ರಾಜ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಇಲ್ಲಿಯ ವರೆಗೆ 44 ಅರ್ಜಿಗಳು ಸಲ್ಲಿಕೆ ಆಗಿವೆ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ.
ಒಂದೇ ವೇದಿಕೆಯಲ್ಲಿ ಇಬ್ಬರನ್ನು ಮದುವೆಯಾದ ಭೂಪ!
ಹೊಸ ಕಾರ್ಖಾನೆಗಳ ಸ್ಥಾಪನೆಯಿಂದಾಗಿ 15 ಸಾವಿರ ಕೋಟಿ ಹೂಡಿಕೆ ಆಗಲಿದೆ ಎಂದಿದ್ದಾರೆ.
ರಾಜ್ಯದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಕಾರ್ಖಾನೆ ಸ್ಥಾಪನೆಗೆ ಅನುಮತಿ ಕೋರಲಾಗಿದೆ.
ಅರ್ಜಿಗಳನ್ನು ಪರಿಶೀಲನೆ ಮಾಡಿ, ಮುಂದಿನ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಈಗಾಗಲೇ 78 ಸಾವಿರ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಸಕ್ಕರೆ ಕಾರ್ಖಾನೆಯ ರೈತರಿಗೆ
ಬಾಕಿ ಹಣವನ್ನು ಪಾವತಿ ಮಾಡುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!
ಕಬ್ಬು ನಿಯಂತ್ರಣ ಮಂಡಳಿ ಸಭೆ ಇಂದು
ರಾಜ್ಯದಲ್ಲಿ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಹಾಗೂ ಸಕ್ಕರೆ ಕಾರ್ಖಾನೆಯ ಮಾಲೀಕರಿಂದ ಬಾಕಿ ವಸೂಲಿ ಮಾಡಬೇಕು
ಎಂದು ಆಗ್ರಹಿಸಿ ರೈತರು ನಿರಂತರವಾಗಿ ಧರಣಿ ನಡೆಸುತ್ತಿರುವುದರ ನಡುವೆಯೇ ಕಬ್ಬು ನಿಯಂತ್ರಣ ಮಂಡಳಿ ಅಧ್ಯಕ್ಷರ ನೇತೃತ್ವದಲ್ಲಿ ಸೋಮವಾರ ಸಭೆ ಕರೆಯಲಾಗಿದೆ.
ಕರ್ನಾಟಕ ಕಬ್ಬು (ಖರೀದಿ ಮತ್ತು ಸರಬರಾಜು ನಿಯಂತ್ರಣ) (ತಿದ್ದುಪಡಿ) ಅಧಿನಿಯಮ 2014 ರಂತೆ ರಚಿತವಾಗಿರುವ
ಕಬ್ಬು ನಿಯಂತ್ರಣ ಮಂಡಳಿಯ ಸಭೆಗೆ ಹಾಜರಾಗಲು ರೈತ ಮುಖಂಡರಿಗೆ ಆಹ್ವಾನ ನೀಡಲಾಗಿದೆ.
ಕರ್ನಾಟಕ ಕಬ್ಬು (ಖರೀದಿ ಮತ್ತು ಸರಬರಾಜು ನಿಯಂತ್ರಣ) (ತಿದ್ದುಪಡಿ) ಅಧಿನಿಯಮ 2014 ರನ್ವಯ ಸರ್ಕಾರದ ಉಲ್ಲೇಖಿತ
ಆದೇಶಗಳಂತೆ ರಚಿತವಾಗಿರುವ ಕಬ್ಬು ನಿಯಂತ್ರಣ ಮಂಡಳಿಯ ಸಭೆಯನ್ನು ಕಬ್ಬು ನಿಯಂತ್ರಣ ಮಂಡಳಿಯ
ಅಧ್ಯಕ್ಷ ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರ ಅಧ್ಯಕ್ಷತೆಯಲ್ಲಿ
ದಿನಾಂಕ 05.12.2022 ರಂದು ಮಧ್ಯಾಹ್ನ 4ಕ್ಕೆ ಕೊಠಡಿ ಸಂಖ್ಯೆ 317, 3ನೇ ಮಹಡಿ, ವಿಕಾಸಸೌಧದಲ್ಲಿ ನಡೆಯಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
PMFBY | ಬೆಳೆ ಹಾನಿ: ರೈತರಿಗೆ ಫಸಲ್ ಭೀಮಾ ಯೋಜನೆಯಡಿ ₹1,25,662 ಕೋಟಿ ಪಾವತಿ! |Crop Insurance
ಆಹೋರಾತ್ರಿ ಧರಣಿಯಿಂದ ಕಬ್ಬ ಖರೀದಿ ಮಂಡಳಿ ಸಭೆ: ಕುರುಬೂರು ಶಾಂತಕುಮಾರ್
ಕಬ್ಬಿಗೆ ಎಫ್‌ಆರ್‌ಬಿ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ
ನಿರಂತರವಾಗಿ 13ದಿನ ಪ್ರತಿಭಟನೆ ನಡೆಸಿದ ಫಲವಾಗಿ ಕಬ್ಬು ಮಂಡಳಿ ಸಭೆಯನ್ನು ಕರೆಯಲಾಗಿದೆ
ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
PmKisan | ಪಿ.ಎಂ ಕಿಸಾನ್ ಸಮ್ಮಾನ್ 13ನೇ ಕಂತಿನ ಹಣಕ್ಕೆ ಕ್ಷಣಗಣನೆ!
