1. ಸುದ್ದಿಗಳು

ನಕಲಿ ಬೀಜ, ರಸಗೊಬ್ಬರ ಮಾರಾಟಗಾರರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವ ಬಿ.ಸಿ. ಪಾಟೀಲ್‌ ಖಡಕ್‌ ಸೂಚನೆ

Kalmesh T
Kalmesh T
Strict action against fake seed, fertilizer sellers

ರೈತರು ಬಿತ್ತನೆ ಬೀಜ, ರಸಗೊಬ್ಬರ ಕೊಳ್ಳಲು ಮುಂದಾಗುವ ಸಮಯ ಇದು. ಈ ಸಂದರ್ಭದಲ್ಲಿ ನಕಲಿ ಬೀಜ, ರಸಗೊಬ್ಬರ ಮಾರಾಟ ಮಾಡುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ.

ಇದನ್ನೂ ಓದಿರಿ: ನಬಾರ್ಡ್‌ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಉತ್ತಮ ಅವಕಾಶ; ತಿಂಗಳಿಗೆ 1,45,000 ಸಂಬಳ!

ಕೃಷಿ ವಿಚಕ್ಷಣಾ ದಳ (ಜಾಗೃತ ಕೋಶ)ವನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ವಿಕಾಸಸೌಧದ ಬಿ.ಸಿ. ಪಾಟೀಲ್‌ ಅವರ ಕಚೇರಿಯಲ್ಲಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.

ರಾಜ್ಯದಲ್ಲಿ ಬಿತ್ತನೆ ಕಾರ್ಯ ಚುರುಕುಗೊಳ್ಳುತ್ತಿದ್ದು, ಕಾಳಸಂತೆ ಮಾರಾಟಗರರು ರೈತರಿಗೆ ಮೋಸ ಮಾಡಲೆಂದೇ ನಕಲಿ ಬೀಜ ನಕಲಿ ಗೊಬ್ಬರ ಮಾರಾಟಗಾರರು ಅವಕಾಶಕ್ಕಾಗಿ ಕಾಯುತ್ತಿರುತ್ತಾರೆ.

ಇಂತವರ ಮೇಲೆ ಕೃಷಿ ವಿಚಕ್ಷಣಾ ದಳ ಹದ್ದಿನ ಕಣ್ಣು ಸದಾ ಜಾಗೃತಗೊಳಿಸಿರಬೇಕು. ಜಾಗೃತ ಕೋಶ ಸದಾ ಎಚ್ಚರಿಕೆಯಿಂದಿರಬೇಕು. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎನ್ನುವಂತಾಗದೇ ನಕಲಿ ಜಾಲದ ಮೂಲವನ್ನೇ ನಾಶಪಡಿಸಬೇಕು.

ಬರೀ ಚಾರ್ಜ್ ಶೀಟ್ ಹಾಕಿ ಸುಮ್ಮನಾದರೆ ಸಾಲದು. ನಕಲಿಕೋರರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

Rain Update: ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ..!

ಯಾವುದೇ ಕಂಪೆನಿ ಇರಲಿ, ಅದು ಎಷ್ಟೇ ಹೆಸರು ಮಾಡಿರಲಿ, ಆ ಕಂಪೆನಿ ರೈತರಿಗೆ ಮಾರುವ ಉತ್ಪನ್ನ, ಬೀಜ, ಗೊಬ್ಬರ ಅಧಿಕೃತವಾಗಿರಲೇಬೇಕು. ಎಲ್ಲಾ ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಹೊಂದಿರಲೇಬೇಕು.

ಯಾವುದೋ ಒಂದಕ್ಕೆ ಪರವಾನಿಗೆ ಪಡೆದು ಅದರ ಹೆಸರಿನಲ್ಲಿ ಮತ್ತೊಂದು ಉತ್ಪನ್ನ ಮಾರಾಟ ಮಾಡಿದರಾಯಿತು ಎನ್ನುವುದನ್ನು ತಪ್ಪಿಸಬೇಕು. ಇಂತಹ ಕಂಪೆನಿಗಳು ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೇ ನೊಟೀಸ್ ನೀಡಿ, ಕ್ರಿಮಿನಲ್ ಕೇಸ್ ದಾಖಲಿಸಬೇಕು.

ನಿಗದಿತ ಸೂಚಿತ ಪ್ರದೇಶಗಳಲ್ಲಿ ಸೂಚಿಸಿದ ಕಂಪೆನಿ ಮಾರಾಟಗಾರರು ಮಾತ್ರ ಕೃಷಿ ಉತ್ಪನ್ನ, ಬೀಜ ಗೊಬ್ಬರ ಪರವಾನಿಗೆಯುತವಾಗಿ ಮಾರಾಟ ಮಾಡಬೇಕು.ರೈತರಿಗೆ ಇಂತವರಿಂದ ಮೋಸವಾದ ಮೇಲೆ ಎಚ್ಚೆತ್ತುಕೊಂಡು ಪರಿಹಾರ ನೀಡುವುದಕ್ಕಿಂತ “ಪ್ರಿವೆನ್ಷನ್ ಈಸ್ ದ್ಯಾನ್ ಕ್ಯೂರ್ಎಂಬ ಮಾತಿನಂತೆ ರೈತರಿಗೆ ಅನ್ಯಾಯವಾಗುವ ಮೊದಲೇ ಕೃಷಿ ವಿಚಕ್ಷಣಾ ದಳ ಸನ್ನದ್ಧವಾಗಿರಬೇಕು.

ಬ್ರೇಕಿಂಗ್‌: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌: ಜುಲೈ 1ರಿಂದ ವಿದ್ಯುತ್‌ ದರ ಏರಿಕೆ!

ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಬಲಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಿಚಕ್ಷಣಾ ದಳದ ಕಚೇರಿಯನ್ನು ವಿಸ್ತರಿಸಲಾಗಿದ್ದು, ಹೊಸದಾಗಿ ಮೈಸೂರು ಹಾಗೂ ಕಲಬುರಗಿಯಲ್ಲಿ ಕೃಷಿ ವಿಚಕ್ಷಣಾ ದಳದ ನೂತನ ಕಚೇರಿಯನ್ನು ಆರಂಭಿಸಲಾಗುವುದು. ಮುಂದಿನ ಜುಲೈ 5 ರಂದು ಮೈಸೂರಿನಲ್ಲಿ ಕೃಷಿ ವಿಚಕ್ಷಣಾ ದಳದ ನೂತನ ಕಚೇರಿ ಉದ್ಘಾಟನೆಗೊಳ್ಳಲಿದೆ.

ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತರಾದ ಶ್ರೀ ಶರತ್ ಪಿ, ವಿಚಕ್ಷಣಾ ದಳದ ಶ್ರೀ ಅನೂಪ್ ಸೇರಿದಂತೆ ಮತ್ತಿತರೆ ಪ್ರಮುಖರು ಉಪಸ್ಥಿತರಿದ್ದರು.

Published On: 29 June 2022, 03:33 PM English Summary: Strict action against fake seed, fertilizer sellers

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.