ರಾಜ್ಯದಲ್ಲಿ ಇಂದಿನ ಹವಾಮಾನದಲ್ಲಿ ಗಮನಾರ್ಹ ಬದಲಾವಣೆ ಇಲ್ಲದಿದ್ದರೂ..
ಕರ್ನಾಟಕದಲ್ಲಿ ಮಂಗಳವಾರ ಹಾಗೂ ಬುಧವಾರ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡು ಬರದೆ ಇದ್ದರೂ
ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶವು 17.2 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ.
ನವೆಂಬರ್ 29 & 30 ಹವಾಮಾನ
ನವೆಂಬರ್ 29 ಹಾಗೂ ನವೆಂಬರ್ 30ರಂದು ಅಂದರೆ ಬುಧವಾರ ಹಾಗೂ ಗುರುವಾರದಂದು ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ
ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಉಳಿದಂತೆ ಭಾರೀ ಮಳೆ ಅಥವಾ ಮಿಂಚುಗುಡುಗಿಗೆ ಸಂಬಂಧಿಸಿದಂತೆ ಯಾವುದೇ ಮುನ್ನೆಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿಲ್ಲ.
ನವೆಂಬರ್ 29ರ ಬೆಳಿಗ್ಗೆ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ
ಮುಂದಿನ 24 ಗಂಟೆಯ ಅವಧಿ: ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ.
ಅಲ್ಲದೇ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಭಾಗದಲ್ಲಿ ಬೆಳಗಿನ ಜಾವ ಮೋಡ ಮುಸುಕಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.
ಗರಿಷ್ಠ ಉಷ್ಣಾಂಶವು 27 ಮತ್ತು ಕನಿಷ್ಠ ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
Share your comments