ಕಬ್ಬು ಎಫ್ ಆರ್ ಪಿ ದರ ಎರಿಕೆ, ರಾಜ್ಯ ಸಲಹಾ ಬೆಲೆ ನಿಗದಿ, ಕಬ್ಬಿನಿಂದ ಬರುವ ಇತರೆ ಉತ್ಪನ್ನಗಳ ಲಾಭ ಹಂಚಿಕೆ ಮಾಡಿ
ಕಬ್ಬು ಕಟಾವು ಸಾಗಾಣಿಕೆ ವೆಚ್ಚ ಲಗಾಣಿ ಸುಲಿಗೆ ತಪ್ಪಿಸಿ, ಕಬ್ಬಿನ ತೂಕದಲ್ಲಿ ಮೋಸ, ಸಕ್ಕರೆ ಇಳುವರಿಯಲ್ಲಿ ಮೋಸ ತಪ್ಪಿಸಬೇಕು
ಎಂದು ಆಗ್ರಹಿಸಿ 13 ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ
ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಕ್ಕರೆ ಸಚಿವರ ಅಧ್ಯಕ್ಷತೆಯಲ್ಲಿ ಕಬ್ಬು ಖರೀದಿ ಮಂಡಳಿ ಸಭೆ ಕರೆದಿದ್ದಾರೆ ಎಂದು ಹೇಳಿದ್ದಾರೆ.
ರೈತ ಮುಖಂಡರನ್ನು ಬಂಧಿಸಿ ರಾತ್ರಿ ಬಿಡುಗಡೆಗೊಳಿಸಿದ ಪೊಲೀಸರು ರೈತರನ್ನು ಸಮಾಧಾನಪಡಿಸಿ ಮುಖ್ಯಮಂತ್ರಿ ಜೊತೆ
ಚರ್ಚೆಗೆ ಅವಕಾಶ ಕಲ್ಪಿಸುವ ಭರವಸೆ ನೀಡಿದರು ಅದು ಹುಸಿಯಾದ ಕಾರಣ ಚಳುವಳಿ ತೀವ್ರಗೊಳಿಸಲು ಕರೆ ನೀಡಲಾಗಿದೆ.
6ನೇ ತಾರೀಖಿನಿಂದ ಧರಣಿ ನಿರತ ಸ್ಥಳದಲ್ಲಿ ಕೆಲವು ರೈತರು ಸರದಿ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ.
ರಾಜ್ಯದ ಕಬ್ಬು ಬೆಳೆಗಾರ ರೈತರು ನಾಳೆ ಬಿಜೆಪಿ ಶಾಸಕರು ಸಂಸದರ ಮನೆ ಅಥವಾ ಕಚೇರಿ ಮುಂದೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಕಬ್ಬು ಬೆಳೆಗಾರರು ನಿರಂತರ ಹೋರಾಟ ನಡೆಸುತ್ತಿದ್ದರು ಸರ್ಕಾರ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಳ್ಳದೆ ಇದ್ದ ಕಾರಣ ರೈತರು ಆಕ್ರೋಶಗೊಂಡಿದ್ದರು.
Share your comments