News

ವಿವಿಧ ತರಬೇತಿಗಾಗಿ ಅಕ್ಟೋಬರ್ 15 ರಂದು ಸಂದರ್ಶನ

07 October, 2020 8:30 PM IST By:

ಕಲಬುರಗಿ ನಗರದ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಕಿಟಸರ್ಡ್) ದಲ್ಲಿ ಅಕ್ಟೋಬರ್ 19ರಿಂದ 31ರವರೆಗೆ ಹದಿಮೂರು ದಿನಗಳ ಕಾಲ ಸಿಸಿಟಿವಿ ಕ್ಯಾಮೆರಾ, ಸೆಕ್ಯೂರಿಟಿ ಅಲಾರಮ್ ಮತ್ತು ಸ್ಮೋಕ್ ಡಿಟೆಕ್ಟರ್ ಅಳವಡಿಕೆ ಮತ್ತು ಸೇವೆ ತರಬೇತಿಗಾಗಿ 2020ರ ಅಕ್ಟೋಬರ್ 15ರಂದು ಬೆಳಗ್ಗೆ 10 ಗಂಟೆಗೆ  ಸಂದರ್ಶನ  ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಅಲ್ಪಸ್ವಲ್ಪ ಅನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ. ತರಬೇತಿ ಪಡೆಯಲಿಚ್ಛಿಸುವ ಜಿಲ್ಲೆಯ ಗ್ರಾಮೀಣ ಭಾಗದ 18 ರಿಂದ 45 ವರ್ಷದೊಳಗಿನ ಬಿಪಿಎಲ್ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಬಿಪಿಎಲ್ ಪಡಿತರ ಚೀಟಿ ಹಾಗೂ ಅಕೌಂಟ್ ಪಾಸ್‍ಬುಕ್‍ಗಳ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ಕಲಬುರಗಿಯ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊಬೈಲ್ ಸಂಖ್ಯೆ 9243602888, 9886781239 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.