News

Rozgar Mela : ನಾಳೆ 71,000 ನೇಮಕಾತಿ ಪತ್ರಗಳನ್ನ ವಿತರಿಸಲಿದ್ದಾರೆ ಪ್ರಧಾನಿ ಮೋದಿ

15 May, 2023 3:23 PM IST By: Maltesh
Rozgar Mela: Prime Minister Modi will distribute 71,000 appointment letters tomorrow

ರೋಜ್ಗಾರ್ ಮೇಳದ ಅಡಿಯಲ್ಲಿ ಮೇ 16 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿರುವ ಪ್ರಧಾನ ಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಮೇ 16 ರಂದು ಬೆಳಗ್ಗೆ 10:30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಈ ನೇಮಕಗೊಂಡವರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್ಗಾರ್ ಮೇಳ ನಡೆಯಲಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರಿ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು / ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ಗ್ರಾಮೀಣ ಡಾಕ್ ಸೇವಕ್, ಇನ್ಸ್ ಪೆಕ್ಟರ್ ಆಫ್ ಪೋಸ್ಟ್, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್,

ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಅಕೌಂಟ್ಸ್ ಕ್ಲರ್ಕ್, ಟ್ರ್ಯಾಕ್ ಮೆಂಟೇನರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಲೋವರ್ ಡಿವಿಷನ್ ಕ್ಲರ್ಕ್, ಸಬ್ ಡಿವಿಜನಲ್ ಆಫೀಸರ್, ಟ್ಯಾಕ್ಸ್ ಅಸಿಸ್ಟೆಂಟ್, ಅಸಿಸ್ಟೆಂಟ್ ಜಾರಿ ಆಫೀಸರ್, ಇನ್ಸ್ ಪೆಕ್ಟರ್, ನರ್ಸಿಂಗ್ ಆಫೀಸರ್, ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್, ಫೈರ್ಮ್ಯಾನ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಆಡಿಟ್ ಆಫೀಸರ್ ಮುಂತಾದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ವಿಭಾಗೀಯ ಲೆಕ್ಕಾಧಿಕಾರಿ, ಲೆಕ್ಕ ಪರಿಶೋಧಕ, ಕಾನ್ಸ್ ಸ್ಟೇಬಲ್, ಹೆಡ್ ಕಾನ್ಸ್ ಸ್ಟೇಬಲ್, ಸಹಾಯಕ ಕಮಾಂಡೆಂಟ್, ಪ್ರಾಂಶುಪಾಲರು, ತರಬೇತಿ ಪಡೆದ ಪದವೀಧರ ಶಿಕ್ಷಕರು, ಸಹಾಯಕ ರಿಜಿಸ್ಟ್ರಾರ್, ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ಇತರರು ಸೇರಿದ್ದಾರೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿ ಅವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳ ಒಂದು ಹೆಜ್ಜೆಯಾಗಿದೆ. ರೋಜ್ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಕರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.

ಹೊಸದಾಗಿ ನೇಮಕಗೊಂಡವರು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಎಲ್ಲರಿಗೂ ಆನ್ ಲೈಲ್  ಓರಿಯಂಟೇಶನ್ ಕೋರ್ಸ್ ಆಗಿರುವ ಕರ್ಮಯೋಗಿ ಪ್ರಾರಂಭದ ಮೂಲಕ ತರಬೇತಿ ಪಡೆಯುವ ಅವಕಾಶವನ್ನು ಸಹ ಪಡೆಯುಲಿದ್ದಾರೆ.