1. ಸುದ್ದಿಗಳು

ಪಿಯುಸಿ, ಪದವಿ, ಸ್ನಾತಕೋತ್ತರ ಅಧ್ಯಯನಕ್ಕಾಗಿ 35 ಸಾವಿರವರೆಗೆ ಪ್ರೋತ್ಸಾಹ ಧನ- ಫೆ. 15 ರೊಳಗೆ ಅರ್ಜಿ ಸಲ್ಲಿಸಿ

cash

ಆರ್ಥಿಕ ಸಮಸ್ಯೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳ ತಮ್ಮ ವಿಧ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಬಾರದೆಂಬ ಉದ್ದೇಶದಿಂದ ಸರ್ಕಾರವು ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರೋತ್ಸಾಹ ಧನ ನೀಡುತ್ತದೆ. ಎಸ್ಎಸ್ಎಲ್.ಸಿ ನಂತರ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಅಧ್ಯಯನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 20 ರಿಂದ 35 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು.

ಹೌದು, ಸಮಾಜ ಕಲ್ಯಾಣ ಇಲಾಖೆಯಿಂದ ಪಿಯುಸಿ, ಪಾಲಿಟೆಕ್ನಿಕ್ ಡಿಪ್ಲೊಮಾ ಓದುವ ಅಭ್ಯರ್ಥಿಗಳಿಗೆ 20 ಸಾವಿರ, ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ, ಎಂಎ, ಎಮ್ಎಸ್ಸಿ ವಿದ್ಯಾರ್ಥಿಗಳಿಗೆ 30 ಸಾವಿರ ಇಂಜಿನಿಯರಿಂಗ್, ಅಗ್ರಿ, ವೆಟರ್ನರಿ, ಮೆಡಿಕಲ್ ಓದುವ ವಿದ್ಯಾರ್ಥಿಗಳಿಗೆ 35 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು.

ಕೊರೋನಾದಿಂದಾಗಿ ಈ ವರ್ಷ ಕಾಲೇಜುಗಳು ತಡವಾಗಿ ಆರಂಭವಾಗಿದ್ದರಿಂದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 15ರವರೆಗೆ ಕಾಲಾವಕಾಶ ನೀಡಲಾಗಿದೆ. ಇದಕ್ಕಾಗಿ ನೀವು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು https://sw.kar.nic.in/swprizemoney/Home.aspx?ReturnUrl=%2fswprizemoney%2f ಈ ಲಿಂಕ್ ಮೇಲೆ ಕ್ಲಿಕ್ ಮಾಡಬಹುದು. ಅಥವಾ https://sw.kar.nic.in/index.aspx  ಕ್ಲಿಕ್  ಮಾಡಿದ ನಂತರ ಸಮಾಜ ಕಲ್ಯಾಣ ಇಲಾಖೆಯ ವೆಬ್ ಪೇಜ್ ತೆರೆಯುತ್ತದೆ. ಅಲ್ಲಿ ಬಲಗಡೆ ನೀವು ಕನ್ನಡ ಅಥವಾ ಇಂಗ್ಲೀಷ್ ನಿಮಗೆ ಯಾವುದು ಅನುಕೂಲವಾಗುತ್ತದೆಯೋ ಆ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಬಲಗಡೆ ಮೆಟ್ರಿಕ್ ನಂತರ (ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ) ಪ್ರೋತ್ಸಾಹ ಧನದ ಮೇಲೆ ಕ್ಲಿಕ್ ಮಾಡಬೇಕು. ನಂತರ ಆನ್ಲೈನ್ ಅಪ್ಲಿಕೇಷನ್ ಹಾಕಲು ವೆಬ್ ಪೇಟ್ ತೆರೆಯಲ್ಪಡುತ್ತದೆ.

Online Application (passed in 20202 only) ಆಫ್ಶನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಸಂಖ್ಯೆಯೊಂದಿಗೆ ಅರ್ಜಿ ಸಲ್ಲಿಸಬೇಕು.ಅಥವಾ ಈ ಮುಂದಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

https://sw.kar.nic.in/swprizemoney/WebPages/validation.aspx  2020 ರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳೇ ಪ್ರೋತ್ಸಾಹ ಧನ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಅಥವಾ ಸಮಾಜ ಕಲ್ಯಾಣ ಇಲಾಖೆಗೆ ಸಂಪರ್ಕಿಸಬಹುದು.

Published On: 05 February 2021, 08:54 AM English Summary: scholarship for higher education

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.