1. ಸುದ್ದಿಗಳು

Shakti Yojana ಹೃದಯ ಸ್ಪರ್ಶಿ ಕ್ಷಣಗಳಿಗೆ ಸಾಕ್ಷಿಯಾದ ಶಕ್ತಿ ಯೋಜನೆ!

Hitesh
Hitesh
Shakti Yojana witnessing heart touching moments!

ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಹಾಗೂ ಮಹಿಳೆಯರಿಗೆ ಉಚಿತ ಬಸ್‌ ಸೇವೆ ಕಲ್ಪಿಸುವ ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಮಹಿಳೆಯರಿಂದ ಭರ್ಜರಿ ಪತ್ರಿಕ್ರಿಯೆ ವ್ಯಕ್ತವಾಗಿದೆ.

ವೈರಲ್‌ ಆಯ್ತು ನಿಂಗವ್ವ ಸಿಂಗಾಡಿ ಅವರ ನಮಸ್ಕಾರ

ಶಕ್ತಿ ಯೋಜನೆಯಲ್ಲಿ ವೈರಲ್‌ ಆಗಿದ್ದು ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದ ನಿಂಗವ್ವ ಸಿಂಗಾಡಿ ಅವರು ಬಸ್‌ಗೆ ತಲೆಬಾಗಿ ನಮಸ್ಕಾರ

ಮಾಡಿ ಬಸ್‌ ಹತ್ತಿದ್ದು. ಈ ಚಿತ್ರವನ್ನು ಹಲವರು ಹಂಚಿಕೊಂಡಿದ್ದು, ಶಕ್ತಿ ಯೋಜನೆಯ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗಿದೆ.

ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದ ನಿಂಗವ್ವ ಸಿಂಗಾಡಿ ಅವರು ಸವದತ್ತಿಯಲ್ಲಿರುವ ತನ್ನ ಮೊಮ್ಮಗನ ಮನೆ

ಗೃಹ ಪ್ರವೇಶಕ್ಕೆ ಹೊರಟಿದ್ದರು. ಧಾರವಾಡ-ಗೋಕಾಕ ಬಸ್ ಏರಿದಾಗ ಮನದುಂಬಿ ಶಕ್ತಿ ಯೋಜನೆಗೆ ನಮಸ್ಕರಿಸಿದ್ದು..

ಹೃದಯ ಸ್ಪರ್ಶಿ ಕ್ಷಣಗಳಿಗೆ ಸಾಕ್ಷಿಯಾಗಿದೆ.

ಈ ಕುರಿತು ಉದಯ ಗಾಂವಕರ ಅವರು, ಇಲ್ಲಿಯವರೆಗೆ ಬೈಗುಳ, ಕಲ್ಲೇಟುಗಳನ್ನು ಮಾತ್ರ ಕಂಡಿದ್ದ ಬಸ್ಸುಗಳು

ಈಗ ಪ್ರೀತಿಯ ನಮಸ್ಕಾರಗಳನ್ನು ಕಾಣುತ್ತಿದೆ ಎಂದಿದ್ದಾರೆ.    

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ

ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ Siddaramaiah ಅವರು ಚಾಲನೆ ನೀಡಿ ಮಾತನಾಡಿದರು.

ಶಕ್ತಿ ಯೋಜನೆ ಮಹಿಳೆಯರಿಗಾಗಿ ಮಾಡಿರುವ ಕಾರ್ಯಕ್ರಮ. ಸಮಾಜದಲ್ಲಿ ಅರ್ಧದಷ್ಟಿರುವ ಮಹಿಳೆಯರು ಶತಮಾನಗಳಿಂದ

ಶೋಷಣೆಗೆ ಒಳಗಾಗಿದ್ದಾರೆ. ಅಲ್ಪಸಂಖ್ಯಾತರು, ಮಹಿಳೆಯರು, ಅವಕಾಶಗಳಿಂದ ಹಾಗೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ ಎಂದಿದ್ದಾರೆ.

ಅನೇಕ ಮುಂದುವರಿದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣ ಭಾರತಕ್ಕಿಂತ ಸಾಕಷ್ಟು ಹೆಚ್ಚಿದೆ.

ಅಮೆರಿಕಾದಲ್ಲಿ ಶೇ 53% ರಷ್ಟು, ಚೈನಾ ದಲ್ಲಿ ಶೇ 54 ರಷ್ಟು, ಆಸ್ಟ್ರೇಲಿಯಾದಲ್ಲಿ ಶೇ 57, ಇಂಡೋನೇಶಿಯಾದಲ್ಲಿ ಶೇ 57 ರಷ್ಟು,

ಬಾಂಗ್ಲಾದೇಶದಲ್ಲಿ ಶೇ 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಭಾರತದಲ್ಲಿ

ಕೇವಲ 24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. 

Heavy Rain ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ: ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌!

ದೇಶದಲ್ಲಿ 2014 ರ ನಂತರ ಶೇ 30 ರಷ್ಟಿದ್ದ ಪ್ರಮಾಣ ಶೇ. 24ಕ್ಕೆ ಇಳಿದಿದೆ. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು

ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ

ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ ಎಂದು ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬರುತ್ತಿದೆ. ಎಲ್ಲಾ ಜಾತಿ ಮತ್ತು ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕವಾಗಿ

ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮಗೆ ಯಾವುದೇ ಜಾತಿ ಧರ್ಮ ಇಲ್ಲ. ನಾವು ಹಿಂದೆ ನುಡಿದಂತೆ ನಡೆದಿದ್ದೇವೆ.

ಹಿಂದಿನ ಬಾರಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಹಲವರು ಟೀಕೆ ಮಾಡಿದರು.

ಆದರೆ ನಾವು ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.

Shakti Yojana witnessing heart touching moments!

ನಮ್ಮ ಐದೂ ಗ್ಯಾರೆಂಟಿಗಳ ಜಾರಿಗೆ 59,000 ಕೋಟಿ ರೂ.ಗಳ ಅಗತ್ಯವಿದೆ. ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ

ಎನ್ನುವುದು ಮುಖ್ಯವಲ್ಲ. ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ.

10 ಕೆಜಿ ಆಹಾರಧಾನ್ಯವನ್ನು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ನೀಡುವ ಭರವಸೆ ನೀಡಿದ್ದೇವೆ.

ಇದಕ್ಕೆ 10,100 ಕೋಟಿ ರೂ.ಗಳ ಅಗತ್ಯವಿದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ

ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ. 

ಹೆಣ್ಣುಮಕ್ಕಳು ಇಂದು ಮಧ್ಯಾಹ್ನ 1 ಗಂಟೆಯಿಂದ ಉಚಿತ ಪ್ರಯಾಣದ ಸೌಲಭ್ಯವನ್ನು ಬಳಕೆ ಮಾಡಿಕೊಳ್ಳಬೇಕು.

ಎಲ್ಲಾ ಮಹಿಳೆಯರಿಗೂ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು. ಈ ಯೋಜನೆ ವಿದ್ಯಾರ್ಥಿನಿಯರಿಗೂ ಅನ್ವಯವಾಗುತ್ತದೆ.

ಈ ಯೋಜನೆಗಳಲ್ಲಿ ಯಾರೂ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ತಲುಪಲಿದೆ ಎಂದು ಅವರು ಹೇಳಿದ್ದಾರೆ.   

ಚಿತ್ರಕೃಪೆ: CMofKarnataka

Published On: 12 June 2023, 12:38 PM English Summary: Shakti Yojana witnessing heart touching moments!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.