1. ಸುದ್ದಿಗಳು

ಅಕ್ಟೋಬರ್ 15 ರವರೆಗೆ ಶಾಲಾ ಕಾಲೇಜು ಇಲ್ಲ

ದಿನದಿಂದ ದಿನಕ್ಕೋ ಕೊರೋನಾ ಸೋಂಕು ಹೆಚ್ಚು ಹರಡುತ್ತಿರುವಿದರಿಂದ ಸರ್ಕಾರಿ, ಅನುದಾನಿತ, ಅನುದಾನಿತರಹಿತ ಶಾಲಾ ಕಾಲೇಜುಗಳನ್ನು ಅಕ್ಪೋಬರ್ 15ರವರೆಗೆ ತೆರೆಯದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಮಾರ್ಗ ಸೂಚಿಯಂತೆ ಸೆ. 21ರಿಂದ ಕಂಟೈನ್ಮೆಂಟ್‌ ವಲಯ ಹೊರತುಪಡಿಸಿ 9ರಿಂದ 12ನೇ ತರಗತಿಗಳನ್ನು ತೆರೆದು ವಿದ್ಯಾರ್ಥಿಗಳಿಗೆ ಸಂದೇಹ ಪರಿಹಾರಕ್ಕಾಗಿ ಶಾಲೆಗೆ ಭೇಟಿ ನೀಡಲು ಅನುಮತಿ ನೀಡಲಾಗಿತ್ತು. ಆದರೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟಂಬರ್‌ ಅಂತ್ಯದ ವರೆಗೆ ವಿದ್ಯಾರ್ಥಿಗಳು ಭೇಟಿ ನೀಡದಿರಲು ಇಲಾಖೆ ಸೂಚಿಸಿತ್ತು. 

ಆದರೆ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ತೆರೆಯದಿರಲು ನಿರ್ಧರಿಸಿದೆ.

ಶಾಲಾ-ಕಾಲೇಜು, ಕೋಚಿಂಗ್ ಸೆಂಟರ್ ಪುನರಾರಂಭಿಸುವ ಬಗ್ಗೆ ಅಕ್ಟೋಬರ್ 15 ರ ಬಳಿಕ ರಾಜ್ಯ ಸರ್ಕಾರ. ಕೇಂದ್ರಾಡಳಿತ ಪ್ರದೇಶಗಳು ನಿರ್ಧಾರ ಕೈಗೊಳ್ಳಬಹುದೆಂದು ಜವಾಬ್ದಾರಿ ಹಸ್ತಾಂತರಿಸಿದೆ. ಎಲ್ಲಾ ವಿಧದ ಶಿಕ್ಷಣದಲ್ಲಿ ಆನೈ ಲೈನ್ ಅಥವಾ ದೂರ ಶಿಕ್ಷಣದ ಮೂಲಕ ಕಲಿಕೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಶಾಲಾ ಕಾಲೇಜುಗಳಲ್ಲಿ ಪಾಲಿಸಬೇಕಾದ ಸುರಕ್ಷತಾ ಮತ್ತು ನಿಯಮಗಳನ್ನು ರಾಜ್ಯ ಸರ್ಕಾರಗಳು ಸಿದ್ದಪಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಚಿತ್ರಮಂದಿರ ತೆರೆಯಲು ಅವಕಾಶ:

 ಚಿತ್ರಮಂದಿ‌ರಗಳು ಹಾಗೂ ಮಲ್ಟಿಪ್ಲೆಕ್ಸ್‌ ಪುನರಾರಂಭಕ್ಕೆ ಕೇಂದ್ರ ಸರ್ಕಾರ  ಅನುಮತಿ ನೀಡಿದೆ. ಕಂಟೈನ್‌ಮೆಂಟ್‌ ವಲಯಗಳನ್ನು ಹೊರತುಪಡಿಸಿ ಉಳಿದೆಡೆ ಅಕ್ಟೋಬರ್‌ 15ರಿಂದ ಚಿತ್ರಮಂದಿರಗಳನ್ನು ತೆರೆಯ ಬಹುದು. ಚಿತ್ರಮಂದಿರದ ಒಟ್ಟು ಆಸನ ಸಾಮರ್ಥ್ಯದ ಶೇಕಡ 50ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಬೇಕು ಎಂದು ಸೂಚಿಸಲಾಗಿದೆ.

 ಕ್ರೀಡಾಪಟುಗಳ ತರಬೇತಿಗಾಗಿ ಬಳಸುವ ಈಜುಕೊಳಗಳನ್ನು ಆರಂಭಿಸಲು ಅವಕಾಶ ನೀಡಲಾಗಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯದ ಎಸ್‌ಒಪಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಮನರಂಜನಾ ಪಾರ್ಕ್‌ಗಳ ಆರಂಭಕ್ಕೂ ಅವಕಾಶ ನೀಡಲಾಗಿದೆ.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.