1. ಸುದ್ದಿಗಳು

ದಿಢೀರ್‌ ಬೆಳವಣಿಗೆ: ಕಾಂಗ್ರೆಸ್‌ ಶಾಸಕ 14 ದಿನ ನ್ಯಾಯಾಂಗ ಬಂಧನಕ್ಕೆ!

Hitesh
Hitesh
Sudden development: Congress MLA to judicial custody for 14 days!

 ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಶಾಸಕನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಹೌದು ಕಾಂಗ್ರೆಸ್‌ ಶಾಸಕರೊಬ್ಬರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್‌ ಆದೇಶ ನೀಡಿದೆ.

ಹರಿಯಾಣದ ನೂಹ್ ಜಿಲ್ಲೆಯಲ್ಲಿ ಈಚೆಗೆ ನಡೆದ ಕೋಮುಗಲಭೆಯ ಪ್ರಕರಣದಲ್ಲಿ ಆರೋಪಿಯಾಗಿರುವ

ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಭಾರೀ ಸಂಚಲನ ಮೂಡಿಸಿದೆ.

ಕಾಂಗ್ರೆಸ್‌ ಶಾಸಕರು ಕೋಮುಗಲಭೆ ನಡೆದ ಸಂದರ್ಭದಲ್ಲಿ ಕೋಮುಗಲಭೆಗೆ ಕುಮ್ಮಕ್ಕು ನೀಡಿದ್ದರು ಎನ್ನುವ ಆರೋಪ ಅವರ ಮೇಲೆ ಇದೆ.  

ಇದೇ ಕಾರಣಕ್ಕಾಗಿ ಆರೋಪಿಸಿ ಮಮ್ಮನ್ ಖಾನ್ ಅವರ ವಿರುದ್ಧ ಆಗಸ್ಟ್ 1ರಂದು ಪ್ರತ್ಯೇಕ ಪ್ರಕರಣಗಳು ದಾಖಲಿಸಿಕೊಳ್ಳಲಾಗಿತ್ತು.

ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 14 ತಡರಾತ್ರಿ ರಾಜಸ್ಥಾನದಲ್ಲಿ  ಕಾಂಗ್ರೆಸ್‌ ಶಾಸಕನನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದರು.  

ವಿಚಾರಣೆಯನ್ನು ನಡೆಸಿದ್ದ ಪೊಲೀಸರು 5 ದಿನಗಳ ಕಾಲ ಅವರನ್ನು ವಿಚಾರಣೆಗೆ ಒಪ್ಪಿಸುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.  

ಎರಡು ದಿನಗಳ ಕಾಲ ವಶಕ್ಕೆ ಪಡೆಯುವಂತೆ ಮೊದಲು ನ್ಯಾಯಾಲಯ ಸೂಚನೆ ನೀಡುತ್ತು.

ಆದರೆ, ಈ ಸಂದರ್ಭದಲ್ಲಿ (ವಿಚಾರಣೆಯನ್ನು ನಡೆಸುವ ಸಂದರ್ಭದಲ್ಲಿ)  ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಲಾಗಿತ್ತು.

ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೂರಿದ್ದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಹಿನ್ನೆಲೆ ಏನು

ಹರಿಯಾಣದ ನೂಹ್ ಜಿಲ್ಲೆಯಲ್ಲಿ 2023ರ ಜುಲೈ 31ರಂದು ವಿಶ್ವ ಹಿಂದೂ ಪರಿಷತ್‌ ಮೆರವಣಿಗೆಯೊಂದನ್ನು ಆಯೋಜಿಸಿತ್ತು.

ಈ ಸಂದರ್ಭದಲ್ಲಿ ಎರಡು ಕೋಮುಗಳ ನಡುವೆ ಗಲಭೆ ಸೃಷ್ಟಿಯಾಗಿತ್ತು.

ಅಲ್ಲದೇ ಗಲಭೆಯಲ್ಲಿ ಆರು ಜನ ಸಾವನ್ನಪ್ಪಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದರು.   

Published On: 19 September 2023, 02:38 PM English Summary: Sudden development: Congress MLA to judicial custody for 14 days!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.