News

ನೇಕಾರರಿಗೆ ವಿಶೇಷ ಪ್ಯಾಕೇಜ್: ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

21 June, 2023 2:08 PM IST By: Maltesh
Special Loan package fgor weavers community

ಕೊಪ್ಪಳ : ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2023-24ನೇ ಸಾಲಿಗಾಗಿ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ ಅರ್ಜಿ ಆಹ್ವಾನಿಸಲಾಗಿದೆ.

ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ ಸಾಮಾನ್ಯ, ಎಸ್ಸಿ-ಎಸ್ಟಿ ಯೊಜನೆಯಡಿ ವಿದ್ಯುತ್ ಮಗ್ಗ ಮತ್ತು ಸಲಕರಣೆ, 2 ವಿದ್ಯುತ್ ಮಗ್ಗ ಹಾಗೂ ಎಲೆಕ್ಟ್ರಾನಿಕ್ ಜಕಾರ್ಡ್ ಯೋಜನೆಗಳಡಿ ಗುರಿ ನಿಗದಿಪಡಿಸಲಾಗಿದ್ದು, ವಿದ್ಯುತ್ ಮಗ್ಗ ಚಟುವಟಿಕೆ ಕೈಗೊಳ್ಳುವ ಉದ್ದೇವಿರುವ ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆಯ ಘಟಕದ ವೆಚ್ಚ ರೂ. 3.50,000 ಆಗಿದ್ದು, ಈ ಮೊತ್ತವನ್ನು ಹಣಕಾಸು ಸಂಸ್ಥೆಗಳಿಂದ ಬ್ಯಾಂಕ್ ನಿಂದ ಸಾಲ ಪಡೆದು ಯಂತ್ರೋಪಕರಣಗಳನ್ನು ಅಳವಡಿಸಿ ಉತ್ಪಾದನೆ ಪ್ರಾರಂಭಿಸಿದ ನಂತರ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವರ್ಗದವರಿಗೆ ಶೇ.50% ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ.90% ರಷ್ಟು ಸಹಾಯಧನವನ್ನು ಸಂಬಂಧಪಟ್ಟ ಸಾಲ ನೀಡಿದ ಬ್ಯಾಂಕುಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಜಮಾ ಮಾಡಲಾಗುವುದು.

ವಿದ್ಯುತ್ ಮಗ್ಗ ಚಟುವಟಿಕೆ ನಡೆಸಲು ಆಸಕ್ತಿವುಳ್ಳ ಅರ್ಹ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು. ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಜಾತಿಯವರಿಗೆ ಒಂದು ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮಿನಿ ಉದ್ಯೋಗ ಮೇಳವನ್ನು ಜೂನ್ 23ರಂದು ಬೆಳಿಗ್ಗೆ 10.30 ರಿಂದ 2.30 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಲೈಂಗಿಕ ಜೀವನವನ್ನು ಉತ್ತಮಗೊಳಿಸುತ್ವೆ ಈ 5 ಯೋಗಾಸನಗಳು

ಈ ಮಿನಿ ಉದ್ಯೋಗ ಮೇಳದಲ್ಲಿ ಶ್ರೀರಾಮ ಲೈಫ್ ಇನ್‌ಸೂರೆನ್ಸ್ ಹುಬ್ಬಳ್ಳಿ, ವಿಸ್ಟ್ರಾನ್, ನರಸಾಪುರ ಇಂಡಸ್ಟ್ರೀಯಲ್ ಏರಿಯಾ, ಕೋಲಾರ, ದೇಶಪಾಂಡೆ ಫೌಂಡೇಶನ್ ಹುಬ್ಬಳ್ಳಿ, ಕೆಪಿಎಫ್ ಕೊಪ್ಪಳ ಇವರ ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ (ಆಲ್ ಟ್ರೇಡ್) ಹಾಗೂ ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. ಈ ಮಿನಿ ಉದ್ಯೋಗ ಮೇಳದಲ್ಲಿ ಆಸಕ್ತಿಯುಳ್ಳ 18 ರಿಂದ 32 ವರ್ಷದ ವರೆಗಿನ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.