News

Sojanya Case ಸೌಜನ್ಯ ಪ್ರಕರಣ ಎಸ್‌.ಐ.ಟಿ ತನಿಖೆಗೆ ಒತ್ತಾಯ: ಸಿ.ಎಂಗೆ ಮನವಿ!

29 July, 2023 11:36 AM IST By: Hitesh
Sojanya Case SIT Investigation Urged: Appeal to CM!

ರಾಜ್ಯದಲ್ಲಿ ನಡೆದ ಕರಾಳ ಕೃತ್ಯವಾದ 11 ವರ್ಷಗಳಲ್ಲಿ ಹಿಂದೆ ನಡೆದಿದ್ದ ಸೌಜನ್ಯ ಪ್ರಕರಣ ಇದೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ.

ಕರಾವಳಿ ಭಾಗದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ

ವ್ಯಾಪಕವಾದ ಚರ್ಚೆ ನಡೆಯುತ್ತಿದೆ. ಅಲ್ಲದೇ ಸೌಜನ್ಯ ಅವರ ಪ್ರಕರಣವನ್ನು ಉದ್ದೇಶ ಪೂರ್ವಕವಾಗಿ ಮುಚ್ಚಿ ಹಾಕಲಾಗುತ್ತಿದೆ.

ಈ ಪ್ರಕರಣದ ಹಿಂದೆ ಕೆಲವು ಪ್ರಭಾವಿಗಳು ಇದ್ದಾರೆ ಎನ್ನುವುದು ವದಂತಿ ಅಥವಾ ಗುಮಾನಿಗಳು ಸಹ ಇದಕ್ಕೆ ಕಾರಣವಾಗಿದೆ.

ಇದೀಗ ಸೌಜನ್ಯ ಪ್ರಕರಣವನ್ನು ಮರು ತನಿಖೆ ಮಾಡಬೇಕು ಹಾಗೂ ಎಸ್.ಐ.ಟಿ (Sit) (SIT) ತನಿಖೆಗೆ ವಹಿಸಬೇಕು

ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.

ಪ್ರಗತಿಪರ ಸಂಘಟನೆಗಳ ಸದಸ್ಯರು ಮುಖ್ಯಮಂತ್ರಿ Siddaramaiah ಅವರನ್ನು ಭೇಟಿಮಾಡಿ ಸೌಜನ್ಯ ಕೊಲೆ ಪ್ರಕರಣವನ್ನು

ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮನವಿ ಮಾಡಿದ್ದಾರೆ.       

ಕೆ.ಎಸ್.ವಿಮಲಾ, ಗೌರಮ್ಮ, ಲಕ್ಷ್ಮಿ, ಪ್ರಭಾ ಬೆಳವಂಗಲ, ಡಾ: ಲೀಲಾ ಸಂಪಿಗೆ, ದೇವಿ, ರೂತ್ ಮನೋರಮಾ, ಅಕ್ಕೈ

ಪದ್ಮಶಾಲಿ, ಅಖಿಲಾ, ಬಿ.ಎಂ. ಭಟ್, ಭೀಮನಗೌಡ, ಬಸಮ್ಮ, ಸುಮತಿ ಹಾಗೂ ಲಹರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಆದರೆ, ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. 

ವಿವಿಧ ಸಮುದಾಯದ ಸಭೆ 

ಮುಖ್ಯಮಂತ್ರಿ Siddaramaiah ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಸ್.ಸಿ, ಎಸ್.ಟಿ (SC & ST) ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ,

ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರು ಅಲೆಮಾರಿ

ಜನರ ಕುಂದುಕೊರತೆಗಳ ಕುರಿತು ಸಭೆ ನಡೆಸಿ, ಚರ್ಚ ನಡೆಸಿದರು.

ಸಚಿವರಾದ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್,

ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್,  ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ,

ಹಿರಿಯ ಪತ್ರಕರ್ತ ಹಾಗೂ ಚಿಂತಕ ಇಂದೂಧರ ಹೊನ್ನಾಪುರ, ಹಂಪಿ ಕನ್ನಡ ವಿ.ವಿ ಹಿರಿಯ

ಉಪನ್ಯಾಸಕ ಡಾ: ಮೇತ್ರಿ, ಲೀಲಾ ಸಂಪಿಗೆ ಮತ್ತಿತರರು ಇದ್ದರು.

ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ ಒಕ್ಕೂಟ, ಎಸ್.ಸಿ / ಎಸ್ ಟಿ ಅಲೆಮಾರಿ,

ವಿಮುಕ್ತ ಬುಡಕಟ್ಟು ಮಹಾಸಬಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿಗಳ ವೇದಿಕೆ,

ಕರ್ನಾಟಕ ರಾಜ್ಯ ಅಲೆಮಾರಿ, ಅಲೆಮಾರಿ, ಪ್ರ-1, 46 ಜಾತಿ ಜನಾಂಗಗಳ ಒಕ್ಕೂಟ, ಕರ್ನಾಟಕ ಪ.ಜಾ ಮತ್ತು ಪ.ವರ್ಗ

ಅಲೆಮಾರಿ, ಬುಡಕಟ್ಟು ಮಹಾ ಸಭಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ 

ಅಲೆಮಾರಿ, ಅರೆಅಲೆಮಾರಿ ವಿಮುಕ್ತ ಬುಡಕಟ್ಟು ಮಹಾ ಒಕ್ಕೂಟ ಹಾಗೂ ಅಖಿಲ ಭಾರತ ಅಲೆಮಾರಿ ಬುಡಕಟ್ಟು ಮಹಾಸಭಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.