1. ಸುದ್ದಿಗಳು

State Budget ರಾಜ್ಯ ಬಜೆಟ್‌ 2023-24: ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಸರ್ಕಾರಕ್ಕೆ ಸುದೀರ್ಘ ಪತ್ರ, ಪ್ರಮುಖ ಬೇಡಿಕೆಗಳ ಪಟ್ಟಿ ಇಲ್ಲಿದೆ

Hitesh
Hitesh
State Budget 2023-24: Long letter from state farmers' unions to govt, list of key demands

ರಾಜ್ಯ ಬಜೆಟ್‌ 2023-24:‌ ರಾಜ್ಯ ರೈತ ಸಂಘಟನೆಗಳು ಒಕ್ಕೂಟದಿಂದ ಸರ್ಕಾರಕ್ಕೆ ಸುದೀರ್ಘ ಪತ್ರ, ಪ್ರಮುಖ ಬೇಡಿಕೆಗಳ ಪಟ್ಟಿ ಇಲ್ಲಿದೆ.  

Gst ರಾಜ್ಯದಲ್ಲಿ ಜನವರಿಯಲ್ಲಿ ದಾಖಲೆಯ ತೆರಿಗೆ ಸಂಗ್ರಹ!, ಎಷ್ಟು ಇಲ್ಲಿದೆ ವಿವರ

ರಾಜ್ಯ ಸರ್ಕಾರದ 2023ನೇ ಸಾಲಿನ ಬಜೆಟ್‌ನಲ್ಲಿ ರೈತರ ಬೇಡಿಕೆ ಈಡೇರಿಸಲು ಆಗ್ರಹ, ರೈತರ ಬೇಡಿಕೆಗಳೇನು ಇಲ್ಲಿದೆ ಸಂಪೂರ್ಣ ವಿವರ.   

ರಾಜ್ಯವು ಚುನಾವಣೆಯ ಹೊಸ್ತಿಲಿನಲ್ಲಿದ್ದು, ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡನೆ ಮಾಡಲಿರುವ ಬಜೆಟ್‌ ಮಹತ್ವವನ್ನು ಪಡೆದುಕೊಂಡಿದೆ.

Pension Scheme Latest Updates: ಪಿಂಚಣಿ ಯೋಜನೆ ಕೇಂದ್ರ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿಸುದ್ದಿ! 

ಚುನಾವಣೆಯ ದೃಷ್ಟಿಯಿಂದ ರಾಜ್ಯ ಸರ್ಕಾರವು ಹಲವು ಜನಪರ ಹಾಗೂ ಜನರನ್ನು ಮೆಚ್ಚಿಸಲು ಕಸರತ್ತುಗಳನ್ನು ಮಾಡುವ ಸಾಧ್ಯತೆ ಇದೆ.

ಈಗಾಗಲೇ ಇದರ ಭಾಗವಾಗಿ ಗೃಹಿಣಿಯರಿಗೆ ಆರ್ಥಿಕ ನೆರವು ನೀಡುವ ಯೋಜನೆಗಳನ್ನು ಪರಿಚಯಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ   ಸುಳಿವು ನೀಡಿದ್ದಾರೆ.  

ರಾಜ್ಯ ಸರ್ಕಾರದ ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ರೈತರ ಬೇಡಿಕೆಗಳನ್ನು ಸರ್ಕಾರಕ್ಕೆ ಮಂಡಿಸಿದ್ದಾರೆ. ಬಜೆಟ್‌ನಲ್ಲಿ  ಈ ಕುರಿತು ಕ್ರಮ ವಹಿಸುವಂತೆ ಕೋರಿದ್ದಾರೆ.

ವಿಶ್ವ ದ್ವಿದಳ ಧಾನ್ಯಗಳ ದಿನ, ಏನಿದರ ವಿಶೇಷತೆಗಳು ?

