News

ರಾಜ್ಯ ಹವಾಮಾನ ವರದಿ: ಎಲ್ಲೆಲ್ಲಿ, ಯಾವಾಗ, ಎಷ್ಟು ಮಳೆ? ಇಲ್ಲಿದೆ ಮಾಹಿತಿ

14 May, 2023 11:33 AM IST By: Kalmesh T
State Weather Report: Where, When, How Much Rain? Here is the information

Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಲ್ಲಿದೆ ಈ ಕುರಿತಾದ ವಿವರ

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.  ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.  ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಅನೇಕ ಜಿಲ್ಲೆಗಳಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ ಎಂದು ಕೂಡ ಹೇಳಲಾಗಿದೆ. ಮಧ್ಯಾಹ್ನದ ವೇಳೆಗೆ ಬಿಸಿಲು ಹೆಚ್ಚಾಗುವ ಸಾಧ್ಯತೆಯಿದ್ದು, ಜನತೆ ಗಮನಿಸಬೇಕು.

14 ಮೇ: ಕರಾವಳಿಯ ಎಲ್ಲ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ ಜಿಲ್ಲೆಗಳು ಕೆಲವು ಕಡೆಗಳಲ್ಲಿ ಹಾಗೂ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ! ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

15 ಮೇ: ಕರಾವಳಿಯ ಎಲ್ಲ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

16 ಮೇ: 'ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು,

ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಹಾಗೂ ಕರಾವಳಿಯ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

17 ಮೇ: ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಒಳನಾಡಿನ ಹಾಗೂ ಕರಾವಳಿಯ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ನಗರಗಳ ಹವಾಮಾನ ವರದಿ:

ಬೆಂಗಳೂರು: 34-21, ಮಂಗಳೂರು: 34-27, ಶಿವಮೊಗ್ಗ: 37-23, ಬೆಳಗಾವಿ: 35-22

ಮೈಸೂರು: 34-22, ಮಂಡ್ಯ: 36-22, ಮಡಿಕೇರಿ: 28-18, ರಾಮನಗರ: 35-22

ಹಾಸನ: 33-21, ಚಾಮರಾಜನಗರ: 34-22, ಚಿಕ್ಕಬಳ್ಳಾಪುರ: 34-22, ಕೋಲಾರ: 35-22

ತುಮಕೂರು: 35-22, ಉಡುಪಿ: 34-27, ಕಾರವಾರ: 34-28, ಚಿಕ್ಕಮಗಳೂರು: 32-20

ದಾವಣಗೆರೆ: 38-23, ಹುಬ್ಬಳ್ಳಿ: 37-23, ಚಿತ್ರದುರ್ಗ: 37-23, ಹಾವೇರಿ: 38-24

ಬಳ್ಳಾರಿ: 40-25, ಗದಗ: 38-23, ಕೊಪ್ಪಳ: 39-24,ರಾಯಚೂರು: 41-27

ಯಾದಗಿರಿ: 41-27, ವಿಜಯಪುರ: 40-24, ಬೀದರ್: 40-27, ಕಲಬುರಗಿ: 42-28

ಬಾಗಲಕೋಟೆ: 40-24