1. ಸುದ್ದಿಗಳು

ಕಿಸಾನ್ ಸಮ್ಮಾನ್ ಫಲಾನುಭವಿಗಳಿಗೆ 1000 ಕೋಟಿ- 50 ಲಕ್ಷ ರೈತರಿಗೆ ಅನುಕೂಲ

PMkisanfund

ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ಒಂದು ಸಾವಿರ ಕೋಟಿ ರುಪಾಯಿ ಬಿಡುಗಡೆ ಮಾಡಿದೆ.ಇದರಿಂದಾಗಿ ರಾಜ್ಯದ 50 ಲಕ್ಷ ರೈತರ ಖಾತೆಗಳಿಗೆ ತಲಾ 2 ಸಾವಿರ ರೂಪಾಯಿ ಜಮೆ ಮಾಡಲಾಗುವದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ,ರಾಜ್ಯದ ಆರ್ಥಿಕ ಸಂಕಷ್ಟದ ನಡುವೆಯೂ ರೈತರ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಂತಿದೆ.
ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹೇಳಿಕೊಳ್ಳುವಂತಹ ಸ್ಥಿತಿಯಲ್ಲಿಲ್ಲ.ಹಣಕಾಸಿನ ಸಂಕಷ್ಟದ ಪರಿಸ್ಥಿತಿಯಲ್ಲಿಯೂ  ರೈತರಿಗೆ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ಕಿಸಾನ್ ಸಮ್ಮಾನ್ ಯೋಜನೆಗಾಗಿ 1 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ನಾಡಿನ ಪ್ರತಿಯೊಬ್ಬರೂ ನೆಮ್ಮದಿಯಾಗಬೇಕೆಂದು ಸರ್ಕಾರ ಕಷ್ಟದ ಕಾಲದಲ್ಲೂ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮಂಗಳವಾರ ಸುಮಾರು 50 ಲಕ್ಷ ಕರೈತರಿಗೆ ಒಂದು ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ  ಮಾಡಲಾಗಿದೆ. ಹಂತಹಂತವಾಗಿ ಹಣ ಫಲಾನುಭವಿಗಳಿಗೆ ತಲುಪಲಿದೆ ಎಂದರು.

PMkisanmobileapp

ನಿಮ್ಮ ಖಾತೆಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಹಣ ಜಮೆಯಾಗಿದೆಯೇ?  ಮನೆಯಲ್ಲಿಯೇ ಕುಳಿತು ನೋಡಿಕೊಳ್ಳಿ

ಕೇಂದ್ರ ಸರ್ಕಾರವು ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆ ಪ್ರಾರಂಭಿಸಿದೆ. ಕೇಂದ್ರ ಸರ್ಕಾರವು ರೈತರಿಗೆ ಪ್ರತಿ ವರ್ಷಕ್ಕೆ 6 ಸಾವಿರ ರುಪಾಯಿ ಹಣ ನೀಡುತ್ತಿದೆ. ಇದೇ ಯೋಜನೆಯಡಿ ರಾಜ್ಯ ಸರ್ಕಾರವು 4 ಸಾವಿರ ರೂಪಾಯಿ ನೀಡಲಿದೆ. ಇದರಿಂದಾಗಿ ರಾಜ್ಯದ ರೈತರಿಗೆ 10 ಸಾವಿರ ರುಪಾಯಿ ಲಭಿಸುವಂತಾಗುತ್ತದೆ.ಈಗಾಗಲೇ ಮೊದಲ ಕಂತನ್ನು ಬಿಡುಗಡೆ ಮಾಡಲಾಗಿದ್ದು ಎರಡನೇ ಕಂತನ್ನು ಸಹ ಬಿಡುಗಡೆ ಮಾಡಲಾಗಿದೆ ಎಂದರು.

Published On: 17 June 2020, 05:27 PM English Summary: state govt pm kisan 2nd installment fund released

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.