ಪ್ರಮುಖ ಬೇಡಿಕೆಗಳು ಈ ರೀತಿ ಇವೆ 

  • ತೆಲಂಗಾಣ ರಾಜ್ಯದಲ್ಲಿ ರಾಜ್ಯ ಸರ್ಕಾರವೇ ಪ್ರತಿಯೊಬ್ಬರಿಗೂ 5 ಲಕ್ಷ ಜೀವ ವಿಮೆ ಪಾಲಿಸಿ ನೀಡಲಾಗಿದೆ ಆಕಸ್ಮಿಕ, ಅಪಘಾತ ಸಾವು, ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ಸಿಗುತ್ತದೆ ಇದೇ ರೀತಿ ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತರಬೇಕು.                              
  • ರೈತರ ಎಲ್ಲ ಕೃಷಿ ಉತ್ಪನ್ನಗಳು ಕನಿಷ್ಠ ಬೆಂಬಲ ಬೆಲೆ  ಖರೀದಿ ಕೇಂದ್ರಗಳಲ್ಲಿ ಪಂಜಾಬ್ , ಹರಿಯಾಣ,ತೆಲಂಗಾಣ, ತಮಿಳುನಾಡು ಮಾದರಿಯಲ್ಲಿ ರಾಜ್ಯದ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ತೆರೆಯಬೇಕು ರೈತರಿಂದ ಖರೀದಿಸುವ ಖರೀದಿ ಮಿತಿಯನ್ನ  ರದ್ದುಗೊಳಿಸಬೇಕು ಮೇಲಿನ ರಾಜ್ಯಗಳಲ್ಲಿ ಇರುವಂತೆ ಜಾರಿ ಮಾಡಬೇಕು.
  • ರೈತರು ಬೆಳೆದ ಎಲ್ಲಾ ಪೌಷ್ಟಿಕ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರವೇ ಕಡ್ಡಾಯವಾಗಿ ಖರೀದಿಸುವಂಥ ವ್ಯವಸ್ಥೆ ಜಾರಿಗೆ ಬರಬೇಕು.
  • ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಖರೀದಿಸಿ, ಸರ್ಕಾರದ ಅಂಗಸಂಸ್ಥೆಗಳಾದ ಆಸ್ಪತ್ರೆ ವಿದ್ಯಾರ್ಥಿ ನಿಲಯ, ಜೈಲುಗಳಿಗೆ, ಪೂರೈಸುವ ವ್ಯವಸ್ಥೆ ಮಾಡಬೇಕು.
  • ಎಲ್ಲಾ ಕೃಷಿ ಉತ್ಪಾದನಾ ಬೆಳೆಗಳಿಗೆ ಬೆಳೆ ವಿಮೆ ಜಾರಿಯಾಗಬೇಕು, ಬೆಳೆವಿಮೆ ಪದ್ದತಿ ಕೆಲವು ನೀತಿಗಳು ಬದಲಾಗಬೇಕು.
  • ಅತಿವೃಷ್ಟಿ ಪ್ರಕೃತಿ ವಿಕೋಪ ಬೆಳೆನಷ್ಟಕ್ಕೆ ಪರಿಹಾರ ವೈಜ್ಞಾನಿಕವಾಗಿ ಸಂಪೂರ್ಣ ನಷ್ಟ ಸಿಗುವಂತಾಗಬೇಕು ಹಾಗೂ ಕೃಷಿ ಸಾಲ ನೀತಿ ಬದಲಾಗಬೇಕು.
  • ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಡ್ಡಿ ರಹಿತ ಸಾಲ ನೀಡುವಂತೆ ಆಗಬೇಕು ಎಲ್ಲಾ ರೈತರಿಗೂ ಬರಿ ಪಹಣಿ ಪತ್ರ ಆಧರಿಸಿ ಕನಿಷ್ಠ 3 ಲಕ್ಷ ಆಧಾರರಹಿತ ಬಡ್ಡಿಇಲ್ಲದ ಸಾಲ ಕೊಡಿಸುವ ಯೋಜನೆ  ಎಲ್ಲ ಬ್ಯಾಂಕುಗಳಲ್ಲಿ ಜಾರಿಯಾಗಬೇಕು.    
  • ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಮೇಳಗಳನ್ನು ಅಂತರರಾಷ್ಟ್ರೀಯ ವಿಶ್ವ ರೈತರ ದಿನದಂದು, ಡಿಸೆಂಬರ್ 23ರಂದು, ದಿವಂಗತ ಎಂ ಡಿ,ಎನ್  ಹೆಸರಿನಲ್ಲಿ ರೈತರ ಹಬ್ಬದ ರೀತಿ ಆಚರಿಸಲು ಕ್ರಮ ಕೈಗೊಳ್ಳಬೇಕು.
  • ರೈತರ ಹಲವು ವರ್ಷಗಳ ಬೇಡಿಕೆ ಆಗಿರುವ ಕಬ್ಬಿನ ಎಫ್ಆರ್ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು.

RBI Repo Rate Hiked: ಆರ್‌ಬಿಐ ರೆಪೋ ದರದಲ್ಲಿ ಮತ್ತೆ ಏರಿಕೆ!   

