News

ರಾಜ್ಯ ಬಜೆಟ್: ರೈತರಿಗೆ ಗರಿಷ್ಠ ಬೆಲೆ ದೊರಕಿಸಿಕೊಡಲು ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಅವಕಾಶ

08 March, 2021 9:19 PM IST By:

ಸಾವಯವ ಕೃಷಿಗೆ 500 ಕೋಟಿ ರೂ. ಯೋಜನೆಯನ್ನು ರೂಪಿಸಲು ಮುಂದಾಗಿದ್ದಾರೆ. ಜನರಿಗೆ ಆರೋಗ್ಯಕರ ಮತ್ತು ರಾಸಾಯನಿಕಮುಕ್ತ ಉತ್ಪನ್ನಗಳನ್ನು ದೊರಕಿಸಿಕೊಡಲು ಸಹಕಾರಿಯಾಗಲಿದೆ. ಸಾವಯವ ಮತ್ತು ಸಿರಿಧಾನ್ಯಗಳನ್ನು ವೈಜ್ಞಾನಿಕ ಬೆಲೆಯಲ್ಲಿ ಮಾರಾಟ ಮಾಡಲು ಹಾಗೂ ರೈತರಿಗೆ ಗರಿಷ್ಠ ಬೆಲೆ ದೊರಕಿಸಿಕೊಡಲು ರಾಷ್ಟ್ರೀಯ ಇ-ಮಾರುಕಟ್ಟೆ ಪ್ರೈವೇಟ್ ಲಿಮಿಟೆಡ್ ಮೂಲಕ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ

ಬಜೆಟ್‌ನಲ್ಲಿ ಮನೋವಿಕಲರ ಮಾಸಾಶನ 2 ಸಾವಿರ ರೂ.ಗೆ ಹೆಚ್ಚಳ

ಬುದ್ಧಿಮಾಂದ್ಯರ ಆರೈಕೆ ಮಾಡಲು ಅನುವಾಗುವಂತೆ ಶೇ.75 ಕ್ಕಿಂತ ಹೆಚ್ಚಿನ ಮನೋವೈಕಲ್ಯತೆ ಹೊಂದಿದವರಿಗೆ ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1,400 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು. ನಾಲ್ಕು ವರ್ಷದೊಳಗಿನ ಶ್ರವಣದೋಷವುಳ್ಳ ಮಕ್ಕಳಿಗೆ ಅವರ ತಾಯಂದಿರ ಸಹಿತ ವಾಕ್‌ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಹಾಸನ ಮತ್ತು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ. ಚಿತ್ರದುರ್ಗದಲ್ಲಿ ಪ್ರಸಕ್ತ ಸಾಲಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ವೈದ್ಯಕೀಯ ಕಾಲೇಜು ನಿರ್ಮಿಸಲು ಉದ್ದೇಶಿಸಲಾಗಿದೆ.

ಅಪಘಾತಗಳ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಒದಗಿಸುವುದಕ್ಕೆ ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಟ್ರಾಮಾ ಕೇರ್‌ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು. ಧಾರವಾಡದ ಡಿಮ್ಹಾನ್ಸ್‌ ಸಂಸ್ಥೆಯನ್ನು ಮಾನಸಿಕ ನರರೋಗಿಗಳ ಸುಸಜ್ಜಿತ ಚಿಕಿತ್ಸಾ ಸಂಸ್ಥೆಯನ್ನಾಗಿ 75 ಕೋಟಿ ರೂ.ಗಳ ವೆಚ್ಚದಲ್ಲಿ ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು. ಇದಕ್ಕಾಗಿ 10 ಕೋಟಿ ರೂ. ಖರ್ಚು ಮಾಡುವುದಾಗಿ ಸಿಎಂ ಯಡಿಯೂರಪ್ಪ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ರಾಜ್ಯ ಬಜೆಟ್: ಪೆಟ್ರೋಲ್‌, ಡೀಸೆಲ್‌ ದರಕ್ಕಿಲ್ಲ ಕಡಿವಾಣ!

ಕೋವಿಡ್-19 ಕಾರಣದಿಂದಾಗಿ ಆರ್ಥಿಕ ಸಂಕಷ್ಟದಲ್ಲಿ ನಲುಗಿರುವ ರಾಜ್ಯದ ಜನತೆಗೆ ರಾಜ್ಯ ಬಜೆಟ್‌ನಲ್ಲಿ ಹೆಚ್ಚುವರಿ ತೆರಿಗೆ ವಿಧಿಸದೆ, ತೆರಿಗೆ ದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.ಪೆಟ್ರೋಲ್ ಮತ್ತು ಡೀಸೆಲ್  ಮೇಲಿನ ಮಾರಾಟ ತೆರಿಗೆಯಲ್ಲಿ ಇಳಿಕೆ ಮಾಡುವ ಮೂಲಕ ಯಡಿಯೂರಪ್ಪ ಸರಕಾರ ಇಂಧನ ಬೆಲೆ ಇಳಿಕೆಗೆ ಕಾರಣವಾಗಲಿದೆ ಎಂಬ ನಿರೀಕ್ಷೆಗಳಿದ್ದವು. ಆದರೆ, ಬಂಜೆಟ್‌ನಲ್ಲಿ ಈ ಎಲ್ಲ ನಿರೀಕ್ಷೆಗಳು ಹುಸಿಯಾಗಿದ್ದು, ರಾಜ್ಯದ ಜನತೆಗೆ ನಿರಾಸೆಯಾಗಿದೆ.