ರಾಜ್ಯದಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದೆ.
ರಾಜ್ಯದ ವಿವಿಧ ಭಾಗದಲ್ಲಿ ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು ಮತ್ತು
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.
ಕರಾವಳಿಯಲ್ಲಿ ವ್ಯಾಪಕವಾಗಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಮಂಗಳವಾರ ಹಾಗೂ ಬುಧವಾರ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಗುಡುಗು ಬಿರುಗಾಳಿಯ ಮುನ್ನೆಚ್ಚರಿಕೆ: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗಿನ ಸಾಧ್ಯತೆ ಇದ್ದು,
ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ವರದಿ ಆಗಿಲ್ಲ.
ಇನ್ನು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ
ಹಗುರ,ಮಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಅಲ್ಲದೇ ಗರಿಷ್ಠ ಉಷ್ಣಾಂಶವು
29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಮಾಣಿ (ದಕ್ಷಿಣ ಕನ್ನಡ ಜಿಲ್ಲೆ) 4;
ಮಂಗಳೂರು, ಧರ್ಮಸ್ಥಳ, ಸುಳ್ಯ (ಎಲ್ಲಾ ದಕ್ಷಿಣ ಕನ್ನಡ ಜಿಲ್ಲೆ), ಉಡುಪಿ, ಸಿದ್ದಾಪುರ (ಉಡುಪಿ ಜಿಲ್ಲೆ), ಹೊನ್ನಾವರ,
ವಿಜಯಪುರ, ತಾಳಿಕೋಟೆ (ವಿಜಯಪುರ ಜಿಲ್ಲೆ), ಖಜೂರಿ (ಕಲಬುರ್ಗಿ ಜಿಲ್ಲೆ), ಶೋರಾಪುರ, ಸೈದಾಪುರ (ಎರಡೂ ಯಾದಗಿರಿ ಜಿಲ್ಲೆ) ತಲಾ 3;
ಮಂಗಳೂರು ವಿಮಾನ ನಿಲ್ದಾಣ, ಕೋಟ, ಕೊಲ್ಲೂರು (ಎರಡೂ ಉಡುಪಿ ಜಿಲ್ಲೆ), ಶಿರಾಲಿ, ಗೇರುಸೊಪ್ಪ, ಯಲ್ಲಾಪುರ,
ಕ್ಯಾಸಲ್ ರಾಕ್ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಚಿಂಚೋಳಿ, ಮಹಾಗಾಂವ್ (ಎರಡೂ ಕಲಬುರ್ಗಿ ಜಿಲ್ಲೆ),
ಕವಡಿಮಟ್ಟಿ ಎಆರ್‌ಜಿ (ಯಾದಗಿರಿ ಜಿಲ್ಲೆ), ರಾಯಚೂರು, ಗಬ್ಬರು (ರಾಯಚೂರು ಜಿಲ್ಲೆ), ಮಂಡಗದ್ದೆ (ಶಿವಮೊಗ್ಗ ಜಿಲ್ಲೆ), ಶೃಂಗೇರಿ,
ಕೊಟ್ಟಿಗೆಹಾರ (ಎರಡೂ ಚಿಕ್ಕಮಗಳೂರು ಜಿಲ್ಲೆ) ತಲಾ 2; ಪಣಂಬೂರು, ಮೂಲ್ಕಿ, ಬೆಳ್ತಂಗಡಿ, ಪುತ್ತೂರು, ಉಪ್ಪಿನಂಗಡಿ
(ಎಲ್ಲಾ ದಕ್ಷಿಣ ಕನ್ನಡ ಜಿಲ್ಲೆ), ಮಂಕಿ, ಕುಮಟಾ, ಕಿರವತ್ತಿ, ಮಂಚಿಕೇರಿ, ಜೋಯಿಡಾ, ಮುಂಡಗೋಡು (ಎಲ್ಲಾ ಉತ್ತರ ಕನ್ನಡ ಜಿಲ್ಲೆ),
ಅಣ್ಣಿಗೇರಿ (ಧಾರವಾಡ ಜಿಲ್ಲೆ), ಕಮಲಾಪುರ (ಕಲಬುರ್ಗಿ ಜಿಲ್ಲೆ), ಕೆಂಭಾವಿ (ಯಾದಗಿರಿ ಜಿಲ್ಲೆ), ಕುರ್ಡಿ (ರಾಯಚೂರು ಜಿಲ್ಲೆ), ನಾಪೋಕ್ಲು,
ಪೊನ್ನಂಪೇಟೆ, ವಿರಾಜಪೇಟೆ, ಸೋಮವಾರಪೇಟೆ (ಎಲ್ಲಾ ಕೊಡಗು ಜಿಲ್ಲೆ), ಜಯಪುರ, ಬಾಳೆಹೊನ್ನೂರು (ಎರಡೂ ಚಿಕ್ಕಮಗಳೂರು ಜಿಲ್ಲೆ),
ಆನೇಕಲ್ (ಬೆಂಗಳೂರು ನಗರ ಜಿಲ್ಲೆ), ದಾವಣಗೆರೆ ಪಿಟಿಒ ಕುಣಿಗಲ್ (ತುಮಕೂರು ಜಿಲ್ಲೆ), ರಾಮನಗರ ತಲಾ 1 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.
Photo Courtesy: Pexels