State Budget 2023-24: Long letter from state farmers' unions to govt, list of key demands
  • ಸಕ್ಕರೆ ಕಾರ್ಖಾನೆಗಳ ಹಾಗೂ ಕಟೌವ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್ಆರ್‌ಇಜಿ ಯೋಜನೆಯ ಕಬ್ಬು ಕಟಾವು ಹಾಗೂ ಬಿತ್ತನೆಗೆ ಬಳಸಿಕೊಳ್ಳಲು
  • ಯೋಜನೆಗೆ ಸೇರಿಸಬೇಕು ಬಾಳೆ ಬೆಳೆಗೆ ಪ್ರೋತ್ಸಾಹ ಧನ ನೀಡುವ ರೀತಿ ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿ ತೋರಿಸುವ ಮಾನದಂಡ ಬದಲಾಗಬೇಕು ಇಳುವರಿ ಮೋಸ ತಪ್ಪಿಸಲು ವೈಜ್ಞಾನಿಕ ಮಾನದಂಡ ಅಳವಡಿಸಬೇಕು ಎಂದಿದ್ದಾರೆ.
  • ಅಲ್ಲದೇ ಕಬ್ಬಿನ ಎಥನಾಲ್ ಉತ್ಪಾದನಾ ಆದಾಯವನ್ನು ಕಬ್ಬು ದರ ನಿಗದಿಯಲ್ಲಿ ಪರಿಗಣಿಸಬೇಕು.                                     .
  • ಕಬ್ಬಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ,ಬೆಂಕಿ ಅನಾಹುತವಾದಾಗ  ಸುಟ್ಟು ಹೋದ ಕಬ್ಬಿಗೆ ಯಾವುದೇ ಮಾನದಂಡವಿಲ್ಲದೆ ಕಾರ್ಖಾನೆಗಳು ಕಬ್ಬಿನ ಹಣದಲ್ಲಿ ಶೇಕಡ 25ರಷ್ಟು ಕಟಾವು ಮಾಡುವುದನ್ನು ತಪ್ಪಿಸಬೇಕು.
  • ಎಫ್ ಆರ್ ಪಿ ಪೂರ್ಣ ಹಣ ರೈತರಿಗೆ ಪಾವತಿ ಆಗಬೇಕು ಮತ್ತು ಕೃಷಿ ಉತ್ಪನ್ನಗಳಿಗೆ ಎಪಿಎಂಸಿ ಯಲ್ಲಿ ಅಡಮಾನ ಸಾಲ ಯೋಜನೆ ಸದೃಢಗೊಳಿಸಬೇಕು. ರೈತರಿಗೆ ಅನುಕೂಲವಾಗುವ ಈ ಯೋಜನೆಗೆ ಹೆಚ್ಚು ಅನುದಾನ ಮೀಸಲಿಡಬೇಕು. 
  • ಕೃಷಿಗೆ ಬಳಸುವ  ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು  ಟ್ಯಾಕ್ಟರ್ ಬಿಡಿಭಾಗಗಳ ಜಿ ಎಸ್ಟಿ ತೆರಿಗೆ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು.                                                        ,
  • ಕಾಡಂಚಿನ ಪ್ರಾಣಿಗಳ ಹಾವಳಿಯಿಂದ ರೈತರ ಬೆಳೆಗಳು ರೈತರ ಜೀವನ ನಾಶವಾಗುತ್ತಿರುವುದನ್ನು ತಪ್ಪಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಪರಿಹಾರ ಮನದಂಡ ಹೆಚ್ಚಳ ಮಾಡಬೇಕು.
  • ಕೃಷಿ ಜಮೀನು ಅಭಿವೃದ್ಧಿ ಯೋಜನೆಗಳಿಗೆ ರೈತರಿಂದ ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು, ಅವಶ್ಯಕತೆ ಸಂದರ್ಭದಲ್ಲಿ ರೈತರನ್ನ ಪಾಲುದಾರರನ್ನಾಗಿ ಮಾಡಬೇಕು.
  • ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಆಯಾ  ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ತಿಂಗಳಿಗೊಮ್ಮೆ ರೈತರ ಸಭೆ ನಡೆಸಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕುತ್ತದೆ ಈ ಬಗ್ಗೆ ಸರ್ಕಾರ ಕಠಿಣ ಸೂಚನೆ ನೀಡಬೇಕು.  
  • ಮೇಲ್ಕಂಡ ಒತ್ತಾಯಗಳ ಬಗ್ಗೆ  ರಾಜ್ಯ ಸರ್ಕಾರ ಬಜೆಟ್ ಮಂಡನೆಯಲ್ಲಿ ಕ್ರಮಕೈಗೊಳ್ಳಬೇಕು, ರೈತರ ಅಭಿವೃದ್ಧಿ ಪೂರ್ವಕವಾದ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ. 

Medical Negligence | ವೈದ್ಯಕೀಯ ನಿರ್ಲಕ್ಷ್ಯ ಎಸಗಿದ ಪ್ರಸೂತಿ ತಜ್ಞೆಗೆ 11 ಲಕ್ಷ ದಂಡ!   

Published On: 11 February 2023, 04:33 PM English Summary: State Budget 2023-24: Long letter from state farmers' unions to govt, list of key demands

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.