1. ಸುದ್ದಿಗಳು

ಬ್ಯಾಡಗಿ ಮೆಣಸಿನಕಾಯಿ ಸಂಸ್ಕರಣಾ ಘಟಕಗಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನ

‘ಒಂದು ಜಿಲ್ಲೆ ಒಂದು ಉತ್ಪನ್ನ’ ಆಧಾರದ ಮೇಲೆ ಗದಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಘಟಕಗಳಿಗೆ ಗುರಿ ನಿಗದಿಪಡಿಸಲಾಗಿದ್ದು, ಪ್ರತಿ ಘಟಕಕ್ಕೆ 10 ಲಕ್ಷ ಕ್ರೆಡಿಟ್ ಲಿಂಕ್ ಆಧಾರದ ಮೇಲೆ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರವು ಜಾರಿಗೆ ತಂದ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಧನ ಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಬ್ಯಾಡಗಿ ಮೆಣಸಿನಕಾಯಿ ಸಂಸ್ಕರಣಾ ಘಟಕಗಳಿಗೆ ಬೆಳೆಯ ವರ್ಗೀಕರಣ, ಶ್ರೇಣೀಕರಣ, ಬ್ರ್ಯಾಂಡಿಂಗ್, ಲೆಬಲಿಂಗ್ ಮಾರುಕಟ್ಟೆಯ ಬೆಂಬಲ ಮತ್ತು ರಫ್ತು ಪ್ರೋತ್ಸಾಹ ಮಾಡುವ ಮೂಲಕ ಅಂತಹ ವ್ಯಕ್ತಿ ಅಥವಾ ಸಂಸ್ಥೆಗಳನ್ನು ಉದ್ದಿಮೆದಾರರಾಗಿ ರೂಪಿಸಲು ಯೋಜಿಸಲಾಗಿದೆ.

ಜಿಲ್ಲೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಸಂಸ್ಕರಣ ಕಾರ್ಯದಲ್ಲಿ ನಿರತವಾಗಿರುವ ಸಹಕಾರ ಸಂಘಗಳು, ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಮತ್ತು ಸಾಮಾನ್ಯ ಸೌಕರ್ಯ ಒದಗಿಸುವ ಸಂಸ್ಥೆಗಳು ಇದರ ಪ್ರಯೋಜನ ಪಡೆಯಲು  ಅರ್ಜಿ ಸಲ್ಲಿಸಬಹುದಾಗಿದೆ.

ವಿವರಗಳಿಗೆ ಸಮೀಪದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಉಪ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಎಸ್.ವ್ಹಿ. ಗಳಗಿ 96635 79897, ರಾಧಾಕೃಷ್ಣ ಆರ್.ಎ. 94804 86669 ಗೆ ಸಂಪರ್ಕಿಸಲು ಕೋರಲಾಗಿದೆ.

Published On: 23 January 2021, 07:58 AM English Summary: subsidy for micro food processing industry

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.