2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯು ಜೂನ್ 14ರಿಂದ ಜೂನ್ 25ರ ವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು
ಅವರು, ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು, ಸದರಿ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 26, 2021 ವರೆಗೆ ಅವಕಾಶ ನೀಡಲಾಗಿದೆ ಎಂದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಐದು ತಿಂಗಳುಗಳ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ ಪಠ್ಯಕ್ರಮ (syllabus)ವನ್ನು ಮುಗಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಮುಖ್ಯವಾದ ಪಾಠಗಳನ್ನು ಮಾದರಿಯಾಗಿಟ್ಟುಕೊಂಡು ಬೋಧನೆ ಮಾಡಲಾಗುತ್ತಿದೆ. ಜನವರಿ 1 ರಂದು ಆರಂಭವಾಗಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬರುವ ಜೂನ್ ಮೊದಲ ವಾರದಲ್ಲಿ ವಾರ್ಷಿಕ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್ ಪರೀಕ್ಷೆ ವೇಳಾಪಟ್ಟಿ ಹೀಗಿದೆ.
ಪ್ರಥಮ ಭಾಷೆ |
14-06-2021 |
ಗಣಿತ (ಅಥವಾ ಸಮಾಜ ಶಾಸ್ತ್ರ) |
16-06-2021 |
ಇಂಗ್ಲಿಷ್ ಅಥವಾ ಕನ್ನಡ |
18-06-2021 |
ವಿಜ್ಞಾನ |
21-06-2021 |
ತೃತೀಯ ಭಾಷೆ |
23-06-2021 |
ಸಮಾಜ ವಿಜ್ಞಾನ |
25-06-2021 |
ಫೆಬ್ರವರಿ 1 ರಿಂದ 9ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪೂರ್ಣಾವಧಿಯಲ್ಲಿ ನಡೆಯಲಿವೆ. 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 'ವಿದ್ಯಾಗಮ' ಕಾರ್ಯಕ್ರಮ ಮುಂದುವರೆಯಲಿದೆ. ಫೆಬ್ರವರಿ 2ನೇ ವಾರದ ನಂತರ ಪರಿಸ್ಥಿತಿ ಗಮನಿಸಿ ಮತ್ತೆ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಜೊತೆ ಚರ್ಚಿಸಿ, ಇತರೆ ತರಗತಿಗಳ ಪ್ರಾರಂಭ ಕುರಿತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.