದಾರೆ. 

Rajiv Gandhi

ರಾಜೀವ್‌ ಗಾಂಧಿ ಅವರ ಹತ್ಯೆಯ ಹಿನ್ನೆಲೆ ಏನು

1991ರ ಮೇ 21ರ ರಾತ್ರಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣೆ ಪ್ರಚಾರದ ವೇಳೆ ಧನು ಎಂಬ ಮಹಿಳಾ ಆತ್ಮಾಹುತಿ ಬಾಂಬರ್‌ ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆ ಮಾಡಿದ್ದರು.

ಧನು ಎಂಬಾಕೆ ಬಾಂಬ್‌ ಸ್ಫೋಟಿಸಿಕೊಂಡು, ರಾಜೀವ್ ಅವರ ಹತ್ಯೆ ಮಾಡಿದ್ದಳು. ಈ ಹತ್ಯೆಗೆ ಎ.ಜಿ.ಪೇರರಿವಾಳನ್ ಮತ್ತು ಈ ಆರೂ ಮಂದಿ ಸಂಚು ರೂಪಿಸಿ, ಹತ್ಯೆ ನಡೆಸಲು ನೆರವಾಗಿದ್ದರು.

1998ರಲ್ಲಿ ತಮಿಳುನಾಡಿನ ವಿಚಾರಣಾ ನ್ಯಾಯಾಲಯವು ಎಲ್ಲಾ ಹಂತಕರಿಗೆ ಮರಣದಂಡನೆ ಘೋಷಿಸಿತ್ತು. ಮರಣದಂಡನೆಯನ್ನು ಸುಪ್ರೀಂ ಕೋರ್ಟ್‌ 1999ರಲ್ಲಿ ಎತ್ತಿಹಿಡಿದಿತ್ತು.

ಮುರುಗನ್, ಶಾಂತನ್‌ ಮತ್ತು ಎ.ಜಿ.ಪೇರರಿವಾಳನ್‌ ಅವರು ಕ್ಷಮಾಪಣಾ ಅರ್ಜಿ ಸಲ್ಲಿಸಿದ್ದರು.

ಅರ್ಜಿಯು ಇತ್ಯರ್ಥವಾಗದೇ ದೀರ್ಘಾವಧಿ ಕಳೆದಿದೆ ಎಂಬ ಆಧಾರದಲ್ಲಿ 2014ರಲ್ಲಿ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಲಾಗಿತ್ತು.

ಆನಂತರ ಎ.ಜಿ.ಪೇರರಿವಾಳನ್ ಅವಧಿಪೂರ್ವ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದರು. 

ಅಕಾಲಿಕ ಮಳೆಯಿಂದ ಖಾರಿಫ್‌ ಬೆಳೆಗಳ ಮೇಲೆ ನಕಾರಾತ್ಮಕ ಪರಿಣಾಮ: ಎಸ್‌ಬಿಐ ವರದಿ! 

ಜೈಲಿನಲ್ಲೇ ಅಪರಾಧಿಯ ಹೆರಿಗೆ ಆಗಿತ್ತು!

ರಾಜೀವ್‌ ಗಾಂಧಿ ಅವರ ಹಂತಕರಲ್ಲಿ ಒಬ್ಬರಾಗಿರುವ ನಳಿನಿ ಅವರ ಹೆರಿಗೆ ಕಾರಾಗೃಹದಲ್ಲೇ ಆಗಿತ್ತು.

ರಾಜೀವ್ ಹಂತಕರಲ್ಲಿ ಒಬ್ಬರಾದ ಮುರುಗನ್, ನಳಿನಿ ಅವರ ಪತಿ. ಬಂಧನವಾದಾಗ ನಳಿನಿ ಗರ್ಭಿಣಿಯಾಗಿದ್ದರು.

ಜೈಲಿನಲ್ಲೇ ಅವರಿಗೆ ಹೆರಿಗೆಯಾಗಿತ್ತು. ಐದು ವರ್ಷದವರೆಗೆ ಅವರ ಮಗಳನ್ನು ಜೈಲಿನಲ್ಲೇ ಬೆಳೆಸಲಾಗಿತ್ತು. ಆನಂತರ ಕುಟುಂಬದ ಸದಸ್ಯರ ಮಗುವನ್ನು ನೀಡಲಾಗಿತ್ತು. 

ಇದೀಗ ನಳಿನಿ ಅವರ ಮಗಳು ಈಗ ಬ್ರಿಟನ್‌ನಲ್ಲಿದ್ದು, ವೈದ್ಯಕೀಯ ಪದವಿ ಓದುತ್ತಿದ್ದಾರೆ.   

Published On: 12 November 2022, 10:29 AM English Summary: Release of Rajiv Gandhi assassins: Sonia Gandhi apologizes, do you know the background of the release?

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.