1. ಸುದ್ದಿಗಳು

ಮಧುವನ ಮತ್ತು ಜೇನು ಸಾಕಾಣಿಕೆ ಅಭಿವೃದ್ಧಿ ಯೋಜನೆಯಡಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಚಾಮರಾಜನಗರ ತೋಟಗಾರಿಕೆ ಇಲಾಖೆಯ ವತಿಯಿಂದ ಮಧುವನ ಮತ್ತು ಜೇನು ಸಾಕಾಣಿಕೆ ಅಭಿವೃದ್ಧಿ ಯೋಜನೆಯಡಿ ಸಹಾಯಧನ ನೀಡಲು ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಡಿಮೆ ಬಂಡವಾಳದಿಂದ ನಿರ್ವಹಣೆ ಮಾಡಬಹುದಾದ ಲಾಭದಾಯಕ ಉದ್ದಿಮೆಯಾಗಿದೆ. ಈ ಉದ್ದಿಮೆಯು ಕೃಷಿ, ತೋಟಗಾರಿಕೆ, ಕೃಷಿ ಅರಣ್ಯ, ಕೃಷಿ ಪಶುಪಾಲನೆ, ಸಮ್ಮಿಶ್ರ ಕೃಷಿ ಪದ್ಧತಿಗಳ ಸಂಪನ್ಮೂಲಗಳಿಗೆ ಸ್ಪರ್ಧೆಯೊಡ್ಡಿದೆ. ನಿಸರ್ಗದಲ್ಲಿ ವ್ಯರ್ಥವಾಗಬಹುದಾದ ಸಂಪನ್ಮೂಲಗಳಾದ ಪರಾಗ ಮತ್ತು ಮಕರಂದವನ್ನು  ಬಳಿಸಿಕೊಂಡು ಕೃಷಿಕರಿಗೆ  ಲಾಭ ತಂದುಕೊಡಲಿದೆ.

ಜೇನು ಕೃಷಿಯು ಸುಲಭ ತಾಂತ್ರಿಕತೆಯಿಂದ ಕೂಡಿದೆ. ಜೇನು ನೊಣಗಳು ಪರಾಗಸ್ಪರ್ಶದ ಮೂಲಕ ಹಲವಾರು ತೋಟಗಾರಿಕೆ ಬೆಳೆಗಳಿಗೆ ಉತ್ಪಾದನೆಯ ಹೆಚ್ಚಳಕ್ಕೆ ಕಾರಣವಾಗಿ, ಪರೋಕ್ಷವಾಗಿ ರೈತರ ಆದಾಯ ಹೆಚ್ಚಿಸುತ್ತದೆ.

ಜೇನು ನೊಣಗಳ ಉಪಸ್ಥಿತಿಯಿಂದಾಗಿ ಇಳುವರಿಯು ಶೇಕಡವಾರು ಶೇಕಡವಾರು 20 ರಿಂದ 80ರವರೆಗೆ ಹೆಚ್ಚಾಗುವುದು ದೃಢಪಟ್ಟಿದೆ. ತೋಟಗಾರಿಕೆ ಬೆಳೆಗಳಾದ ಸೌತೆ, ಕುಂಬಳ ಶೇ. 40, ದ್ರಾಕ್ಷಿ ಶೇ. 35, ಸೀಬೆ ಶೇ. 40, ಟೊಮ್ಯಾಟೊ ಶೇ. 25, ಕಲ್ಲಂಗಡಿ ಶೇ. 80, ತೆಂಗು, ಮಾವು, ಅಡಿಕೆ ಬೆಳೆಗಳಲ್ಲಿ ಶೇ. 20 ರಷ್ಟು ಅಧಿಕ ಇಳುವರಿ ಪಡೆಯಬಹುದು. ಆಸಕ್ತ ರೈತರು ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರಿಗೆ ಬೆಳೆ ಸ್ಪರ್ಧೆ ಗೆ ಅರ್ಜಿ ಆಹ್ವಾನ

ದಾವಣಗೆರೆ ಕೃಷಿ ಇಲಾಖೆಯು ಪ್ರಸಕ್ತ ಸಾಲಿಗೆ ಗೊತ್ತುಪಡಿಸಿದ ಬೆಳೆಗಳಲ್ಲಿ ಅತ್ಯುತ್ತಮ ಇಳುವರಿ ಪಡೆಯುವ ರೈತರಿಗಾಗಿ ಬೆಳೆ ಸ್ಪರ್ಧೆಗೆ ಆಹ್ವಾನಿಸಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದು.

ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ 30 ಸಾವಿರ ರೂಪಾಯಿ, ದ್ವಿತೀಯ ಬಹುಮಾನ 25 ಸಾವಿರ ರೂಪಾಯಿ, ತೃತೀಯ ಬಹುಮಾನ 20 ಸಾವಿರ ರೂಪಾಯಿ, ತಾಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ 15 ಸಾವಿರ ರೂಪಾಯಿ, ದ್ವಿತೀಯ ಬಹುಮಾನ 10 ಸಾವಿರ ಹಾಗೂ ತೃತೀಯ ಬಹುಮಾನ 5 ಸಾವಿರ ರೂಪಾಯಿ ನಿಗದಿಪಡಿಸಲಾಗಿದೆ.

ಗೊತ್ತುಪಡಿಸಿದ ಬೆಳೆ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲೆಯ ಆಯಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬೇಕೆಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published On: 29 July 2021, 04:10 PM English Summary: subsidy for beekeeping

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.