ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿದಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ
ಬಹಳಷ್ಟು ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 16.5 ಡಿ.ಸೆ. ವಿಜಯಪುರ ದಲ್ಲಿ ದಾಖಲಾಗಿದೆ.
ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಒಳನಾಡಿನ ಒಂದೆರಡು
ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು
ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ ಹಾಗು ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ
ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಮುಂದಿನ 24 ಗಂಟೆಗಳು: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ;
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.
ಸಂಜೆ/ರಾತ್ರಿಯ ಸಮಯದಲ್ಲಿ ಹಗುರ ಮಳೆ/ಗುಡುಗು ಸಹಿತ ಮಾಳೆಯಾಗುವ ಸಾಧ್ಯತೆ ಇದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ.
ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ಸಮಯದಲ್ಲಿ ಒಂದೆರಡು ಬಾರಿ ಹಗುರದಿಂದ
ಸಾಧಾರಣ ಮಳೆಗುಡುಗು ಸಹಿತ ಮಾಳೆಯಾಗುವ ಬಹಳಷ್ಟು ಸಾಧ್ಯತೆ ಇರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ
ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬುಧವಾರ ಎಲ್ಲೆಲ್ಲಿ ಮಳೆಯಾಗಿದೆ ?
ಬುಧವಾರ ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):
ಗೋಕರ್ಣ, ಸಿದ್ದಾಪುರ (ಎರಡೂ ಉತ್ತರ ಕನ್ನಡ ಜಿಲ್ಲೆ) 3 ಸೆಂ.ಮೀ ಮಳೆಯಾಗಿರುವುದು ವರದಿಯಾಗಿದೆ. ಇನ್ನು ಕುಮಟಾ
ಗೇರುಸೊಪ್ಪ ಯಲ್ಲಾಪುರ, ಹಳಿಯಾಳ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ), ಧಾರವಾಡ, ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) ತಲಾ 2
ಹುಬ್ಬಳ್ಳಿ (ಧಾರವಾಡ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ಕಮ್ಮರಡಿ, ಕೊಪ್ಪ (ಎರಡೂ ಚಿಕ್ಕಮಗಳೂರು ಜಿಲ್ಲೆ), ತ್ಯಾಗರ್ತಿ (ಶಿವಮೊಗ್ಗ ಜಿಲ್ಲೆ) ತಲಾ 1 ಸೆಂ.ಮೀ
ಮಳೆಯಾಗಿರುವುದು ವರದಿಯಾಗಿದೆ.
Share your comments