1. ಸುದ್ದಿಗಳು

2020-2021ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

KJ Staff
KJ Staff
ಸಾಂದರ್ಭಿಕ ಚಿತ್ರ

2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯು ಜೂನ್ 14ರಿಂದ ಜೂನ್ 25ರ ವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು

ಅವರು, ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, 2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಸದರಿ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 26, 2021 ವರೆಗೆ ಅವಕಾಶ ನೀಡಲಾಗಿದೆ ಎಂದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಐದು ತಿಂಗಳುಗಳ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ ಪಠ್ಯಕ್ರಮ (syllabus)ವನ್ನು ಮುಗಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಮುಖ್ಯವಾದ ಪಾಠಗಳನ್ನು ಮಾದರಿಯಾಗಿಟ್ಟುಕೊಂಡು ಬೋಧನೆ ಮಾಡಲಾಗುತ್ತಿದೆ. ಜನವರಿ 1 ರಂದು ಆರಂಭವಾಗಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬರುವ ಜೂನ್ ಮೊದಲ ವಾರದಲ್ಲಿ ವಾರ್ಷಿಕ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ ಪರೀಕ್ಷೆ ವೇಳಾಪಟ್ಟಿ ಹೀಗಿದೆ.

ಪ್ರಥಮ ಭಾಷೆ

14-06-2021

ಗಣಿತ (ಅಥವಾ ಸಮಾಜ ಶಾಸ್ತ್ರ)

16-06-2021

ಇಂಗ್ಲಿಷ್‌ ಅಥವಾ ಕನ್ನಡ

18-06-2021

ವಿಜ್ಞಾನ

21-06-2021

ತೃತೀಯ ಭಾಷೆ

23-06-2021

ಸಮಾಜ ವಿಜ್ಞಾನ

25-06-2021

ಫೆಬ್ರವರಿ 1 ರಿಂದ 9ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪೂರ್ಣಾವಧಿಯಲ್ಲಿ ನಡೆಯಲಿವೆ. 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 'ವಿದ್ಯಾಗಮ' ಕಾರ್ಯಕ್ರಮ ಮುಂದುವರೆಯಲಿದೆ. ಫೆಬ್ರವರಿ 2ನೇ ವಾರದ ನಂತರ ಪರಿಸ್ಥಿತಿ ಗಮನಿಸಿ ಮತ್ತೆ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಜೊತೆ ಚರ್ಚಿಸಿ, ಇತರೆ ತರಗತಿಗಳ ಪ್ರಾರಂಭ ಕುರಿತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Published On: 29 January 2021, 08:39 AM English Summary: sslc examination time table announced

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.