News

ಆಂಧ್ರಪ್ರದೇಶದಲ್ಲಿಯೂ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು

21 June, 2020 12:41 PM IST By:

ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರಿಂದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈಗ ಆಂಧ್ರಪ್ರದೇಶವೂ ಸಹ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದು ಪಡಿಸಲು ನಿರ್ಧಾರ ತೆಗೆದುಕೊಂಡಿದೆ
ದೇಶದ ಹಲವು ರಾಜ್ಯಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಒಂದಿಲ್ಲೊಂದು ಕುತ್ತು ಎದುರಾಗುತ್ತಲೇ ಇದೆ. ಪ್ರಾರಂಭದಲ್ಲಿ  ತೆಲಂಗಾಣ, ತಮಿಳುನಾಡು, ಪಂಜಾಬ್​ ಸೇರಿ ಹಲವು ರಾಜ್ಯಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣ ಎಂದು ಘೋಷಿಸಲಾಗಿದೆ.
ಈಗ ನೆರೆಯ ತೆಲಂಗಾಣ ಕೈಗೊಂಡ ತೀರ್ಮಾನವನ್ನೇ ಆಂಧ್ರಪ್ರದೇಶವೂ ಕೈಗೊಂಡಿದೆ. ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗುವುದಿಲ್ಲ. ವಿದ್ಯಾರ್ಥಿಗಳು ಇಂಟರನಲ್ ಪರೀಕ್ಷೆಯಲ್ಲಿ ತೆಗೆದುಕೊಂಡಿರುವ ಅಂಕಗಳ ಆಧಾರದ ಮೇಲೆ ಗ್ರೇಡ್ ನೀಡಲಾಗುವುದು  ಎಂದು ಆಂಧ್ರಪ್ರದೇಶ ಶಿಕ್ಷಣ ಸಚಿವ ಆದಿಮುಲುಪು ಸುರೇಶ್​ ಹೇಳಿಕೆ ನೀಡಿದ್ದಾರೆ.