1. ಸುದ್ದಿಗಳು

ಪಿಎಂ ಕಿಸಾನ್‌ ಸಮ್ಮಾನ್ ‌ನಿಧಿಗೆ ಸುಳ್ಳು ಮಾಹಿತಿ ನೀಡಿದ್ದ ರೈತರಿಗೆ ಶಾಕ್‌: ಹಣ ಹಿಂದಿರುಗಿಸಲು ನೋಟಿಸ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಪಡೆಯಲು ಸುಳ್ಳು ಮಾಹಿತಿ ನೀಡಿದ್ದ ರೈತರಿಗೆ ರಾಜ್ಯ ಕೃಷಿ ಇಲಾಖೆ ಶಾಕ್‌ ನೀಡಿದೆ. ಸುಳ್ಳು ಮಾಹಿತಿ ನೀಡಿ ಯೋಜನೆಯ ಹಣ ಪಡೆದಿರುವ ರಾಜ್ಯದ 85 ಸಾವಿರಕ್ಕೂ ಹೆಚ್ಚು ರೈತರಿಗೆ ಹಣ ಹಿಂತಿರುಗಿಸುವಂತೆ ನೋಟಿಸ್ ನೀಡಲಾಗುತ್ತಿದೆ.

ಈಗಾಗಲೇ ಕೇಂದ್ರ ಸರ್ಕಾರದ ಎರಡು ಕಂತುಗಳು ರೈತರ ಖಾತೆಗೆ ಜಮೆಯಾಗಿದೆ. ಇನ್ನೇನು ನವೆಂಬರ್ ತಿಂಗಳಲ್ಲಿ ಮೂರನೇ ಕಂತು ಜಮೆಯಾಗುವಷ್ಠರಲ್ಲಿಯೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಆದಾಯ ತೆರಿಗೆ ಪಾವತಿಯ ಸಂಗತಿಯನ್ನು ಮರೆಮಾಚಿ ಸಹಾಯಧನ ಪಡೆದ ರಾಜ್ಯದ 85 ಸಾವಿರಕ್ಕೂ ಹೆಚ್ಚು ರೈತರನ್ನು ಕೇಂದ್ರ ಕೃಷಿ ಸಚಿವಾಲಯ ಪರಿಶೀಲನೆ ವೇಳೆ ಪತ್ತೆ ಹಚ್ಚಿದೆ. ಈ ರೈತರ ಪಟ್ಟಿಯನ್ನು ಕೇಂದ್ರ ಸಚಿವಾಲಯ ಈಗಾಗಲೇ ರಾಜ್ಯ ಸರ್ಕಾರಕ್ಕೆ ರವಾನಿಸಿದೆ. ರಾಜ್ಯ ಕೃಷಿ ಇಲಾಖೆಯು ಸಹಾಯಧನ ಪಡೆದ ರೈತರಿಗೆ ಹಣ ಹಿಂದಿರುಗಿಸಲು ನೋಟಿಸ್ ಸಹ ಜಾರಿ ಮಾಡುತ್ತಿದೆ.

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಸಹಾಯಧನಕ್ಕೆ ರಾಜ್ಯದಲ್ಲಿ ಈವರೆಗೆ 56,74,940 ರೈತರು ಹೆಸರು ನೋಂದಾಯಿಸಿದ್ದಾರೆ. ವಿವಿಧ ಹಂತದ ಪರಿಶೀಲನೆ ನಂತರ 52,68,327 ರೈತರಿಗೆ ಸಹಾಯಧನ ಬಿಡುಗಡೆಯಾಗಿದೆ. ಸಹಾಯಧನ ಪಡೆದಿರುವ ರೈತರ ಪೈಕಿ 85,208 ಮಂದಿ ಆದಾಯ ತೆರಿಗೆ ಪಾವತಿಸುತ್ತಿರುವ ಸಂಗತಿ ಪರಿಶೀಲನೆ ಯಿಂದ ಗೊತ್ತಾಗಿದೆ.

