News

Farmers Pumpsets ಕೃಷಿ ಪಂಪ್‌ಸೆಟ್‌ಗಳಿಗೆ ಸೌರವಿದ್ಯುತ್ ಮೂಲಕ ವಿದ್ಯುತ್: ಸಿ.ಎಂ ಸೂಚನೆ!

06 November, 2023 4:18 PM IST By: Hitesh
ರೈತರಿಗೆ ಸೌರವಿದ್ಯುತ್‌ ಮೂಲಕ ವಿದ್ಯುತ್‌ ಪೂರೈಕೆ

ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ನಿರಂತರವಾಗಿ ಸಕಾಲದಲ್ಲಿ ವಿದ್ಯುತ್‌ ಪೂರೈಕೆಯಾಗದೆ ಸಮಸ್ಯೆಯಾಗುತ್ತಿತ್ತು. ಅದನ್ನು ತಪ್ಪಿಸಲು ಸರ್ಕಾರ ಮುಂದಾಗಿದೆ.   

ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿತ್ತು.

ಇದರಿಂದಾಗಿ ರಾಜ್ಯದಲ್ಲಿ ವಿದ್ಯುತ್ ಅಭಾವ ಸೃಷ್ಟಿಯಾಗಿತ್ತು.

ರಾಜ್ಯದಲ್ಲಿ ವಿದ್ಯುತ್‌ ಸಮಸ್ಯೆಯಾಗಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.  

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ನಡೆಯಿತು.

ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ವಿದ್ಯುತ್ ಬೇಡಿಕೆ ಸರಾಸರಿ ಶೇಕಡ 43 ರಷ್ಟು ಹೆಚ್ಚಾಗಿದೆ.

ಕೃಷಿ ಬಳಕೆಯಲ್ಲಿ ಶೇಕಡ 55 ರಿಂದ 119 ರಷ್ಟು ಏರಿಕೆ ಕಂಡುಬಂದಿದೆ.

ರಾಯಚೂರು, ಬಳ್ಳಾರಿ ಶಾಖೋತ್ಪನ್ನ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ನೆರೆಯ ರಾಜ್ಯಗಳಿಂದ ವಿದ್ಯುತ್ ಅನ್ನು ಖರೀದಿಸಲಾಗುತ್ತಿದೆ.

ಬೇರೆ ರಾಜ್ಯಗಳಿಗೆ ವಿದ್ಯುತ್ ನೀಡದಂತೆ ಆದೇಶ ಹೊರಡಿಸಲಾಗಿದೆ.

ರೈತ ಸಮುದಾಯಕ್ಕೆ ಅಗತ್ಯತೆಗೆ ಅನುಗುಣವಾಗಿ 5 ರಿಂದ 7 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.

ಪ್ರತಿ ದಿನ 14 ಮಿಲಿಯನ್ ಯುನಿಟ್ ವಿದ್ಯುತ್ ಅಗತ್ಯವಿದೆ ಎಂದು ಸಭೆಯಲ್ಲಿ ಚರ್ಚೆಯಾಯಿತು.  

ಮುಂದಿನ ವರ್ಷದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸೌರವಿದ್ಯುತ್ ಮೂಲಕ ವಿದ್ಯುತ್ ಪೂರೈಕೆ ಮಾಡುವಂತೆ ಮುಖ್ಯಮಂತ್ರಿ

ಸಿದ್ದರಾಮಯ್ಯ, ಅಧಿಕಾರಿಗಳಿಗೆ ಸೂಚಿಸಿ, ಸೌರವಿದ್ಯುತ್ ಉತ್ಪಾದನೆಗೆ ಇನ್ನಷ್ಟು ಒತ್ತು ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಜೀರ್

ಅಹ್ಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

ಬರ ತಾಲ್ಲೂಕುಗಳ ಸಂಖ್ಯೆ ಹೆಚ್ಚಳ!

ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಸಂಖ್ಯೆ ಹೆಚ್ಚಳವಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮುಂಗಾರು ಹಂಗಾಮಿನಲ್ಲಿ

ಹೊಸದಾಗಿ ಏಳು ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸಲಾಗಿದೆ. 

ಈ ಮೂಲಕ ರಾಜ್ಯದ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 216 ರಿಂದ 223ಕ್ಕೆ ಏರಿಕೆಯಾಗಿದೆ.