ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹಲವಾರು ಸಂಘ-ಸಂಸ್ಥೆಗಳು, ಉದ್ಯಮಿಗಳು, ಸರ್ಕಾರ ಹೀಗೆ ಹಲವಾರು ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮುಂದೆ ಬರುತ್ತಾರೆ.ಆದರೆ ವಿದ್ಯಾರ್ಥಿಗಳು ಸಮಯಕ್ಕನುಸಾರವಾಗಿ ಅರ್ಜಿಯನ್ನು ಸಲ್ಲಿಸಿ ಅದರ ಲಾಭವನ್ನು ಪಡೆದುಕೊಳ್ಳುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ, ಅಂತದೊಂದು ಶಿಷ್ಯವೇತನಕ್ಕಾಗಿ ಅರ್ಜಿ ಪ್ರಾರಂಭವಾಗಿದ್ದುಅರ್ಹ ವಿದ್ಯಾರ್ಥಿಗಳು ಆದಷ್ಟು ಬೇಗನೆ ಅರ್ಜಿಯನ್ನು ಸಲ್ಲಿಸಿ ಅದರ ಲಾಭವನ್ನು ಪಡೆದುಕೊಳ್ಳಬೇಕಾಗಿ ವಿನಂತಿ.
ಸಂತ ನಾಮದೇವ ವಿದ್ಯಾವರ್ಧಕ ಟ್ರಸ್ಟ್22 ನೇ ವಾರ್ಷಿಕೋತ್ಸವದ ನಿಮಿತ್ತವಾಗಿ ನಾಮದೇವ ಸಿಂಪಿ ಸಮಾಜದ ವಿದ್ಯಾರ್ಥಿಗಳಿಗಾಗಿ ಶಿಷ್ಯವೇತನ ಹಾಗೂ ಪ್ರತಿಭಾ ಪುರಸ್ಕಾರ ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ವಿವಿ, ವಿಟಿಯು,ಕಿತ್ತೂರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಹಂಪಿ ಕನ್ನಡ ವಿವಿ,ಅಕ್ಕಮಹಾದೇವಿ ಮಹಿಳಾ ವಿವಿ,ಜಾನಪದ ಮತ್ತು ಕಾನೂನು ವಿಶ್ವವಿದ್ಯಾಲಯ ಗಳಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಾಯವನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಎಸೆಸೆಲ್ಸಿ ಅಥವಾ ಪಿಯುಸಿಯಲ್ಲಿ ಮೊದಲಬಾರಿಗೆ ಉತ್ತೀರ್ಣರಾಗಿರಬೇಕು. ಅಂತಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಜೆರಾಕ್ಸ್, ಮೊಬೈಲ್ ನಂಬರ ಗಳನ್ನುಜನವರಿ 25 ರೊಳಗಾಗಿ ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ಆರ್.ಎನ್.ಪಾಸ್ತೆ, ಅಧ್ಯಕ್ಷರು no.205 ರವಿ ನಗರ, ಗೋಕುಲ ರಸ್ತೆ,ಹುಬ್ಬಳ್ಳಿ-580030 ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-9019697577 ಗೆಸಂಪರ್ಕಿಸಿ.