ಸಣ್ಣ ಮತ್ತು ಅತಿಸಣ್ಣ ರೈತರಿಗೆ ಅನುಕೂಲವಾಗುವಂತೆ ಪ್ರತಿ ವರ್ಷ ಕೇಂದ್ರದಿಂದ ತಲಾ 6000 ರೂ. ಮತ್ತು ರಾಜ್ಯ ಸರ್ಕಾರದಿಂದ 4000 ರೂ. ಒಟ್ಟು 10,000 ರೂಪಾಯಿಯನ್ನು ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದೆ.

ವಂಚನೆ ಬೆಳಕಿಗೆ ಬಂದಿದ್ದು ಹೇಗೆ?: 

ಕೇಂದ್ರ ಕೃಷಿ ಸಚಿವಾಲಯವು ಫಲಾನುಭವಿಗಳ ಆಧಾರ್‌ ಕಾರ್ಡ್‌ ಸಂಖ್ಯೆ ಮತ್ತು ಬ್ಯಾಂಕ್‌ ಖಾತೆ ವಿವರ ಪರಿಶೀಲಿಸಿದಾಗ ಸಾಕಷ್ಟು ರೈತರು ಆದಾಯ ತೆರಿಗೆ ಪಾವತಿದಾರರಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಚಿವಾಲಯ ಇಂತಹ ರೈತರ ಪಟ್ಟಿಯನ್ನು ಕೃಷಿ ಇಲಾಖೆಗೆ ರವಾನಿಸಿದೆ. ಕೃಷಿ ಇಲಾಖೆ ಆಯುಕ್ತರು ಈ ರೈತರಿಂದ ಸಹಾಯಧನ ಹಿಂಪಡೆಯುವಂತೆ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಮಂತ್ರಿ ಕೃಷಿ ಸಮ್ಮಾನ ಯೋಜನೆಯ ನಿಯಮಾವಳಿಯ ಪ್ರಕಾರ ಸರ್ಕಾರಿ ನೌಕರಿಯಲ್ಲಿರುವವರು ಈ ಯೋಜನೆಯ ಸಹಾಯ ಧನಕ್ಕೆ ಅರ್ಜಿ ಸಲ್ಲಿಸುವಂತಿಲ್ಲ.ಅಲ್ಲದೇ, ಬೇರೆ ಯಾವುದಾದರೂ ಉದ್ಯಮ ಹೊಂದಿ ಆದಾಯ ತೆರಿಗೆ ಪಾವತಿಸಿದ್ದರೆ ಅಂತವರು ಅರ್ಹರಾಗುವುದಿಲ್ಲ. ಕೃಷಿ ಇಲಾಖೆ ಕೂಡ ಈ ಬಗ್ಗೆ ವಿಶೇಷವಾಗಿ ಪರಿಶೀಲಿಸದೇ ಪ್ರಧಾನಮಂತ್ರಿ ಕೃಷಿ ಸಮ್ಮಾನ ಯೋಜನೆಯ ಅಡಿಯಲ್ಲಿ ಪರಿಗಣಿಸಿತ್ತು. ಆದರೆ, ಮಾರ್ಚ್ ಅಂತ್ಯದ ವೇಳೆ ಆದಾಯ ತೆರಿಗೆ ತುಂಬಿದವರೂ ಈ ಯೋಜನೆಯಲ್ಲಿ ಫಲಾನುಭವಿಗಳಾದ ಅಂಶ ಬೆಳಕಿಗೆ ಬಂದಿದೆ.

ಜಿಲ್ಲಾರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳು ರೈತರಿಂದ ಸಹಾಯಧನ ವಸೂಲು ಮಾಡಲು ಮುಂದಾಗಿದ್ದಾರೆ. ಡಿಮಾಂಡ್‌ ಡ್ರಾಫ್ಟ್‌ (ಡಿ.ಡಿ) ಮೂಲಕ ಸಹಾಯಕ ನಿರ್ದೇಶಕರ ಕಚೇರಿಗೆ ಸಹಾಯಧನ ಹಿಂದಿರುಗಿಸುವಂತೆ ರೈತರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಒಂದು ವೇಳೆ ಸಹಾಯಧನ ಹಿಂದಿರುಗಿಸದಿದ್ದರೆ ಇಲಾಖೆಯಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ತಡೆ ಹಿಡಿಯುವುದಾಗಿ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.

Published On: 05 November 2020, 07:46 PM English Summary: shocking news for farmers who gave false information for kisan samman nidhi govt issues notice to refund

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.