ಏಳನೇ ವೇತನ ಆಯೋಗ ಹಾಗೂ ಹಳೇ ಪಿಂಚಣಿ ಜಾರಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಹಲವು ತಿಂಗಳುಗಳಿಂದ ಚರ್ಚೆ ನಡೆದಿದೆ.
ಇದೀಗ ಏಳನೇ ವೇತನ ಆಯೋಗ ಹಾಗೂ ಹಳೇ ಪಿಂಚಣಿ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ.
ಈ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿದ್ದು, ಮಹತ್ವದ ಅಪ್ಡೇಟ್ಸ್‌ವೊಂದನ್ನು ನೀಡಿದ್ದಾರೆ.
ಏಳನೇ ವೇತನ ಆಯೋಗ ಹಾಗೂ ಹಳೇ ಪಿಂಚಣಿ ಜಾರಿಗೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗ ರಚನೆ ಮಾಡಲಾಗಿದೆ.
ನವೆಂಬರ್ ಒಳಗಾಗಿ ವರದಿಯನ್ನು ಮಂಡಿಸುವಂತೆ ವೇತನ ಆಯೋಗಕ್ಕೆ ಸೂಚಿಸಲಾಗಿದ್ದು, ವರದಿ ಬಂದ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂದಿದ್ದಾರೆ. ಇನ್ನು ಹಳೆಯ ಪಿಂಚಣಿ ಜಾರಿಗೆ ಸರ್ಕಾರ ಬದ್ಧವಾಗಿದೆ.
ವರದಿ ನೀಡಲು ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಏಳನೇ ವೇತನ ಆಯೋಗ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಿ ನೌಕರರು ಕಳೆದ ಹಲವು ತಿಂಗಳುಗಳಿಂದ
ನಿರಂತರವಾಗಿ ಪ್ರತಿಭಟನೆ ಹಾಗೂ ಆಗ್ರಹಗಳನ್ನು ನಡೆಸಿದ್ದರು.
ಈ ಬೆಳವಣಿಗೆಗಳ ಬೆನ್ನಲ್ಲೇ ಏಳನೇ ವೇತನ ಆಯೋಗವನ್ನು ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
ಇದೀಗ ಏಳನೇ ವೇತನ ಆಯೋಗದ ವರದಿ ಸರ್ಕಾರದ ಮುಂದೆ
ಕೆಲವೇ ದಿನಗಳಲ್ಲಿ ಸರ್ಕಾರದ ಮುಂದೆ ಮಂಡನೆಯಾಗಲಿದೆ. ಈ ವರದಿಯ ಮಂಡನೆಯಾದ ನಂತರದಲ್ಲಿ ಸರ್ಕಾರ
ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.