ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇಂದಿರಾ ಕ್ಯಾಂಟೀನ್‌ಗೆ ಮರುಜೀವ ಸಿಕ್ಕಿದೆ.
ಇದೀಗ ಇಂದಿರಾ ಕ್ಯಾಂಟೀನ್ ವೆಚ್ಚಕ್ಕೆ 50;50 ಸೂತ್ರ ರೂಪಿಸಲಾಗುತ್ತಿದೆ.
ಇಂದಿರಾ ಕ್ಯಾಂಟೀನ್‌ಗಳ ಪುನರಾರಂಭದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ರಾಜ್ಯದಲ್ಲಿ ಬಡವರು ಹಾಗೂ ನಿರ್ಗತಕರಿಗೆ ಕಡಿಮೆ ವೆಚ್ಚದಲ್ಲಿ ಸ್ವಸ್ಥ ಹಾಗೂ ಶುಚಿಕರ ಆಹಾರವನ್ನು ನೀಡುವ ಉದ್ದೇಶದಿಂದ
ಮೊದಲ ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮಹತ್ವಾಕಾಂಕ್ಷಿ
ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಪರಿಚಯಿಸಿದ್ದರು.
ಆದರೆ, ಕಾಲಾಂತರದಲ್ಲಿ ಆಡಳಿತ ಬದಲಾವಣೆ ಹಾಗೂ ಅನುದಾನದ ಕೊರತೆಯಿಂದ ಇಂದಿರಾ ಕ್ಯಾಂಟೀನ್ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಂಡಿತ್ತು.
ಇದೀಗ ಇಂದಿರಾ ಕ್ಯಾಂಟೀನ್‌ಗಳ ಪುನರಾರಂಭ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಇಂದಿರಾ ಕ್ಯಾಂಟೀನ್‌ಗಳನ್ನು ಮತ್ತೆ ಪ್ರಾರಂಭಿಸುವುದರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಇಂದಿರಾ ಕ್ಯಾಂಟೀನ್ ಯೋಜನೆ ಪುನರ್ ಚಾಲನೆ ಹಾಗೂ ಕ್ಯಾಂಟೀನ್‌ಗಳ ಸಂಖ್ಯೆ ಹೆಚ್ಚಳ ಕುರಿತಾಗಿ ಮುಖ್ಯಮಂತ್ರಿ
Siddaramaiah ಅವರು ಸೋಮವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್‌ಗೆ
ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು.
ಆದರೆ ಈಗ ಬಿಬಿಎಂಪಿಯು ಶೇ.50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ.
ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ
ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ.
ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ
ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ,
ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ
ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಅನುದಾನ ಕೊರತೆಯಿಂದ ಕಳೆಗುಂದಿದ್ದ ಇಂದಿರಾ ಕ್ಯಾಂಟೀನ್
ಬೆಂಗಳೂರಿನಲ್ಲಿ ಈ ಹಿಂದೆ ಸಿದ್ದರಾಮಯ್ಯ ಅವರ ಆಡಳಿತದ ಅವಧಿಯಲ್ಲಿ 171 ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಲಾಗಿತ್ತು.
ಅವುಗಳಲ್ಲಿ 20ಕ್ಕೂ ಹೆಚ್ಚು ಮೊಬೈಲ್ ಕ್ಯಾಂಟೀನ್‌ಗಳನ್ನು ಸಹ ಪ್ರಾರಂಭಿಸಲಾಗಿತ್ತು. ಆದರೆ, ಅನುದಾನದ ಕೊರತೆಯಿಂದ
ಇಂದಿರಾ ಕ್ಯಾಂಟೀನ್‌ಗಳು ಕಳೆಗುಂದಿದ್ದವು. ಅಲ್ಲದೇ ಬೆಂಗಳೂರಿನ ಎಂಟು ವಲಯಗಳಲ್ಲಿ ಅಂದಾಜು 40 ಲಕ್ಷರೂ.
ಇಂದಿರಾ ಕ್ಯಾಂಟೀನ್‌ಗಳಿಗೆ ನೀರಿನ ಬಿಲ್ ಉಳಿಕೆ ಇದೆ. ಹೀಗಾಗಿ, ಕೆಲವು ಕಡೆಗಳಲ್ಲಿ ನೀರು ಪೂರೈಕೆಯಲ್ಲೂ ವ್ಯತ್ಯಾಸವಾಗಿದೆ.
ಈ ಹಿಂದೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಪ್ರಾರಂಭದ ಹಂತದಲ್ಲಿ 145 ಕೋಟಿ ರೂ.ಅನುದಾನ
ಮೀಸಲಿಡುವ ಮೂಲಕ ರಾಜ್ಯಾದ್ಯಂತ 400 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿತ್ತು.
ಆದರೆ, ನಂತರದಲ್ಲಿ ಇಂದಿರಾ ಕ್ಯಾಂಟೀನ್‌ನ ನಿರ್ವಹಣೆ ಹಾಗೂ ಅನುದಾನ ಹೊಂದಾಣಿಕೆಯನ್ನು ಸಂಸ್ಥೆಗಳಿಗೆ ಹೆಗಲಿಗೆ ವರ್ಗಾಹಿಸಿತ್ತು.
ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ನ ನಿರ್ವಹಣೆಗೆ ಹಣಕಾಸಿನ ಕೊರತೆ ಉಂಟಾಗಿತ್ತು.
ಇನ್ನು ಈ ಹಿಂದೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಮಂಡಿಸಲಾಗಿದ್ದ ಬಜೆಟ್‌ನಲ್ಲಿಯೂ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಹಣ ಮೀಸಲಿರಿಸಿರಲಿಲ್ಲ.
ಪಾಲಿಕೆ ಕ್ಯಾಂಟೀನ್‌ಗಳ ನಿರ್ವಹಣೆಗೆ ತಗಲುವ ವೆಚ್ಚದಲ್ಲಿ ಶೇ.50 ರಷ್ಟು ಭರಿಸುವಂತೆ ಮನವಿ ಮಾಡಲಾಗಿತ್ತಾದರೂ,
ಅದಕ್ಕೂ ನಿರೀಕ್ಷಿತ ಸ್ಪಂದನೆ ಸಿಕ್ಕಿರಲಿಲ್ಲ. ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ನೀಡಲು ಹಿಂದೇಟು ಹಾಕಿತ್ತು.
ಅಲ್ಲದೇ ಈ ನಡುವೆ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುವ ಬಗ್ಗೆಯೂ ಚರ್ಚೆ ನಡೆದಿತ್ತು. 2022-23ರ ಬಜೆಟ್‌ನಲ್ಲಿ
ಬಿಬಿಎಂಪಿ 50 ಕೋಟಿ ರೂ ಅನುದಾನ ಮೀಸಲಿರಿಸಿತ್ತು.
ಚಿತ್ರಕೃಪೆ: @CMofKarnataka