ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30ರವರೆಗೆ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಶಾಲೆಗೆ ಹೋಗಬಾರದೆಂದು ಸರ್ಕಾರ ಸ್ಪಷ್ಟಪಡಿಸಿದೆ.
ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಸೆ. 21 ರುಂದ 9 ರಿಂದ 12 ತರಗತಿಯವರೆಗೆ ಶಾಲೆ, ಕಾಲೇಜು ತೆರೆಯುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದೆ. ಆನ್ ಲೈನ್ ಕ್ಲಾಸ್ ನಲ್ಲಿ ಉಂಟಾದ ಸಂದೇಹ ಪರಿಹರಿಸಿಕೊಳ್ಳಲು ಶಾಲಾ ಕಾಲೇಜುಗಳಿಗೆ ವಿದ್ಯಾರ್ತಿಗಳು ಹೋಗಲು ಅವಕಾಶ ನೀಡಲಾಗಿತ್ತು. ಆದರೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವದರಿಂದ ಸೆಪ್ಟೆಂಬರ್ ಅಂತ್ಯದವರೆಗೂ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಭೇಟಿ ನೀಡದಂತೆ ತಿಳಿಸಿದೆ.
ಈ ಸಂಬಂಧ ಶನಿವಾರ ತುರ್ತು ಆದೇಶ ಹೊರಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಪ್ಟೆಂಬರ್ 30ರವರೆಗೆ ಶಾಲಾ ಕಾಲೇಜುಗಳಿಗೆ ಭೇಟಿಗೆ ಅವಕಾಶವಿಲ್ಲ. ಅನಂತರ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
Share your comments