News

ಈ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ದೊರೆಯಲಿದೆ ರೂ 20,000 ದಿಂದ 35,000 ಪ್ರೋತ್ಸಾಹಧನ! ಅರ್ಜಿ ಸಲ್ಲಿಕೆ ಹೇಗೆ ಗೊತ್ತೆ?

07 August, 2022 11:45 AM IST By: Kalmesh T
Students will get an incentive of Rs 20,000 to 35,000

ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ ದೊರೆಯಲಿದೆ 20,000 ದಿಂದ 35,000 ಪ್ರೋತ್ಸಾಹಧನ. ಹೇಗೆ ಪಡೆಯುವುದು ಎನ್ನುವುದನ್ನು ತಿಳಿಯುವುದಕ್ಕೆ ಇದನ್ನು ಓದಿರಿ…

ಇದನ್ನೂ ಓದಿರಿ: ಮೇಕೆದಾಟು ಬಹುಪಯೋಗಿ ಯೋಜನೆ: ಡಿಪಿಆರ್ ತಯಾರಿಸಲು ಅನುಮತಿಗಾಗಿ ಕೇಂದ್ರ ಜಲ ಆಯೋಗಕ್ಕೆ ಸಿಡಬ್ಲ್ಯೂಸಿ ಸಲ್ಲಿಕೆ..

ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ಈ ವಿದ್ಯಾರ್ಥಿಗಳಿಗೆ ಸಿಗಲಿದೆ 20 ರಿಂದ 35 ಸಾವಿರ ಪ್ರೈಜ್ ಮನಿ

ಪ್ರಸಕ್ತ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳೆಗೆ ಅರ್ಜಿ ಸಲ್ಲಿಸಬಹುದಾಗಿದೆ.

2022ನೇ ಶೈಕ್ಷಣಿಕ ವರ್ಷದ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೆಟರ್ನರಿ, ಅಗ್ರಿಕಲ್ಚರ್, ಮೆಡಿಕಲ್ ಕೋರ್ಸ್‌ಗಳಲ್ಲಿ ಎಲ್ಲ ಸೆಮಿಸ್ಟರ್‌ಗಳಲ್ಲಿ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ

ಬಾರಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ಮಂಜೂರಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ರೈತರಿಗೆ ಗುಡ್‌ನ್ಯೂಸ್‌: ರೈತರಿಂದ ಗೋಮೂತ್ರ, ಸಗಣಿ ಖರೀದಿಸಲು ಮುಂದಾದ ಸರ್ಕಾರ! ಬೆಲೆ ಎಷ್ಟು ಗೊತ್ತೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://sw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು 31-10-2022 ಕೊನೆಯ ದಿನವಾಗಿದೆ. ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ದ್ವಿತೀಯ ಪಿಯುಸಿ, 12ನೇ ತರಗತಿಯ ಅಂಕಪಟ್ಟಿ, ವಿದ್ಯಾಭ್ಯಾಸ ಮಾಡಿದ ಕೋರ್ಸಿಗೆ ಸಂಬಂಧಿಸಿದ ಎಲ್ಲಾ ಸೆಮಿಸ್ಟರ್‌ಗಳ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆದಾಯಾ ಪ್ರಮಾಣ ಪತ್ರ, ರಾಷ್ಟ್ರೀಕೃತ ಬ್ಯಾಂಕ್‌ ಖಾತೆ ಸಂಖ್ಯೆ ಮತ್ತು ಆಧಾರ್ ಕಾರ್ಡ್‌ ಸಲ್ಲಿಸಬೇಕು.

ಈ ಎಲ್ಲ ದಾಖಲೆ ಪ್ರತಿಗಳನ್ನು ಸಂಬಂಧಿಸಿದ ಕಾಲೇಜು ಪ್ರಾಂಶುಪಾಲರಿಂದ ದೃಢಿಕರಣ ಮಾಡಿಸಿಕೊಂಡು, ಕಾಲೇಜು ಸಂಸ್ಥೆಗಳು ಯಾವ ತಾಲೂಕಿಗೆ ಸಂಬಂಧಿಸಿರುತ್ತವೆಯೋ ಆಯಾ ತಾಲೂಕು ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಕಛೇರಿಗೆ ಭೇಟಿ ನೀಡಿ ಮೂಲ ದಾಖಲೆಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-249241 ನ್ನು ಸಂಪರ್ಕಿಸಬಹುದಾಗಿದೆ.

ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಉಡುಗೊರೆ; ಈ ಯೋಜನೆಯಡಿ ದೊರೆಯಲಿದೆ ₹1.50 ಲಕ್ಷ! ಯಾರು ಅರ್ಹರು ಗೊತ್ತೆ?

ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ವಿಧಾನ

ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://sw.kar.nic.in/  ಗೆ ಭೇಟಿ ನೀಡಿ.

ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.

ಅಂಕಪಟ್ಟಿ, ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಬುಕ್‌ ಪ್ರತಿ, ಫೋಟೋಗಳನ್ನು ಅಪ್‌ ಲೋಡ್‌ ಮಾಡಿ.

ಅರ್ಜಿ ಸಲ್ಲಿಸದ ಮೇಲೆ ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.

ಪಡಿತರದಾರರ ಗಮನಕ್ಕೆ: ಸೆಪ್ಟೆಂಬರ್‌ನಿಂದ ಸ್ಥಗಿತಗೊಳ್ಳಲಿದೆಯಾ ಉಚಿತ ರೇಷನ್‌ ವಿತರಣೆ?

ಪ್ರೋತ್ಸಾಹಧನದ ವಿವರ

ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್‌ ಡಿಪ್ಲೊಮ ವಿದ್ಯಾರ್ಥಿಗಳಿಗೆ - 20,000

ಪದವಿ ವಿದ್ಯಾರ್ಥಿಗಳಿಗೆ - 25,000

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ - 30,000

ಅಗ್ರಿಕಲ್ಚರ್‌, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ - 35,000