1. ಸುದ್ದಿಗಳು

ರಾಜ್ಯ ಸರ್ಕಾರದ ಗೂಂಡಾಗಿರಿ ಸಚಿವರ ಪಟ್ಟಿ ಬಿಡುಗಡೆ, ಮಾಡಿದ್ಯಾರು ?

Hitesh
Hitesh
Released the list of goon minister of the state government, who did it?

ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಯಾಗದೆ ಇದ್ದರೂ, ಇದೀಗ ಕಾಂಗ್ರೆಸ್‌ಗೆ ಪ್ರಭಲವಾಗಿ ವಿರೋಧ ವ್ಯಕ್ತಪಡಿಸುವಲ್ಲಿ ಬಿಜೆಪಿ ಯಶಸ್ವಿಯಾಗುತ್ತಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯ ನಡುವೆ ವಾಕ್ಸಮರ ಮುಂದುವರಿದಿದೆ.

ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌ನ ಮೈತ್ರಿ ಮಾತುಕತೆಯೂ ನಡೆಯುತ್ತಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತುಘಲಕ್ ದರ್ಬಾರಿನ ಸಚಿವ ಸಂಪುಟದಲ್ಲಿ ಗೂಂಡಾಗಿರಿ

ಸಚಿವರ ಪಟ್ಟಿ ಎಂದು ರಾಜ್ಯದ ಸಚಿವರ ವಿರುದ್ಧ ಬಿಜೆಪಿ ಬಿಡುಗಡೆ ಮಾಡಿರುವ ಸಚಿವರ ಹೆಸರಿನ ವಿವರ ಈ ರೀತಿ ಇದೆ.

@ ಪ್ರತಿಭಟನೆ ಮಾಡುವ ಸಂಘಟನೆಗಳನ್ನು ಬೆದರಿಸುವ ಮೂಲಕ ಧಮ್ಕಿ ಹಾಕುವ ಡಿಸಿಎಂ ಡಿ. ಕೆ. ಶಿವಕುಮಾರ್..!

@ ಜಾತಿ ನಿಂದನೆ ಮಾಡಿ ಮಹಿಳೆ ಮೇಲೆ ಹಲ್ಲೆ ಮಾಡುವ ಪುಡಿರೌಡಿ ವರ್ತನೆಯ ಸಚಿವ ಡಿ. ಸುಧಾಕರ್..!

@ ವರ್ಗಾವಣೆ ದಂಧೆ, ಅಧಿಕಾರಿಗಳಿಗೆ ಕಲೆಕ್ಷನ್ ಟಾರ್ಗೆಟ್, ಕೆಎಸ್ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಯತ್ನ,

ರೈತರಿಗೆ ಬೆದರಿಕೆ ಹಾಕುವ ಕೃಷಿ ಸಚಿವ ಚೆಲುವರಾಯಸ್ವಾಮಿ..!

@ ಕ್ಷೇತ್ರದಲ್ಲಿ ಗೂಂಡಾ ಪಡೆಯನ್ನು ಬಿಟ್ಟು ಅಧಿಕಾರಿಗಳ ಮೇಲೆ ಹಲ್ಲೆ ಮಾಡಿಸುವ ಸಚಿವ ಪ್ರಿಯಾಂಕ್ ಖರ್ಗೆ..!

@ ತನ್ನ ಸಹೋದರಿ ಮಿನಿಸ್ಟರ್ ಎನ್ನುವ ಕಾರಣಕ್ಕೆ ಮಾಧ್ಯಮದವರಿಗೆ ಅವಾಜ್

ಹಾಕಿ ಧಮ್ಕಿ ಹಾಕುವ ಸಚಿವೆ ಲಕ್ಣ್ಮಿ ಹೆಬ್ಬಾಳ್ಕರ್‌ ಸಹೋದರ ಚೆನ್ನರಾಜ್ ಹಟ್ಟಿಹೊಳಿ..!

@ ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂತ ಉಡಾಫೆ ಮಾತನಾಡುವ ಸಚಿವ ಶಿವಾನಂದ ಪಾಟೀಲ್..!

ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ಗೂಂಡಾ ವರ್ತನೆ ತೋರಿ ಬಾಯಿ ಮುಚ್ಚಿಸುವ

ಘನಂದಾರಿ ಕೆಲಸವನ್ನು ಸಿದ್ದರಾಮಯ್ಯ ಅವರ ಸಂಪುಟ ಮಾಡುತ್ತಿದೆ ಎಂದು ಹೇಳಿದೆ.  

Published On: 13 September 2023, 11:10 AM English Summary: Released the list of goon minister of the state government, who did it?

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.