News

ಬಿಳಿಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ಏರಿಕೆ ಮಾಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

13 March, 2021 9:57 AM IST By:
Sorghum

ಮಾಲ್ದಂಡಿ ಜೋಳ ಹಾಗೂ ಹೈಬ್ರೀಡ್‌ ಜೋಳಕ್ಕೆ ನಿಗದಿ ಮಾಡಲಾದ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಬೇಕೆಂದು ಆಹಾರ ಮತ್ತು ನಾಗರಿಕ ಖಾತೆ ಸಚಿವ ಉಮೇಶ್ ಕತ್ತಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.  ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಅವರು ಶುಕ್ರವಾರ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರೊಂದಿಗೆ ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು.

ಕೇಂದ್ರವು ಪ್ರಸಕ್ತ ಸಾಲಿನಲ್ಲಿ ಜೋಳಕ್ಕೆ ನಿಗದಿಪಡಿಸಿರುವ ಬೆಂಬಲ ಬೆಲೆಯು ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ  2,640 ಮತ್ತು ಹೈಬ್ರೀಡ್‌ ಜೋಳಕ್ಕೆ  2,620 ನಿಗದಿಪಡಿಸಲಾಗಿದೆ. ಆದರೆ ಜೋಳ ಉತ್ಪಾದನೆಯ ವೆಚ್ಚ ಬೆಂಬಲ ಬೆಲೆಗಿಂತ ಹೆಚ್ಚಾಗುತ್ತದೆ. ಇದರಿಂದಾಗಿ ರೈತರಿಗೆ ಹಾನಿಯಾಗುತ್ತದೆ. ಬೆಂಬಲ ಬೆಲೆ ಹೆಚ್ಚಳ ಮಾಡಿದರೆ ಮಾತ್ರ ಜೋಳ ಬೆಳೆದ ರೈತರಿಗ ನ್ಯಾಯಕೊಟ್ಟಂತಾಗುತ್ತದೆ. ಉತ್ಪಾದನಾ ವೆಚ್ಚ ಹೆಚ್ಚಿರುವುದರಿಂದ ಬೆಂಬಲ ಬೆಲೆಯ  ದರ ಅತ್ಯಂತ ಕಡಿಮೆ ಎಂದು ಅವರು ಹೇಳಿದರು.

ಪ್ರತಿ ಕ್ವಿಂಟಲ್‌ ಮಾಲ್ದಂಡಿ ಜೋಳಕ್ಕೆ 4,785, ಹೈಬ್ರೀಡ್‌ ಜೋಳಕ್ಕೆ  4,154 ನಿಗದಿಪಡಿಸುವ ಮೂಲಕ ರೈತ ಸಮುದಾಯದ ನೆರವಿಗೆ ಬರಬೇಕು ಎಂದು ಅವರು ಮನವಿ ಮಾಡಿದರು.

ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೋಳ ಖರೀದಿಗೆ ನೋಂದಣಿ ಆರಂಭವಾಗಿದೆ. 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್.ಎ.ಕ್ಯೂ. ಗುಣಮಟ್ಟದ ಬಿಳಿ ಜೋಳ ಖರೀದಿಸಲು ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿಯ ತೀರ್ಮಾನದಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಬೆಳಿಜೋಳ ಬೆಳೆದ ರೈತರು ಸಂಬಂಧಪಟ್ಟ ಆಯಾ ತಾಲೂಕಿನ ಸಮೀಪದ ಖರೀದಿ ಕೇಂದ್ರಕ್ಕೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಆಯಾ ಜಿಲ್ಲಾಧಿಕಾರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿ ಜೋಳ ಹೈಬ್ರಿಡ್ ಪ್ರತಿ ಕ್ವಿಂಟಲ್‍ಗೆ 2,620 ರೂ.ಗಳ ದರವನ್ನು ಹಾಗೂ  ಬಿಳಿ ಜೋಳ ಮಾಲ್ದಂಡಿ ಪ್ರತಿ ಕ್ವಿಂಟಲ್‍ಗೆ  2.640 ರೂ.ಗಳ ದರವನ್ನು ನಿಗದಿಪಡಿಸಲಾಗಿದೆ. ಬಿಳಿ ಜೋಳ ಬೆಳೆದ ರೈತರು  2021ರ ಮಾರ್ಚ್ 31 ರೊಳಗಾಗಿ ದಿನಾಂಕ ತಮ್ಮ ಸಮೀಪದ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು.