1. ಸುದ್ದಿಗಳು

Property Tax ಆಸ್ತಿ ತೆರಿಗೆ ಪಾವತಿ ಶೇ.5ರಷ್ಟು ವಿನಾಯಿತಿ ವಿಸ್ತರಿಸಲು ಮನವಿ

Hitesh
Hitesh
Request to extend exemption of 5% of property tax payment

ರಾಜ್ಯದ ಪ್ರಮುಖ ಮಹಾನಗರ ಪಾಲಿಕೆಯಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶೇ.5ರಷ್ಟು ಆಸ್ತಿ ತೆರಿಗೆ ವಿನಾಯ್ತಿ ಅವಧಿಯನ್ನು ವಿಸ್ತರಿಸಲು ಮನವಿ ಮಾಡಲಾಗಿದೆ.

ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ  ಶೇ5%ರಷ್ಟು ರಿಯಾಯಿತಿಗೆ ಜೂನ್ ವರಗೆ ವಿಸ್ತರಿಸಲು ಮನವಿ ಮಾಡಲಾಗಿದೆ.  

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಸುತ್ತಿರುವ ತೆರಿಗೆದಾರರಿಗೆ

ಶೇ 5% ರಷ್ಟು ರಿಯಾಯಿತಿ ಅನ್ನು ವಿಸ್ತರಿಸುವ ಕುರಿತು ಮನವಿ ಪತ್ರವನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ

ಮಾಜಿ ಆಡಳಿತ ಪಕ್ಷದ ನಾಯಕ ಎಂ. ಶಿವರಾಜು ಅವರು, ಮಾಜಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಅವರು,

ಮಾಜಿ ಮಹಾನಗರ ಪಾಲಿಕೆ ಸದಸ್ಯ ಮೋಹನ್ ಕುಮಾರ್ ಅವರು ಮನವಿ ಸಲ್ಲಿಸಿದರು. 

ಬಿಬಿಎಂಪಿ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಆಸ್ತಿ ತೆರಿಗೆಯನ್ನು

ಪಾವತಿಸುವ ತೆರಿಗೆದಾರರಿಗೆ ಶೇ.5 ರಷ್ಟು ರಿಯಾಯಿತಿ ಅನ್ನು ನೀಡಲಾಗುತ್ತಿತ್ತು.

ಆದರೆ, 2023-24ನೇ ಸಾಲಿನಲ್ಲಿ, ಏಪ್ರಿಲ್ ತಿಂಗಳಿನಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿದ ತೆರಿಗೆದಾರರಿಗೆ

ಮಾತ್ರ ಶೇ.5 ರಷ್ಟು ರಿಯಾಯಿತಿಯನ್ನು ನೀಡಲಾಗಿರುತ್ತದೆ.

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಕೆಲಸಗಳು ಚಾಲ್ತಿಯಲ್ಲಿದ್ದ ಕಾರಣ ಕಂದಾಯ ವಿಭಾಗದ ಎಲ್ಲಾ

ಸಿಬ್ಬಂದಿ ಚುನಾವಣಾ ಕೆಲಸ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದು, ಹಲವಾರು ತೆರಿಗೆದಾರರು ನಿಗದಿತ

ಸಮಯದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಲು ಸಾಧ್ಯವಾಗಿರುವುದಿಲ್ಲ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತರಿಗೆ ನೀಡಿರುವ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.  

Request to extend exemption of 5% of property tax payment

ಪ್ರಸುತ್ತ ಚುನಾವಣೆ ಕೆಲಸ ಕಾರ್ಯಗಳು ಮುಕ್ತಾಯಗೊಂಡಿರುವುದರಿಂದ ಹಾಗೂ ಸಾರ್ವಜನಿಕರ ಆಥಿ೯ಕ ಹಿತದೃಷ್ಟಿಯಿಂದ

ಪ್ರತಿ ವರ್ಷದಂತೆ ನಿಗಧಿತ ಸಮಯದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸುವ ತೆರಿಗೆದಾರರಿಗೆ ಶೇಕಡ 5%ರಷ್ಟು

ರಿಯಾಯಿತಿ ಅನ್ನು 1 ತಿಂಗಳು ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದರು.   

Published On: 17 May 2023, 03:17 PM English Summary: Request to extend exemption of 5% of property tax payment

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.