News

ಬಸ್‌ಗಳಲ್ಲಿ ವಿದ್ಯಾರ್ಥಿ ಬಸ್‌ಪಾಸ್‌, ರಿಯಾಯಿತಿ ಮುಂದುವರಿಕೆ ಡಿ 31ರವರೆಗೆ ಪ್ರಯಾಣಿಸಲು ಅವಕಾಶ

11 December, 2020 8:59 AM IST By:

ಪ್ರಸಕ್ತ ವರ್ಷದಲ್ಲಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ತಾಂತ್ರಿಕ ಹಾಗೂ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಪ್ರಸಕ್ತ ವರ್ಷದ ಶುಲ್ಕ ಪಾವತಿಸಿದ ರಶೀದಿ ಹಾಗೂ 2019–20ನೇ ಸಾಲಿನ ಹಳೆಯ ಬಸ್ ಪಾಸ್ ತೋರಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಡಿ 31ರವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯ, ಸರ್ಕಾರಿ, ತಾಂತ್ರಿಕ, ಡಿಪ್ಲೊಮಾ, ಅನುದಾನ, ಅನುದಾನ ರಹಿತ ಕಾಲೇಜುಗಳಲ್ಲಿ 2020–21ನೇ ಶೈಕ್ಷಣಿಕ ಚಟುವಟಿಕೆಗಳನ್ನು ನ 17ರಿಂದ ಪ್ರಾರಂಭಿಸಲು ಸರ್ಕಾರ ಆದೇಶಿಸಿದ್ದು, ಆದರೆ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿ, ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಉಚಿತ, ರಿಯಾಯಿತಿ ಬಸ್ ಪಾಸ್‍ಗಳನ್ನು ಪಡೆದಿರುವುದಿಲ್ಲ.

 ಆದ್ದರಿಂದ ಡಿ 31ರವರೆಗೆ ಸಂಸ್ಥೆಯ ಬಸ್‍ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.